Monday, June 1, 2026
26.1 C
Belagavi

ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲು ನೀಡುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

 

ಮೈಸೂರು : ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು.

ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ.. ಸತ್ತವರು ಹೆಚ್ಚಾಗಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿದ್ದರು ಹಾಗಾಗಿ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸರ್ಕಾರ ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಎಂದರು.

ವಿರೋಧಪಕ್ಷದವರ ಒತ್ತಡದಿಂದ ಪ್ರಧಾನಿಗಳು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ..

ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಆಯ್ಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ವಿರೋಧಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ವಿಳಂಬವಾಗುತ್ತಿಲ್ಲ.. ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ವಿಳಂಬವಾಗುತ್ತಿಲ್ಲ. ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.

ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ.. ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿ ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೋಲಿಸಿನವರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ.. ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದರು. ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.

ರಾಜಕಾರಣಕ್ಕಾಗಿ ಆಕ್ಷೇಪ.. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು 2010 ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದರು.

ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು.. ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಎಂದರು.

ಜಾತಿ ಗಣತಿ: ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು..

ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img