Saturday, April 11, 2026
36.1 C
Belagavi

ಸತ್ತಿ ಪರೀಕ್ಷಾ ಕೇಂದ್ರದಲ್ಲಿ 322 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ

advertisement

spot_img

ಸತ್ತಿ ಪರೀಕ್ಷಾ ಕೇಂದ್ರದಲ್ಲಿ 322 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ
ಅಥಣಿ: 2025-26 ನೆಯ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಯಲು ಉನ್ನತ ಅಧಿಕಾರಿಗಳ ಮಾರ್ಗದರ್ಶನದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸತ್ತಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಕುಮಾರಸ್ವಾಮಿ ಮಠ ಹೇಳಿದರು.ತಾಲ್ಲೂಕಿನ ಸತ್ತಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ಮಾಹಿತಿ ನೀಡಿದ ಅವರು 2025 – 26ನೆಯ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 322 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಅದರಲ್ಲಿ 171 ಗಂಡು ಮಕ್ಕಳು ಹಾಗೂ 151 ಹೆಣ್ಣು ಮಕ್ಕಳು ಪರೀಕ್ಷೆಗೆ ಕೂಡಲಿದ್ದಾರೆ. ಸ್ಥಳೀಯ ಸರ್ಕಾರಿ ಪ್ರೌಢಶಾಲೆ, ಜಿ ಎನ್ ಕೆ ಪ್ರೌಢಶಾಲೆ, ಶರಣ ಬಸವೇಶ್ವರ ಪ್ರೌಢಶಾಲೆ ಹಾಗೂ ಪದ್ಮಾವತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ನಿಯೋಜನೆಗೊಂಡಿರುವ ಮೇಲ್ವಿಚಾರಕರ ಸಭೆಯನ್ನು ಮಾಡಿ ಸಲಹೆ ಸೂಚನೆ ನೀಡಲಾಗಿದೆ. ಪರೀಕ್ಷೆ ಬರೆಯಲಿರುವ ಎಲ್ಲ ಕೊಠಡಿಗಳಿಗೂ ಸಿ ಸಿ ಕ್ಯಾಮೆರಾ ಅಳವಡಿಸಲಾಗಿದೆ. ಕುಡಿಯಲು ಶುದ್ಧ ನೀರು ಸೇರಿದಂತೆ ಪರೀಕ್ಷೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು ಅಚ್ಚುಕಟ್ಟಾಗಿ ಪರೀಕ್ಷೆ ಬರೆಯಬೇಕೆಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪರೀಕ್ಷಾ ಕಸ್ಟೋಡಿಯನ್ ಎಸ್. ಸಿ. ಬಿದರಿ ಸೇರಿದಂತೆ ಇತರರು ಇದ್ದರು.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img