Saturday, April 11, 2026
27.1 C
Belagavi

ಬೆಳಗಾವಿ ಜಿಲ್ಲೆಗೆ ಆರೋಗ್ಯ ಇಲಾಖೆಯಿಂದ 330 ಕೋಟಿ ಅನುದಾನ – ಸಚಿವ ದಿನೇಶ ಗುಂಡೂರಾವ್

advertisement

spot_img

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ 100 ಹಾಸಿಗೆಗಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಶಾಸಕ ಅಶೋಕ ಪಟ್ಟಣ ಅವರ ನಿರಂತರ ಪ್ರಯತ್ನದಿಂದ ಈ ಆಧುನಿಕ ಆಸ್ಪತ್ರೆ ಮಂಜೂರಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಘಟಕದಿಂದ ರಾಜಕೀಯ ಜೀವನ ಆರಂಭಿಸಿ ದೀರ್ಘ ಅನುಭವ ಹೊಂದಿರುವ ಅವರು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ.
ಮುಖ್ಯಮಂತ್ರಿಗಳೊಂದಿಗೆ ಸಮನ್ವಯ ಹೊಂದಿರುವುದರಿಂದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರಕ್ಕೆ ತರಲು ಸಾಧ್ಯವಾಗಿದೆ ಎಂದು ಶ್ಲಾಘಿಸಿದರು.ವಿರೋಧ ಪಕ್ಷಗಳು ಸರ್ಕಾರದ ಬಳಿ ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿವೆ ಎಂದು ಟೀಕಿಸಿದ ಸಚಿವರು, ಸರ್ಕಾರವು ಜನರಿಗೆ 55 ಸಾವಿರ ಕೋಟಿ ರೂ. ಅನುದಾನ ನೀಡಿದ್ದು, ಜನಪರ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಂದೇ ದಿನ ಮೂರು ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಬೈಲಹೊಂಗಲದಲ್ಲಿ 25 ಕೋಟಿ ರೂ. ವೆಚ್ಚದ ತೀವ್ರ ನಿಗಾ ಘಟಕದ ಆಸ್ಪತ್ರೆ, ಸವದತ್ತಿಯಲ್ಲಿ 100 ಹಾಸಿಗೆಗಳ ಆಸ್ಪತ್ರೆ, ರಾಮದುರ್ಗದಲ್ಲಿ 33 ಕೋಟಿ ರೂ.

ವೆಚ್ಚದ ತಾಲೂಕು ಆಸ್ಪತ್ರೆ ಹಾಗೂ ಕಿತ್ತೂರಿನಲ್ಲಿ 33 ಕೋಟಿ ರೂ. ವೆಚ್ಚದ 100 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ಆರಂಭಗೊಂಡಿದೆ. ಖಾನಾಪುರದಲ್ಲಿ 100 ಹಾಸಿಗೆಗಳ ಆಸ್ಪತ್ರೆ, ಅಥಣಿಯಲ್ಲಿ ಎಂಸಿಎಚ್ ಆಸ್ಪತ್ರೆ ಕಾಮಗಾರಿ ನಡೆಯುತ್ತಿದ್ದು, ಗೋಕಾಕನಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಒಟ್ಟಾರೆ ಬೆಳಗಾವಿ ಜಿಲ್ಲೆಗೆ ಆರೋಗ್ಯ ಇಲಾಖೆಯಿಂದ 330 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.ಹಿಂದಿನ ಸರ್ಕಾರದಲ್ಲಿ ಇಷ್ಟೊಂದು ಕಾಮಗಾರಿಗಳು ನಡೆದಿಲ್ಲ ಎಂದು ಟೀಕಿಸಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 500 ಹೊಸ ಬಸ್‌ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಬಾಣಂತಿಯರ ಸಾವನ್ನು ಶೂನ್ಯಕ್ಕೆ ಇಳಿಸಲು ವಿಶೇಷ ಅಭಿಯಾನ ಆರಂಭಿಸಲಾಗಿದೆ. 100 ಕೋಟಿ ಜನರ ತಪಾಸಣೆ ನಡೆಸಲಾಗಿದೆ. ಡಯಾಲಿಸಿಸ್‌ ಸೇವೆಗಳನ್ನು ಜಾರಿಗೆ ತರಲಾಗಿದೆ. ಆಶಾಕಿರಣ ಯೆ ಗೆ ಸೇರಿದಂತೆ ಹಲವು ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಶೋಕ್ ಪಟ್ಟಣವರು ಮಾತನಾಡಿ, 33 ಕೋಟಿ ರೂ. ವೆಚ್ಚದ ಈ ಆಸ್ಪತ್ರೆಯಿಂದ ಉತ್ತಮ ಮೂಲಸೌಕರ್ಯ ಮತ್ತು ಗುಣಮಟ್ಟದ ಚಿಕಿತ್ಸೆ ಸ್ಥಳೀಯರಿಗೆ ಸಮೀಪದಲ್ಲೇ ಲಭ್ಯವಾಗಲಿದೆ. ಗ್ರಾಮೀಣ ಜನರಿಗೆ ತುರ್ತು ಸಂದರ್ಭಗಳಲ್ಲಿ ದೂರ ಪ್ರಯಾಣಿಸುವ ಅವಶ್ಯಕತೆ ಕಡಿಮೆಯಾಗಲಿದೆ ಎಂದು ಹೇಳಿದರು.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img