Tuesday, February 10, 2026
31.1 C
Belagavi

ದಾವೋಸ್: ರಾಜ್ಯದಲ್ಲಿ ಡೇಟಾ ಕೇಂದ್ರ ಸ್ಥಾಪನೆಗೆ ಸಿಫಿ, ಭಾರತಿ ಒಲವು: ಎಂ ಬಿ ಪಾಟೀಲ

advertisement

spot_img

ದಾವೋಸ್: ರಾಜ್ಯದಲ್ಲಿ ಡೇಟಾ ಕೇಂದ್ರ ಸ್ಥಾಪನೆಗೆ ಸಿಫಿ, ಭಾರತಿ ಒಲವು: ಎಂ ಬಿ ಪಾಟೀಲಕಂಪನಿಗಳ ಜತೆಗಿನ ಚರ್ಚೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಸಿಫಿ ಟೆಕ್ನಾಲಜೀಸ್ ಮತ್ತು ಭಾರತಿ ಎಂಟರ್ಪ್ರೈಸಸ್ ರಾಜ್ಯದ ದ್ವಿತೀಯ ಸ್ತರದ ನಗರಗಳಲ್ಲಿ ಡೇಟಾ ಕೇಂದ್ರಗಳನ್ನು ತೆರೆಯಲು ಆಸಕ್ತಿ ವ್ಯಕ್ತಪಡಿಸಿದೆ. ಜತೆಗೆ ಪಾನೀಯ ತಯಾರಿಕೆ ವಲಯದಲ್ಲಿ ಕಾರ್ಲ್ಸ್ ಬರ್ಗ್ ಗ್ರೂಪ್ ರಾಜ್ಯದಲ್ಲಿ 350 ಕೋಟಿ ರೂ. ಹೂಡಿಕೆಯೊಂದಿಗೆ ಬಾಟ್ಲಿಂಗ್ ಘಟಕ ಸ್ಥಾಪಿಸುವ ಬದ್ಧತೆಯನ್ನು ಪುನರುಚ್ಚರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಸ್ವಿಟ್ಜರ್ಲೆಂಡಿನ ದಾವೋಸ್ ನಗರದಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್) ಸಮಾವೇಶದ ಮೂರನೆಯ ದಿನವಾದ ಬುಧವಾರ ಅವರು ಹಲವು ಕಂಪನಿಗಳ ಜೊತೆ ಬಂಡವಾಳ ಹೂಡಿಕೆ ಮತ್ತು ವಿಸ್ತರಣೆ ಸಂಬಂಧ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಿದರು. ಈ ಪೈಕಿ ಭಾರತಿ ಎಂಟರ್ಪ್ರೈಸಸ್ ಉಪಾಧ್ಯಕ್ಷ ರಾಜನ್ ಭಾರತಿ ಮಿತ್ತಲ್ ಜತೆಗಿನ ಮಾತುಕತೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಪಾಲ್ಗೊಂಡಿದ್ದರು.

ಉದ್ಯಮಿಗಳ ಜತೆಗಿ‌‌ನ ಸಭೆಗಳ ಬಗ್ಗೆ ಮಾಹಿತಿ ನೀಡಿರುವ ಸಚಿವ ಪಾಟೀಲರು, ಬೆಂಗಳೂರಿನಲ್ಲಿರುವ ಹಲವು ಡೇಟಾ ಕೇಂದ್ರಗಳಲ್ಲಿ ಸಿಫಿ ಟೆಕ್ನಾಲಜೀಸ್ ಈಗಾಗಲೇ ಸಾಕಷ್ಟು ಹೂಡಿಕೆ ಮಾಡಿದ್ದು, ಡಿಜಿಟಲ್ ಮೂಲಸೌಕರ್ಯ ಅಭಿವೃದ್ಧಿಗೆ ಕೊಡುಗೆ ನೀಡಿದೆ. ಅದು ಅಭಿವೃದ್ಧಿ ಪಡಿಸಿರುವ ಡೇಟಾ ಕೇಂದ್ರ ಉದ್ಘಾಟನೆಗೆ ಸಿದ್ಧವಾಗಿದ್ದು, ಎರಡನೇ ಸ್ತರದ ನಗರಗಳ ಮೇಲೂ ಅದು ಆಸಕ್ತಿ ತಾಳಿದೆ. ಈ ನಿಟ್ಟಿನಲ್ಲಿ ಅದು ಸಂಪರ್ಕ ವ್ಯವಸ್ಥೆ ಮತ್ತು ಭೂಮಿಯ ಲಭ್ಯತೆ ಇತ್ಯಾದಿಗಳ ಬಗ್ಗೆ ಚರ್ಚಿಸಿದೆ ಎಂದಿದ್ದಾರೆ.

ಭಾರತಿ ಎಂಟರ್ಪ್ರೈಸಸ್ ರಾಜ್ಯದಲ್ಲಿ ಇದುವರೆಗೆ 13 ಸಾವಿರ ಕೋಟಿ ರೂ. ಹೂಡಿಕೆ ಮಾಡಿದೆ. ಇದೂ ಸಹ ರಾಜ್ಯದಲ್ಲಿ ಮತ್ತೊಂದು ಡೇಟಾ ಕೇಂದ್ರ ಸ್ಥಾಪಿಸುವ ಒಲವು ಹೊಂದಿದ್ದು, ಮಾತುಕತೆಯ ಸಂದರ್ಭದಲ್ಲಿ ಪ್ರಸ್ತಾಪವಾಗಿದೆ. ಫೊರ್ಜಿಂಗ್ ಮತ್ತು ಪ್ರಿಸಿಷನ್ ಎಂಜಿನಿಯರಿಂಗ್ ಕಂಪನಿಯಾಗಿರುವ ಭಾರತ್ ಫೋರ್ಜ್ ಲಿಮಿಟೆಡ್ ಕೂಡ ರಾಜ್ಯದಲ್ಲಿ ಮತ್ತಷ್ಟು ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ನಮ್ಮಿಂದ ಮಾಹಿತಿ ಪಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಫ್ರಾನ್ಸ್ ಮೂಲದ ಎಐ ಕಂಪನಿ ಮಿಸ್ಟ್ರಾಲ್ ಎಐ, ಬೆಂಗಳೂರಿನಲ್ಲಿ ಹಂತಹಂತವಾಗಿ ತನ್ನ ಜಿಸಿಸಿ/ ಆರ್ & ಡಿ ಕೇಂದ್ರವನ್ನು ಅಭಿವೃದ್ಧಿಪಡಿಸಲು ಉತ್ಸುಕವಾಗಿದೆ. ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳಿಗೆ ಹೆಸರಾಗಿರುವ ಅಮೆರಿಕ ಮೂಲದ ಫಿಲಿಪ್ ಮಾರಿಸ್ ಕಂಪನಿ ಕೂಡ ರಾಜ್ಯದಲ್ಲಿ ಹೂಡಿಕೆ ಮಾಡಿ, ಧೂಮರಹಿತ ಉತ್ಪನ್ನಗಳನ್ನು ತಯಾರಿಸುವ ಇಚ್ಛೆಯನ್ನು ಹಂಚಿಕೊಂಡಿದೆ. ಬೆಲ್ ರೈಸ್ ಕಂಪನಿ ಕೂಡ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಯಸಿದೆ ಎಂದು ಪಾಟೀಲ ನುಡಿದಿದ್ದಾರೆ.

ಕ್ವಿನ್ ಸಿಟಿಯಲ್ಲಿ ಇಂಪೀರಿಯಲ್ ಕಾಲೇಜಿನ ಆರ್ & ಡಿ ಕೇಂದ್ರ (ಬಾಕ್ಸ್)

ಲಂಡನ್ನಿನ ಅಗ್ರಗಣ್ಯ ವಿ.ವಿ.ಗಳಲ್ಲಿ ಒಂದಾಗಿರುವ ಇಂಪೀರಿಯಲ್ ಕಾಲೇಜು, ಡಾಬಸಪೇಟೆ-ದೊಡ್ಡಬಳ್ಳಾಪುರದ ಮಧ್ಯೆ ಅಸ್ತಿತ್ವಕ್ಕೆ ಬರುತ್ತಿರುವ ಕ್ವಿನ್ ಸಿಟಿಯಲ್ಲಿ ತನ್ನ ಸಂಶೋಧನಾ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರವನ್ನು ಆರಂಭಿಸುವ ಕುರಿತು ಮಾತುಕತೆ ನಡೆಸಿದೆ. ಇಂಪೀರಿಯಲ್ ಕಾಲೇಜು ಈಗಾಗಲೇ ಬೆಂಗಳೂರಿನಲ್ಲಿ ಇನ್ನೋವೇಶನ್ ಹಬ್ ಹೊಂದಿದ್ದು, ಭಾರತೀಯ ವಿಜ್ಞಾನ ಸಂಸ್ಥೆಯೊಂದಿಗೆ ಸಹಭಾಗಿತ್ವ ಹೊಂದಿದೆ. ಅದು ವಿಜ್ಞಾನ, ಎಂಜಿನಿಯರಿಂಗ್, ಔಷಧ ವಿಜ್ಞಾನ ಮತ್ತು ಬಿಝಿನೆಸ್ ವಿಚಾರಗಳ ಕಲಿಕೆಯಲ್ಲಿ ಉನ್ನತ ಮಟ್ಟದಲ್ಲಿದ್ದು, ನಮ್ಮಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಮತ್ತಷ್ಟು ಸಹಯೋಗದ ಮೂಲಕ ಸಂಶೋಧನಾ ಚಟುವಟಿಕೆ ನಡೆಸಲು ತುದಿಗಾಲಲ್ಲಿ ನಿಂತಿದೆ. ಆ ವಿ.ವಿ.ಯ ಮುಖ್ಯಸ್ಥ ಪ್ರೊ.ಹಗ್ ಬ್ರಾಡಿ ಅವರು ಲಂಡನ್ನಿನಲ್ಲಿರುವ ಕ್ಯಾಂಪಸ್ಸಿಗೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ ಎಂದು ಪಾಟೀಲ ತಿಳಿಸಿದ್ದಾರೆ

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img