Monday, June 1, 2026
26.1 C
Belagavi

ಹಣಕಾಸು ಆಯೋಗದ ಅನುದಾನ ಬಿಡುಗಡೆ ಮಾಡಲು ಕೋರಿ ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ

advertisement

spot_img

ಹಣಕಾಸು ಆಯೋಗದ ಅನುದಾನ ಬಿಡುಗಡೆಯಲ್ಲಿ ನಿರಂತರ ವಿಳಂಬ
ಬಿಡುಗಡೆ ಮಾಡಲು ಕೋರಿ ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ

ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ ಕೇಂದ್ರ ಸರ್ಕಾರದಿಂದ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಗಮನಹರಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರಿಗೆ ಪತ್ರ ಬರೆದು ಕೋರಿದ್ದಾರೆ.

2025–26ನೇ ಹಣಕಾಸು ವರ್ಷದ 15 ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಯಲ್ಲಿನ ನಿರಂತರ ವಿಳಂಬದ ಕುರಿತು 2025ರ ಡಿಸೆಂಬರ್ 08ರಂದು ಬರೆದ ಪತ್ರವನ್ನು ನೆನಪಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು 2025ರ ಆಗಸ್ಟ್ ತಿಂಗಳಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಗಳನ್ನು (GPDP ಗಳು) ಸಕಾಲಿಕವಾಗಿ ಅಪ್ಲೋಡ್ ಮಾಡಿರುವುದನ್ನು ಖಚಿತಪಡಿಸಿಕೊಂಡು ರಾಜ್ಯ ಸರ್ಕಾರವು 2025ರ ಜುಲೈ 08 ಮತ್ತು ಸೆಪ್ಟೆಂಬರ್ 24ರಂದು ಅಗತ್ಯವಿರುವ ಅನುದಾನ ವರ್ಗಾವಣೆ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದರೂ ಸಹ ಕೇಂದ್ರ ಸರ್ಕಾರ ಅನುದಾನ ನೀಡುವುದನ್ನು ವಿಳಂಬ ಮಾಡಿದೆ ಎಂಬ ಅಂಶವನ್ನು ಪತ್ರದಲ್ಲಿವಿವರಿಸಿದ್ದಾರೆ.

ಗ್ರಾಮ ಪಂಚಾಯಿತಿಗಳ ಪ್ರಸ್ತುತ ಅವಧಿ 2026ರ ಜನವರಿ-ಫೆಬ್ರವರಿ ತಿಂಗಳಿನೊಳಗೆ ಮುಕ್ತಾಯಗೊಳ್ಳಲಿದ್ದು, ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ, ಕರ್ನಾಟಕವು ಗ್ರಾಮೀಣ ವಿಕೇಂದ್ರೀಕರಣದಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಮತ್ತು ಪಂಚಾಯತ್ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಮತ್ತು ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರದಿಂದ ಅನುದಾನಗಳ ಸಕಾಲಿಕ ಬಿಡುಗಡೆ ಅತ್ಯಗತ್ಯವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದು ಬಾಕಿ ಇರುವ 2025–26ನೇ ಹಣಕಾಸು ವರ್ಷದ 15 ನೇ ಹಣಕಾಸು ಆಯೋಗದ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img