Monday, June 1, 2026
23.7 C
Belagavi

ಇದು ಐತಿಹಾಸಿಕ, ಭಾರತಕ್ಕೆ ವರದಾನ ಎಂದು ಬಣ್ಣಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

advertisement

spot_img

ಭಾರತ-ಯುರೋಪ್ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದ

ಇದು ಐತಿಹಾಸಿಕ, ಭಾರತಕ್ಕೆ ವರದಾನ ಎಂದು ಬಣ್ಣಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಒಪ್ಪಂದದಿಂದ ಕರ್ನಾಟಕಕ್ಕೆ ತೆರೆಯಲಿದೆ ಭಾಗ್ಯದ ಬಾಗಿಲು

ಯುರೋಪ್ ನಲ್ಲಿ ಶಿಕ್ಷಣ, ಉದ್ಯೋಗಿ ಅವಕಾಶಗಳು ಸುಲಭವಾಗಲಿವೆ

ನವದೆಹಲಿ 27 ಜನವರಿ 2026

ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪದಿಂದ ಭಾರತ-ಯುರೋಪ್ ಒಕ್ಕೂಟದ (India–EU FTA) ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮದರ್‌ ಆಫ್‌ ಆಲ್‌ ಡೀಲ್ಸ್ ಎಂದೇ ಕರೆಯಲ್ಪಟ್ಟಿರುವ ಈ ಒಪ್ಪಂದವು ಭಾರತ ಮತ್ತು ಯುರೋಪ್ ಒಕ್ಕೂಟದ ನಡುವಿನ ವ್ಯಾಪಾರ ರೇಖೆಯನ್ನು ಮತ್ತಷ್ಟು ಸರಳವಾಗಿಸುತ್ತದೆ ಹಾಗೂ ಯುರೋಪ್ ಜತೆಗಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ, ಈ ಒಪ್ಪಂದದ ಭಾಗವಾಗಿ ಉತ್ಪಾದನೆ, ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕಕ್ಕೆ ವರದಾನವಾಗಲಿದೆ, ಹೊಸ ಅವಕಾಶಗಳ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಅವರು ಹೇಳಿದ್ದು, ಇದು ವ್ಯಾಪಾರ ವಹಿವಾಟಿನಲ್ಲಿ ಹೊಸ ಶಕೆಗೆ ನಾಂದಿ ಹಾಡಲಿದೆ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಗಳಾದ ಮೇಲೆ ಭಾರತೀಯ ಕೈಗಾರಿಕೆ ಕ್ಷೇತ್ರದ ಬೆಳವಣಿಗೆಯಲ್ಲಿ ಪರಿವರ್ತನಾತ್ಮಕ ಅಭಿವೃದ್ಧಿ ಕಂಡು ಬಂದಿದೆ. ಈಗ ಭಾರತ ಮತ್ತು ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದಿಂದ ಈ ಅಭಿವೃದ್ಧಿ ಮತ್ತೊಂದು ಉನ್ನತ ಸ್ತರಕ್ಕೆ ಏರಲಿದೆ ಎನ್ನುವ ವಿಶ್ವಾಸವನ್ನು ಕೇಂದ್ರ ಸಚಿವರು ವ್ಯಕ್ತಪಡಿಸಿದ್ದಾರೆ.

ಐಟಿ ಬಿಟಿ, ಸೇವಾ ವಲಯ, ಎಂಜಿನಿಯರಿಂಗ್ , ಎಲೆಕ್ಟ್ರಾನಿಕ್ಸ್ ಮತ್ತು ಔಷಧ ಸೇರಿದಂತೆ ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ಕಾರ್ಯಪ್ರವೃತ್ತವಾಗಿರುವ ಕೈಗಾರಿಕೆಗಳಿಗೆ ಈ ಒಪ್ಪಂದವು ಶಕ್ತಿ ತುಂಬಿದೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತವೂ ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಆಗಿದೆ. ಯುರೋಪಿಯನ್ ಒಕ್ಕೂಟವು ಎರಡನೇ ಬೃಹತ್ಆರ್ಥಿಕತೆ ಆಗಿದ್ದು, ಈ ಎರಡೂ ಆರ್ಥಿಕತೆಗಳ ನಡುವೆ ಆಗಿರುವ ಒಪ್ಪಂದಿಂದ ಜಾಗತಿಕ ಜಿಡಿಪಿಯಲ್ಲಿ ಶೇಕಡಾ 25ರಷ್ಟು ಪಾಲು ಹೊಂದಿವೆ. ಹಾಗೆಯೇ ಜವಳಿ, ಚಿನ್ನಾಭರಣ, ವಜ್ರ ಇತ್ಯಾದಿ ಉತ್ಪನ್ನಗಳ ವಲಯದಲ್ಲಿ ₹6.41 ಲಕ್ಷ ಕೋಟಿ ವಹಿವಾಟು ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದೊಂದು ಐತಿಹಾಸಿಕ ಒಪ್ಪಂದವಾಗಿದೆ. ಮುಂದಿನ ದಿನಗಳಲ್ಲಿ ಯುರೋಪ್ ನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಹಾಗೂ ಅಲ್ಲಿ ಉದ್ಯೋಗ ಅರಸಿ ಹೋಗುವ ಯುವ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img