Tuesday, February 10, 2026
22.1 C
Belagavi

ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯ

advertisement

spot_img

ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯ

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ

ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ

ಶಿವಮೊಗ್ಗ, ಜ.30:

“ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವ್ಯಂಗ್ಯವಾಡಿದರು.

ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ” ಎಂದು ತಿವಿದರು.

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ

ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ,“ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ” ಎಂದರು.

ನರೇಗಾ ರಹಿತ ಯೋಜನೆಯಿಂದ ಯಾರಿಗೂ ಅನುಕೂಲವಿಲ್ಲ

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಕೇಳಿದಾಗ “ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್‌ ಕಾರ್ಡ್‌ ಹೊಂದಿರುವವರಿಗೂ ನಷ್ಟ” ಎಂದರು.

ಮಂಗನ ಖಾಯಿಲೆಯಿಂದ ಸಾವನ್ನಪ್ಪುತ್ತಿರುವವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ಪರಿಶೀಲಿಸಿ ತಿಳಿಸುತ್ತೇನೆ” ಎಂದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img