Saturday, April 11, 2026
23.7 C
Belagavi

ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು

advertisement

spot_img

ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು. ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದು ಪ್ರಶಂಸನೀಯ.ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶದ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ. ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಎಲ್ಲಾ ಸಮುದಾಯಗಳೊಂದಿಗೆ ಹೊಂದಿಕೊಂಡು ಅವರ ಸಂಸ್ಕೃತಿ, ಉದ್ಯೋಗದೊಂದಿಗೆ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುತ್ತಿರುವುದು ದೊಡ್ಡ ವಿಚಾರ.ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ. ಒಂದು ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು, ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ. ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ.

ಎಲ್ಲರೂ ಜಾತ್ಯತೀತರಾಗಿರುವುದು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸಬೇಕು‌ ಮನುಷ್ಯರಾಗಿ ಬಾಳಬೇಕು ಎಂದು ಎಲ್ಲಾ ಧರ್ಮಗಳೂ ಹೇಳುತ್ತವೆ. ಧರ್ಮವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ.ಬ್ಯಾರಿ ಭವನ ನಿರ್ಮಾಣಕ್ಕೆ 5 ಕೋಟಿ ರೂ ನೀಡಿದ್ದೆ. ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ. ಮಂಗಳೂರು ಬ್ಯಾರಿ ಅಕಾಡೆಮಿಗೆ 3 ಕೋಟಿ, ಹಜ್ ಭವನಕ್ಕೆ 10 ಕೋಟಿ ಅನುದಾನ ನೀಡಲಾಗಿದೆ.

ಬ್ಯಾರಿ ಸಮುದಾಯಕ್ಕೆ ಸೇರಿದ ಯು. ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಾ, ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದ್ದಾರೆ. ಇಡೀ ಬ್ಯಾರಿ ಸಮುದಾಯ ಇನ್ನಷ್ಟು ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲಿ‌ ಎಂದು ಹಾರೈಸುತ್ತೇನೆ.– ಇಂದು ಬ್ಯಾರಿಸ್ ಸೆಂಟ್ರಲ್ ಕಮಿಟಿ, ಬೆಂಗಳೂರು ಇವರ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ “ಬ್ಯಾರಿ ಕೂಟ -2026” ಅನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿ, ಮಾತನಾಡಿದರು

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img