Friday, July 17, 2026
25.1 C
Belagavi

ಕರ್ನಾಟಕವನ್ನು ರಕ್ಷಿಸಿ; ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡರು

advertisement

spot_img

ಕರ್ನಾಟಕವನ್ನು ರಕ್ಷಿಸಿ; ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡರು

ರಾಜ್ಯದ ನೀರಾವರಿ ಬಗ್ಗೆ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿಗಳ ಭಾಷಣ

ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ ಎಂದು ಮೊರೆ

ನಾನು ಜೀವನದ ಕೊನೆಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ

ಮಾಜಿ ಪ್ರಧಾನಿಗಳ ಮಾತಿಗೆ ಮೌನವಾಯಿತು ಸದನ!

ನವದೆಹಲಿ 

ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರು.

ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು.

ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರಕಾರವನ್ನು ಕೈ ಮುಗಿದು ವಿನಂತಿಸಿದರು.

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ರಾಜ್ಯದ ನೀರಾವರಿ ಬಿಕ್ಕಟ್ಟನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು: ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು, ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ‘ ಎಂದು ಮಾಜಿ ಪ್ರಧಾನಿಗಳು ಮನವಿ ಮಾಡಿದರು.

ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದ ಮಾಜಿ ಪ್ರಧಾನಿಗಳು; ಕರ್ನಾಟಕ ರಾಜ್ಯಕ್ಕೆ ನೀರಿನದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರ ಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮನವಿ ಮಾಡಿಕೊಂಡರು.

ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜತೆಗೇ ಇರುತ್ತೇವೆ ಹಾಗೂ ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ದೇವೇಗೌಡರು ಕೋರಿಕೊಂಡರು.

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದರು.

ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಹೇಳಿದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img