Monday, June 1, 2026
23.1 C
Belagavi

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

advertisement

spot_img

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ ಡಿಜೆ ಸೌಂಡ್ ಸಿಸ್ಟಮ್ ಹಾಗೂ ಧ್ವನಿವರ್ಧಕಗಳ ಹಾವಳಿಯನ್ನು ತಡೆಗಟ್ಟುವಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆಗಳು ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿ, ದಿನಾಂಕ. 09-02-2026 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.

ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಬಾ. ಪಾಟೀಲ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಸಾರ್ವಜನಿಕರ ಶಾಂತಿ ಭಂಗ ಮಾಡುತ್ತಿರುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪ್ರಮುಖ ಬೇಡಿಕೆಗಳು ಮತ್ತು ಆರೋಪಗಳು

ಧ್ವನಿವರ್ಧಕಗಳಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಅಲ್ಲದೆ, ರೋಗಿಗಳು, ವೃದ್ಧರು ಹಾಗೂ ಗರ್ಭಿಣಿಯರು ತೀವ್ರ ಅಸ್ವಸ್ಥತೆ ಎದುರಿಸುತ್ತಿದ್ದಾರೆ. ಧ್ವನಿ ಮಾಲಿನ್ಯದ ಹಾವಳಿ: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಟ್ರಾಕ್ಟರ್‌ಗಳಿಗೆ ಅಳವಡಿಸಿರುವ ದೊಡ್ಡ

ಅಶ್ಲೀಲ ಹಾಡುಗಳ ಅಬ್ಬರ: ಸಾರ್ವಜನಿಕ ರಸ್ತೆಗಳಲ್ಲಿ ಹೆಚ್ಚಿನ ಶಬ್ದದೊಂದಿಗೆ ಅಶ್ಲೀಲ ಹಾಡುಗಳನ್ನು ಹಾಕಿಕೊಂಡು ಸಂಚರಿಸುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಲಾಗಿದೆ.
ಭ್ರಷ್ಟಾಚಾರದ ಆರೋಪ: ಈ ಅಕ್ರಮಗಳನ್ನು ತಡೆಯುವಲ್ಲಿ ಕರ್ತವ್ಯ ಲೋಪ ಎಸಗಿರುವ ಬೆಳಗಾವಿ ಜಿ.ಸಿ.ಟಿ. ಶ್ರೀ ಸಿದ್ದಪ್ಪ ಕಲ್ಲೇರ ಹಾಗೂ ರಾಮದುರ್ಗ ಎ.ಆರ್.ಟಿ.ಒ ಶ್ರೀ ಬಸವರಾಜ ಬಾಗಲೆ ಸೇರಿದಂತೆ ಇತರ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಸರ್ಕಾರದ ಸುತ್ತೋಲೆ ಉಲ್ಲಂಘನೆ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳಿದ್ದರೂ, ಮೋಟಾರು ವಾಹನ ಕಾಯ್ದೆ 1988ರ ಅಡಿಯಲ್ಲಿ ಕ್ರಮ ಕೈಗೊಳ್ಳದೆ ಇಲಾಖೆಯು ಮೌನಕ್ಕೆ ಶರಣಾಗಿದೆ ಎಂದು ಹೋರಾಟಗಾರರು ದೂರಿದ್ದಾರೆ.

ಹಿಂದಿನ ಮನವಿಗಳಿಗೆ ಬೆಲೆಯಿಲ್ಲ: ಕಳೆದ ಡಿಸೆಂಬರ್ ತಿಂಗಳಿನಿಂದಲೂ ಸಂಬಂಧಪಟ್ಟ ಸಾರಿಗೆ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌

ವರಿಷ್ಠಾಧಿಕಾರಿಗಳಿಗೆ ಹತ್ತಾರು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕೇವಲ ಭರವಸೆ ನೀಡಿ ಕಾಲಹರಣ ಮಾಡುತ್ತಿದ್ದಾರೆ ಎಂಬುದು ಪ್ರತಿಭಟನಾಕಾರರ ಪ್ರಮುಖ ಆರೋಪವಾಗಿದೆ.

ಸಾರ್ವಜನಿಕರ ನೆಮ್ಮದಿ ಕೆಡಿಸುತ್ತಿರುವ ವಾಹನಗಳ ನೋಂದಣಿ ರದ್ದುಪಡಿಸಿ, ಅವುಗಳನ್ನು ಜಪ್ತಿ ಮಾಡುವವರೆಗೆ ಹಾಗೂ ಭ್ರಷ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವವರೆಗೂ ಈ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಶ್ರೀನಿವಾಸಗೌಡ ಪಾಟೀಲ ಎಚ್ಚರಿಸಿದ್ದಾರೆ.

ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಈ ಸಮಸ್ಯೆಗೆ ಇಂದಾದರೂ ಜಿಲ್ಲಾಡಳಿತ ಶಾಶ್ವತ ಪರಿಹಾರ ನೀಡಲಿದೆಯೇ ಎಂದು ಸಾರ್ವಜನಿಕರು ಕಾದು ನೋಡುತ್ತಿದ್ದಾರೆ

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img