Saturday, April 11, 2026
28.1 C
Belagavi

ವಿಶ್ವವಿಖ್ಯಾತ ಹಂಪಿ ಉತ್ಸವ 2026 ಉದ್ಘಾಟಿಸಿದ ಸಿಎಂ

advertisement

spot_img

ವಿಶ್ವವಿಖ್ಯಾತ ಹಂಪಿ ಉತ್ಸವ 2026 ಉದ್ಘಾಟಿಸಿದ ಸಿಎಂ

ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ, ಫೆಬ್ರವರಿ 13: 2026 ರಿಂದಲೇ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಹಂಪಿ ಉತ್ಸವ 2026 ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ ದಿವಂಗತ ಎಂ ಪಿ ಪ್ರಕಾಶ್ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಸಂದರ್ಭದಲ್ಲಿ , ಮೈಸೂರು ದಸರಾ ಉತ್ಸವದ ವಿಜೃಂಭಣೆಯನ್ನು ಮನಗಂಡು, ಇದೇ ರೀತಿಯ ಉತ್ಸವವನ್ನು ಹಂಪಿಯಲ್ಲಿಯೂ ನೆರವೇರಿಸಬೇಕೆಂದು ಆಶಿಸಿದ್ದರು. ಎಂ ಪಿ ಪ್ರಕಾಶ್ ಅವರು, ಕನ್ನಡ ನಾಡು ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ದೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ ಎಂದರು.

ಕನ್ನಡ ನಾಡು ನುಡಿಗೆ ಸರ್ಕಾರದ ಪ್ರೋತ್ಸಾಹ
ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ ಸಂಸ್ಕೃತಿ ಕಲೆ ಗಳಿಗೆ ಹೆಚ್ಚಿನ ಒತ್ತು ನೀಡುತ್ತದೆ. ವಿಜಯನಗರ ಕಾಲದಲ್ಲಿ ಸಂಪ್ಭರಿತವಾದ ಹಂಪಿಯ ಹಿರಿಮೆಯನ್ನು ಹಂಪಿ ಉತ್ಸವದಿಂದ ತಿಳಿಯಬಹುದಾಗಿದೆ. ವಿದೇಶಿ ಪ್ರವಾಸಿಗ ಅಬ್ದುಲ್ ರಜಾಕ್ , ವಿಜಯನಗರ ಶ್ರೀಮಂತವಾದ ಸ್ಥಳವಾಗಿತ್ತು ಎಂದು ಉಲ್ಲೇಖಿಸಿದ್ದನ್ನು ಮುಖ್ಯಮಂತ್ರಿಗಳು ವಿವರಿಸಿದರು.

ಅಸಮಾನತೆ ನಿವಾರಣೆಯಿಂದ ಸಮಸಮಾಜ ನಿರ್ಮಿಸಲು ಸಾಧ್ಯ
ಸಮಾಜದಲ್ಲಿ ಬಡವ ಶ್ರೀಮಂತ, ಉತ್ತಮ ಮತ್ತು ಕೆಳ ಜಾತಿಗಳೆಂಬ ಬೇಧವಿದೆ. ಡಾ.ಬಿ.ಆರ್. ಅಂಬೇಡ್ಕರ್ ರವರು ಸಂವಿಧಾನ ರಚಿಸದಿದ್ದರೆ, ಸಮಾನ ಅವಕಾಶಗಳು ದೊರೆಯಲು ಸಾಧ್ಯವಾಗುತ್ತಿರಲಿಲ್ಲ. ಸಮಾಜದ ಅಸಮಾನತೆಯನ್ನು ತೊಡೆದುಹಾಕಿದರೆ ಸಮಸಮಾಜ ನಿರ್ಮಾಣ ಸಾಧ್ಯ. 2013 ರಲ್ಲಿ ಮತ್ತು 2023 ರಲ್ಲಿ ಮುಖ್ಯಮಂತ್ರಿಯಾಗಿ ನಾನು ತಂದಿರುವ ಕಾರ್ಯಕ್ರಮಗಳು ಅಸಮಾನತೆಯ ನಿವಾರಣೆಗೆ ತಂದವುಗಳಾಗಿವೆ. ಸಮಸಮಾಜ ನಿರ್ಮಿಸಿದಾಗ ಮಾತ್ರ ದುರ್ಬಲವರ್ಗದವರೂ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕ ಶಕ್ತಿ
ನಮ್ಮ ಸರ್ಕಾರ ಅನೇಕ ಭಾಗ್ಯ ಯೋಜನೆಗಳನ್ನು ನೀಡಿದ್ದು, 2023 ರಿಂದಲೂ ಗ್ಯಾರಂಟಿ ಯೋಜನೆಗಳನ್ನು ನೀಡಿ, ಅಸಮಾನತೆಯನ್ನು ನಿವಾರಿಸುವ ಉದ್ದೇಶ ಹೊಂದಿದೆ. ಜನರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ಸಾಧ್ಯವಾಗಿಸದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಬಹುದು. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಸುಮಾರು 60 ಸಾವಿರ ರೂ.ಗಳ ಆರ್ಥಿಕ ಬಲವನ್ನು ತುಂಬುತ್ತಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತಿದೆ. ಜಾತಿವ್ಯವಸ್ಥೆ ಇಲ್ಲವಾಗಲು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಸ್ವಾತಂತ್ರ್ಯ ಬರಬೇಕು ಎಂದರು.

ನಾಡು ನುಡಿ ಸಂಸ್ಕೃತಿಗಳ ರಕ್ಷಣೆಗೆ ಸರ್ಕಾರ ಬದ್ಧ
ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಬನವಾಸಿ , ಮೈಸೂರು ದಸರಾ, ಕರಾವಳಿ ಉತ್ಸವ ಗಳ ಮೂಲಕ ನಾಡಿನ ಸಾಹಿತ್ಯ, ಕಲೆ, ಸಂಗೀತ ಪರಂಪರೆಗಳನ್ನು ಸಂರಕ್ಷಿಸುವ ದಿಸೆಯಲ್ಲಿ ಮುಖ್ಯವಾಗಿದೆ. ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆ ಕೊಂಡೊಯ್ಯವ ದಿಸೆಯಲ್ಲಿ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img