Monday, June 1, 2026
23.7 C
Belagavi

ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಚಾಲನೆ ನೀಡಿದ ಸಚಿವ ಸಂತೋಷ್ ಲಾಡ್

advertisement

spot_img

ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಚಾಲನೆ ನೀಡಿದ ಸಚಿವ ಸಂತೋಷ್ ಲಾಡ್
=====================

“ನಾಡಿನ ಜನರ ಬದುಕು ಬದಲಿಸಿದ ಗ್ಯಾರಂಟಿ ಯೋಜನೆಗಳು; ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳಡಿಯಲ್ಲಿ ರೂ. 3485.02 ಕೋಟಿ ವೆಚ್ಚ”

ಧಾರವಾಡ, ಫೆ.19: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ವ್ಯಾಪಕ ಪರಿಣಾಮ ಬೀರಿವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು.

ಪಟ್ಟಣ ಪಂಚಾಯತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್‍ಇಡಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಷೇತ್ರ ಪ್ರಚಾರ ವಾಹನವು ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 20 ಹಳ್ಳಿಗಳಲ್ಲಿ ಸಂಚರಿಸಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಯೂ ಯೋಜನೆಗಳ ಲಾಭಗಳ ಕುರಿತು ವಿವರಿಸಲಾಗುತ್ತದೆ ಎಂದು ಅವರು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ತಲುಪಬೇಕು. ಕ್ಷೇತ್ರ ಪ್ರಚಾರ ವಾಹನದ ಮೂಲಕ ಮನೆಮನೆಗೆ ತೆರಳಿ ಎಲ್ಲ ಜನರಿಗೂ ಮನಮುಟ್ಟುವಂತೆ ಪ್ರಚಾರವನ್ನು ಮಾಡಬೇಕು ಎಂದು ತಿಳಿಸಿದರು.

ಗ್ಯಾರಂಟಿ ಹಾಡುಗಳಿಗೆ ತಾಳ ಹಾಕಿ, ಹಾಡು ಹಾಡಿದ ಸಚಿವ ಲಾಡ್

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಾಗಿ ರೂಪುಗೊಂಡ ಕಲಾತಂಡಗಳೊಂದಿಗೆ ಸಚಿವರು ಸ್ವತಃ ಸಂಗೀತ ಹಾಡಿ, ತಾಳ ಬಾರಿಸಿ ಕಲಾವಿದರನ್ನು ಪ್ರೋತ್ಸಾಹಿಸಿದರು. ಅವರ ಈ ಸರಳ ಹಾಗೂ ಸ್ನೇಹಪೂರ್ಣ ನಡೆ ಜನಮನ ಗೆದ್ದಿತು. ಕಲೆಯ ಮೂಲಕ ಯೋಜನೆಗಳ ಸಂದೇಶವನ್ನು ಜನರಿಗೆ ತಲುಪಿಸುವ ಪ್ರಯತ್ನ ಗಮನಸೆಳೆಯಿತು. ಈ ಸಂದರ್ಭ ಸಚಿವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಕಲಾವಿದರ ಪ್ರತಿಭೆಯನ್ನು ಮೆಚ್ಚಿದರು. ಈ ಮೂಲಕ ಸಾರ್ವಜನಿಕರಲ್ಲಿ ಉತ್ಸಾಹ ಮೂಡಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಹಾಗೂ ಭಾಗವಹಿಸುವ ಮನೋಭಾವವನ್ನು ಹೆಚ್ಚಿಸಿದರು.

ಕ್ಷೇತ್ರ ಪ್ರಚಾರ ವಾಹನದೊಂದಿಗೆ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಜಾನಪದ ಕಲಾತಂಡದ ನಾಯಕರಾದ ದಾವಲಸಾಬ ದೊಡ್ಡಮನಿ ಅವರ ನೇತೃತ್ವದಲ್ಲಿ ಪ್ರಕಾಶ ಮಡಿವಾಳರ, ರಮೇಶ ಸಜ್ಜಗಾರ, ಗೂಳಪ್ಪ ದುರ್ಗಣ್ಣವರ, ನೌಶಾದ ಬೆಂತೂರ ಅವರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಜನಪದ ಹಾಡುಗಳು ಹಾಗೂ ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯಕ್ರಮವನ್ನು ನೀಡಿದರು.ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಾನಪ್ಪಗೌಡ ಪಾಟೀಲ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಕಲಘಟಗಿ ತಹಶೀಲ್ದಾರ ಬಸವರಾಜ ಹೊಂಕಣನವರ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪಿ.ವಾಯ್.ಸಾವಂತ, ಕಲಘಟಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ ಬಿ., ಸಿಪಿಐ ಶ್ರೀಶೈಲ ಕೌಜಲಗಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img