Friday, July 17, 2026
23.9 C
Belagavi

ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಅಂಗಾಂಗ ಕಸಿ ಯಶಸ್ವಿ

advertisement

spot_img

ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಅಂಗಾಂಗ ಕಸಿ ಯಶಸ್ವಿ

ಬ್ರೇನ್‌ ಡೆಡ್‌ ಆಗಿದ್ದ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ

* ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಯಶಸ್ವಿಯಾದ ಅಂಗಾಂಗ ಕಸಿ
* ಬೆಂಗಳೂರು ವೈದ್ಯಕೀಯ ಸಂಸ್ಥೆ, ಟ್ರಾಮಾ ಕೇರ್‌ ಸೆಂಟರ್‌ ವೈದ್ಯರ ಸಾರ್ಥಕ ಸೇವೆ
* ಆರು ಜನರ ಬಾಳಿಗೆ ತುಂಬಿದ ಮಂಡ್ಯ ಯುವಕ, ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ ಸದಸ್ಯರು
* ಮಂಡ್ಯ ಯುವಕನ ಕುಟುಂಬದವರಿಗೆ ಧನ್ಯವಾದ ಸಲ್ಲಿಸಿದ ವೈದ್ಯರ ತಂಡ

ಬೆಂಗಳೂರು, ಫೆ. 25: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ ಎನ್ನುತ್ತಾರೆ. ಸಾವಿನಲ್ಲೂ ಸಾರ್ಥಕತೆ ಮೆರೆಯುವುದು ನಿಜಕ್ಕೂ ಸ್ಮರಣೀಯ. ಇಂಥ ಕಾರ್ಯವನ್ನು ಮಾಡುವಲ್ಲಿ ಮಂಡ್ಯದ ಕಸಬಾ ಹೋಬಳಿಯ ಚಿಕ್ಕ ಮಂಡ್ಯ ಗ್ರಾಮದ ಕುಟುಂಬ ಸದಸ್ಯರು ಧೈರ್ಯ ತೋರಿ, ಕೆಲವರ ಬಾಳಿಗೆ ಬೆಳಕು ತುಂಬಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಟ್ರಾಮಾ ಮತ್ತು ಎಮರ್ಜೆನ್ಸಿ ಕೇರ್‌ ಸೆಂಟರ್‌ನಲ್ಲಿ ನಡೆದ ಅಂಗಾಂಗ ಕಸಿ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದೆ. ಜನರಿಗೆ ಕೈಗೆಟಕುವ ದರದಲ್ಲಿ ಈ ಸೇವೆಯನ್ನು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಒದಗಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಮೆಡಿಕಲ್‌ ಸೂಪರಿಟೆಂಡರ್‌ ಡಾ. ದೀಪಕ್‌ ಮತ್ತು ಟ್ರಾಮಾ ಎಮರ್ಜೆನ್ಸಿ ಕೇರ್‌ ಸೆಂಟರ್ ನ ವಿಶೇಷ ಅಧಿಕಾರಿ ಡಾ. ಅಸೀಮ ಬಾನು ,
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ಟ್ರಾಮ ಕೇರ್‌ ಸೆಂಟರ್‌ ಹಾಗೂ ಜೀವಸಾರ್ಥಕತೆ ತಂಡದ ಸದಸ್ಯರ ಸೇವೆ ಸ್ಮರಣೀಯ ಎಂದರು.

ನೋವಿನ ಸಮಯದಲ್ಲೂ ಸಮಾಜ ಸೇವೆ ಹಾಗೂ ಮತ್ತೊಬ್ಬರ ಬಾಳಿಗೆ ಬೆಳಗಾಗುವ ರೀತಿಯ ನಿರ್ಧಾರ ಕೈಗೊಂಡ ಕುಟುಂಬ ಸದಸ್ಯರಿಗೆ ಧನ್ಯವಾದಗಳು ಎಂದು ಡಾ. ದೀಪಕ್‌ ತಿಳಿಸಿದ್ದಾರೆ.

ಚಿಕ್ಕಮಂಡ್ಯ ಗ್ರಾಮದ ದರ್ಶನ್‌ ಎಂಬ ಯುವಕ ಕಳೆದ ಫೆಬ್ರವರಿ ೨೨ರಂದು ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ. ಆದರೆ ಆತುರದಲ್ಲಿ ಮನೆಗೆ ಬಂದು ರಾತ್ರಿ ಮಲಗಿದ್ದ. ಆದರೆ ಆತನ ತಲೆಗೆ ಭಾರಿ ಪೆಟ್ಟಾಗಿರುವುದು ಕಂಡು ಆಸ್ಪತ್ರೆಗೆ ಸೇರಿಸಿದರು. ಆಗ ತಲೆಯೊಳಗೆ ರಕ್ತಸ್ರಾವವಾಗಿರುವುದು ಪತ್ತೆಯಾಯಿತು.

ಕೂಡಲೇ ಆತನನ್ನು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್‌ ಸೆಂಟರ್‌ಗೆ ಕರೆದುಕೊಂಡು ಬರಲಾಯಿತು. ಹಲವಾರು ಪರೀಕ್ಷೆಗಳಿಗೆ ಒಳಪಡಿಸಿದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಎರಡು ದಿನಗಳ ನಂತರ ಪರೀಕ್ಷೆ ನಡೆಸಿದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡಾ. ಕಾವ್ಯಾ, ಡಾ. ದೀಪಕ್‌, ಡಾ. ಆಸೀಮಾ ಬಾನು ಉನ್ನತ ವೈದ್ಯರ ತಂಡ “ಬ್ರೇನ್‌ ಡೆಡ್‌” ಎಂದು ಘೋಷಿಸಿತು.

ನಂತರ ಜೀವ ಸಾರ್ಥಕತೆ ಎಂಬ ತಂಡ, ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ ನಂತರ, ದಿನೇಶ್‌ ಅಂಗಾಂಗ ದಾನ ಮಾಡಲು ಸಮ್ಮತಿಸಿ ಸಾರ್ಥಕತೆ ಮೆರೆದರು.

ದಿನೇಶ್‌ ಅವರ ಯಕೃತ್ತು, ಮೂತ್ರಪಿಂಡ, ಹೃದಯ ನಾಳಗಳು, ಇತರೆ ಅಂಗ ಪಡೆದು ಅರ್ಹರಿಗೆ ಅಳವಡಿಸಲಾಗಿದೆ. ದಿನೇಶ್‌ ಕುಟುಂಬ ಸದಸ್ಯರ ಈ ನಿರ್ಧಾರವನ್ನು ಆಸ್ಪತ್ರೆಯ ವೈದ್ಯರು ಶ್ಲಾಘಿಸಿದ್ದಾರೆ.

 

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img