Friday, July 17, 2026
23.9 C
Belagavi

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

advertisement

spot_img

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ನನ್ನ ಹೇಳಿಕೆ ತಿರುಚಬೇಡಿ

ಉತ್ತಮ ಅಭಿವೃದ್ಧಿ ಯೋಜನೆಗಳನ್ನು ಘೋಷಿಸುತ್ತೇವೆ

21 ಕೋಟಿಯಷ್ಟು ಗ್ಯಾರಂಟಿ ಹಣ ಮೃತಪಟ್ಟವರ ಖಾತೆಗೆ ಹೋಗಿದೆ

ಬೆಂಗಳೂರು, 

“ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ. ಸರ್ಕಾರಿ ನೌಕರರು, ದೊಡ್ಡ, ದೊಡ್ಡ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು – ಹೀಗೆ ಬಹಳ ಜನ ನಮಗೆ ಗ್ಯಾರಂಟಿ ಯೋಜನೆಗಳು ಬೇಡ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಉತ್ತರಿಸಿದರು.

ಸಿರಿವಂತರು ಗ್ಯಾರಂಟಿ ಯೋಜನೆಗಳ ಫಲಾನುಭವದಿಂದ ಹೊರಬರಲಿ ಎಂದು ಒಂದಷ್ಟು ಸಚಿವರು ಹೇಳುತ್ತಿರುವ ಬಗ್ಗೆ ಕೇಳಿದಾಗ, “ಒಂದಷ್ಟು ಸಿರಿವಂತರು ನಮಗೆ ಅವಶ್ಯಕತೆ ಇಲ್ಲ ಎಂದಿದ್ದಾರೆ. 200 ಯೂನಿಟ್ ಉಚಿತ ವಿದ್ಯುತ್ ಬಗ್ಗೆಯೂ ಹೇಳಿದ್ದಾರೆ. ಅದಕ್ಕೆ ನಾವು ಆ ಬಗ್ಗೆ ವಿಮರ್ಶೆ ಮಾಡುತ್ತಿದ್ದೇವೆ” ಎಂದು ಹೇಳಿದರು.“ಮಾಧ್ಯಮಗಳು ಯಾವುದನ್ನೂ ಸಹ ತಿರುಚುವುದು ಬೇಡ. ಯಾವ ಕಾರಣಕ್ಕೂ ಯಾವ ಗ್ಯಾರಂಟಿಗಳೂ ನಿಲ್ಲುವುದಿಲ್ಲ. ಎಷ್ಟೇ ಕಷ್ಟ ಇದ್ದರೂ ಸಹ ಗ್ಯಾರಂಟಿಗಳನ್ನು ಕೊಡುತ್ತಾ ಇದ್ದೇವೆ ಎಂದು ಹೇಳಿದ್ದೇನೆ. ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎನ್ನುವ ಸುಳ್ಳಿನ ಬಗ್ಗೆಯೂ ಸ್ಪಷ್ಟನೆ ನೀಡಿದ್ದೇನೆ. ಈ ಬಜೆಟ್ ನಲ್ಲಿ ಒಳ್ಳೊಳ್ಳೆ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಘೋಷಣೆ ಮಾಡುತ್ತದೆ” ಎಂದು ಹೇಳಿದರು.

“ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಸಹಾಯ ಮಾಡುತ್ತಿಲ್ಲ ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ನಿಭಾಯಿಸುತ್ತಿದ್ದೇವೆ. ಸರ್ಕಾರವೂ ಸಹ ಅತ್ಯುತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿದೆ. 21 ಕೋಟಿಯಷ್ಟು ಹಣ ಮೃತಪಟ್ಟಿರುವ ಮಹಿಳೆಯರ ಖಾತೆಗೆ ಹೋಗಿದೆ. ಇದರ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದೇವೆ” ಎಂದು ಹೇಳಿದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img