ಎಚ್ ಪಿ ವಿ ಲಸಿಕೆ ಪಡೆದುಕೊಳ್ಳಿ : ಶಾಸಕ ಆರ್ ವಿ ಎನ್
ಹೆಣ್ಣು ಮಕ್ಕಳು ಆರೋಗ್ಯವಾಗಿದ್ದರೆ ಕುಟುಂಬ ಆರೋಗ್ಯವಾಗಿದ್ದಂತೆ ಆದರಿಂದ ಪ್ರತಿಯೊಬ್ಬ 14 ವರ್ಷದ ಹೆಣ್ಣು ಮಕ್ಕಳು ಕಡ್ಡಾಯವಾಗಿ ಎಚ್ ಟಿ ವಿ ಲಸಿಕೆಯನ್ನು ಪಡೆದುಕೊಳ್ಳುವಂತೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ತಿಳಿಸಿದರು.
ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ಎಚ್ ಪಿ ವಿ ಲಸಿಕ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹೆಣ್ಣು ಮಕ್ಕಳ ಆರೋಗ್ಯ ನಾಡಿನ ಸುಭದ್ರ ಭವಿಷ್ಯಕ್ಕೆ ಅಡಿಪಾಯ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸರ್ಕಾರ ಉಚಿತವಾಗಿ ಎಚ್‍ಪಿ ವಿ ಲಸಿಕೆ ನೀಡುತ್ತಿದ್ದು ಯಾವುದೇ ಭಯವಿಲ್ಲದೆ ಲಸಿಕೆಯನ್ನು ಪಡೆಯುವಂತೆ ತಿಳಿಸಿದರು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಎಚ್‌ಪಿವಿ ಲಸಿಕೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು



