Monday, June 1, 2026
23.1 C
Belagavi

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಾಲ್ ಟಿಕೆಟ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ.!

advertisement

spot_img

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಾಲ್ ಟಿಕೆಟ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ.!

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ ಸಿಕ್ಕಿದೆ.

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ನೀಡುವುದಾಗಿ ನಿಗಮ ಘೋಷಿಸಿದೆ.

ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷೆ ಮುಗಿದ ಬಳಿಕ ಮನೆಗೆ ಹಿಂದಿರುಗುವಾಗ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಈ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಬಸ್ ಕಂಡೆಕ್ಟರ್‌ಗೆ ತೋರಿಸಿದರೆ ಸಾಕು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 18ರಿಂದ ಆರಂಭವಾಗಿ ಏಪ್ರಿಲ್ 2ರವರೆಗೆ ನಡೆಯಲಿದೆ.

ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:15ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಯಾವುದೇ ಅಡಚಣೆ ಇಲ್ಲದೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕೆಎಸ್‌ಆರ್‌ಟಿಸಿ ಈ ವಿಶೇಷ ಸೌಲಭ್ಯವನ್ನು ಕಲ್ಪಿಸಿದೆ.

ಪ್ರತಿ ವರ್ಷ ಪರೀಕ್ಷಾ ದಿನಗಳಲ್ಲಿ ದೂರದ ಊರುಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಬೇಕಾಗುತ್ತದೆ.

ಕೆಲವೊಮ್ಮೆ ಸಾರಿಗೆ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕಷ್ಟಪಡುತ್ತಾರೆ.

ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ಮೂಲಕ ದೊಡ್ಡ ನೆರವು ನೀಡಿದೆ.

ಈ ಯೋಜನೆಯಡಿ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.

ವಿದ್ಯಾರ್ಥಿಗಳು ಪ್ರಯಾಣಿಸುವಾಗ ಬಸ್ ಕಂಡೆಕ್ಟರ್‌ಗೆ ಹಾಲ್ ಟಿಕೆಟ್ ತೋರಿಸುವುದು ಕಡ್ಡಾಯವಾಗಿದೆ.

ಹಾಲ್ ಟಿಕೆಟ್ ಇಲ್ಲದೆ ಈ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಪರೀಕ್ಷೆಗಳು ಸುಗಮವಾಗಿ ಮತ್ತು ಶಿಸ್ತಿನಿಂದ ನಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಪರೀಕ್ಷಾ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಈ ನಿಷೇಧಾಜ್ಞೆಯ ಅನ್ವಯ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಸೆಂಟರ್‌ಗಳು ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಇದರಿಂದ ಯಾವುದೇ ರೀತಿಯ ಅಕ್ರಮ ಅಥವಾ ಪರೀಕ್ಷಾ ನಿಯಮ ಉಲ್ಲಂಘನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.

ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳು ಯಾವುದೇ ಒತ್ತಡ ಅಥವಾ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿವೆ. ಉಚಿತ ಬಸ್ ಪ್ರಯಾಣ ಸೌಲಭ್ಯವು ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯೋಗವಾಗಲಿದೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img