ಸತ್ತಿ ಪರೀಕ್ಷಾ ಕೇಂದ್ರದಲ್ಲಿ 322 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ
ಅಥಣಿ: 2025-26 ನೆಯ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಯಲು ಉನ್ನತ ಅಧಿಕಾರಿಗಳ ಮಾರ್ಗದರ್ಶನದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸತ್ತಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಕುಮಾರಸ್ವಾಮಿ ಮಠ ಹೇಳಿದರು.
ತಾಲ್ಲೂಕಿನ ಸತ್ತಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ಮಾಹಿತಿ ನೀಡಿದ ಅವರು 2025 – 26ನೆಯ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 322 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಅದರಲ್ಲಿ 171 ಗಂಡು ಮಕ್ಕಳು ಹಾಗೂ 151 ಹೆಣ್ಣು ಮಕ್ಕಳು ಪರೀಕ್ಷೆಗೆ ಕೂಡಲಿದ್ದಾರೆ. ಸ್ಥಳೀಯ ಸರ್ಕಾರಿ ಪ್ರೌಢಶಾಲೆ, ಜಿ ಎನ್ ಕೆ ಪ್ರೌಢಶಾಲೆ, ಶರಣ ಬಸವೇಶ್ವರ ಪ್ರೌಢಶಾಲೆ ಹಾಗೂ ಪದ್ಮಾವತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ನಿಯೋಜನೆಗೊಂಡಿರುವ ಮೇಲ್ವಿಚಾರಕರ ಸಭೆಯನ್ನು ಮಾಡಿ ಸಲಹೆ ಸೂಚನೆ ನೀಡಲಾಗಿದೆ. ಪರೀಕ್ಷೆ ಬರೆಯಲಿರುವ ಎಲ್ಲ ಕೊಠಡಿಗಳಿಗೂ ಸಿ ಸಿ ಕ್ಯಾಮೆರಾ ಅಳವಡಿಸಲಾಗಿದೆ. ಕುಡಿಯಲು ಶುದ್ಧ ನೀರು ಸೇರಿದಂತೆ ಪರೀಕ್ಷೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು ಅಚ್ಚುಕಟ್ಟಾಗಿ ಪರೀಕ್ಷೆ ಬರೆಯಬೇಕೆಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪರೀಕ್ಷಾ ಕಸ್ಟೋಡಿಯನ್ ಎಸ್. ಸಿ. ಬಿದರಿ ಸೇರಿದಂತೆ ಇತರರು ಇದ್ದರು.
Trending Now



