ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ), ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಹಾಗೂ ಇನ್ನಿತರ ಬಾಕಿ ಯೋಜನೆಗಳಿಗೆ ಅನುಮತಿ, ನೆರೆರಾಜ್ಯಗಳ ಅಡೆತಡೆ ನಿವಾರಣೆ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಕರ್ನಾಟಕದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ರಾಜ್ಯದ ಸಂಸದರ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಬೋಸರಾಜು, ಸಂಸದರಾದ ಮಾಜಿ ಸಿಎಂ ಬಸವರಾಜ ಬೊಮ್ಮಯಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ನಾಸೀರ್ ಹುಸೇನ್, ಪ್ರಭಾ ಮಲ್ಲಿಕಾರ್ಜುನ, ಶ್ರೇಯಸ್ ಪಟೇಲ್, ರಾಜಶೇಖರ ಹಿಟ್ನಾಳ್, ಜಿ. ಕುಮಾರ ನಾಯಕ್, ಇ. ತುಕಾರಾಮ್, ಸಾಗರ್ ಖಂಡ್ರೆ, ಕೋಟಾ ಶ್ರೀನಿವಾಸ ಪೂಜಾರಿ, ಸಿ.ಎನ್. ಮಂಜುನಾಥ್, ಯಧುವೀರ್ ಒಡೆಯರ್, ಬಿ. ವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಸುಧಾಮೂರ್ತಿ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ನಾಸೀರ್ ಹುಸೇನ್, ರಾಜ್ಯದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸುಪ್ರೀಂ ಕೋರ್ಟ್ ವಕೀಲ ಮೋಹನ್ ಕಾತರಕಿ ಮತ್ತಿತರರು ಭಾಗವಹಿಸಿದ್ದರು.
ಸಭೆಯ ನಂತರ ಡಿಸಿಎಂ ಶಿವಕುಮಾರ್ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು


