Friday, July 17, 2026
20.9 C
Belagavi

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಟ್ರೇಲರ್ ಬಿಡುಗಡೆ .

advertisement

spot_img

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಟ್ರೇಲರ್ ಬಿಡುಗಡೆ .

ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಯುಗಾದಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 3 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಯುಗಾದಿ ಎಂದರೆ ಹೊಸವರ್ಷ ಆರಂಭ. ಈ ಸಂದರ್ಭದಲ್ಲಿ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿರುವುದು ವಿಶೇಷ. ಇದೊಂದು ಮಹಿಳಾ ಪ್ರಧಾನ ಚಿತ್ರ. ಕುಟುಂಬ ಸಮೇತ ನೋಡಲೇ ಬೇಕಾದ ಚಿತ್ರವೂ ಹೌದು. ನನ್ನದು ಈ ಚಿತ್ರದಲ್ಲಿ ವೈದ್ಯನ ಪಾತ್ರ. ಬಹು ತಾರಾಗಣದ ಈ ಚಿತ್ರದಲ್ಲಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಾಯಕಿಯರಾಗಿ ನಟಿಸಿದ್ದಾರೆ.ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಸುಚೇಂದ್ರ ಪ್ರಸಾದ್, ಚಂದ್ರಪ್ರಭ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ರಮೇಶ್ ಕೊಯಿರಾ ಛಾಯಾಗ್ರಹಣ, ಕೆ.ಜಿ.ಎಫ್ ಖ್ಯಾತಿಯ ವಿಕ್ರಂ ಮೋರ್ ಸಾಹಸ ನಿರ್ದೇಶನ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಮಹಾಂತೇಶ್ ಆರ್ ಅವರ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಕಥೆ ನಾನೇ ಬರೆದಿದ್ದು, ನವೀನ್ ಶಕ್ತಿ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ ಮೂರರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದ್ದು, ಹೆಸರಾಂತ ವಿ.ಕೆ.ಫಿಲಂಸ್ ವಿತರಣೆ ಮಾಡುತ್ತಿದೆ. ಹಿಂದಿಯಲ್ಲೂ ನಮ್ಮ ಚಿತ್ರ ಡಬ್ ಆಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಮುಂಬೈನಲ್ಲೂ ಸಹ ಈ ಚಿತ್ರದ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು ಎಂದು ನಿರ್ಮಾಪಕ ಹಾಗೂ ನಾಯಕ ಆದರ್ಶ್ ಗುಂಡುರಾಜ್ ಹೇಳಿದರು.ನಾನು ಮೂಲತಃ ರಂಗಭೂಮಿಯವವನು. 5000ಕ್ಕೂ ಅಧಿಕ ಬೀದಿ ನಾಟಕಗಳನ್ನು ಮಾಡಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. “ಕ್ಯಾಲೆಂಡರ್” ನಲ್ಲಿ ಎಲ್ಲರ ಮನಸ್ಸಿಗೂ ಹತ್ತಿರವಾಗುವ ಚಿತ್ರವಾಗಲಿದೆ.‌ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು ನಿರ್ದೇಶಕ ನವೀನ್ ಶಕ್ತಿ.

ನಾಯಕಿಯರಾದ ಸುಶ್ಮಿತ ಹಾಗೂ ಸಹ ನಿರ್ಮಾಪಕ ಮತ್ತು ನಟ ಶಿವಪ್ರದೀಪ್ ಅವರು ಸಹ “ಕ್ಯಾಲೆಂಡರ್” ಚಿತ್ರದ ಕುರಿತು ಮಾತನಾಡಿದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img