Monday, June 1, 2026
23.7 C
Belagavi

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿ.ಎಂ.ಸಿದ್ದರಾಮಯ್ಯ

advertisement

spot_img

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿ.ಎಂ.ಸಿದ್ದರಾಮಯ್ಯ

ಕೆಲವು ಅಪರಾಧಗಳಲ್ಲಿ ರಾಜ್ಯದ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ತಡೆಗಟ್ಟಿ: ಸಿ.ಎಂ ಸೂಚನೆ

ಬೆಂಗಳೂರು ಏ2:
ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ ಮಾಡಿ ಮಾತನಾಡಿದರು.

ಯಾವುದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಯಾ ಠಾಣಾಧಿಕಾರಿಯ ಗಮನಕ್ಕೆ ಬರದಂತೆ ಯಾವುದೇ ಅಪರಾಧಗಳು, ಕೆಟ್ಟ ವ್ಯವಹಾರಗಳು ನಡೆಯಲು ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ ಎಂದರು.ಹಲವು ರೀತಿಯ ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಶಿಕ್ಷೆ ಪ್ರಮಾಣದಲ್ಲಿ ಕರ್ನಾಟಕ ರಾಜ್ಯ ಮುಂದಿದೆ. ಇದಕ್ಕಾಗಿ ಪೊಲೀಸ್ ಇಲಾಖೆಯನ್ನು ಅಭಿನಂದಿಸುವ ಜೊತೆಗೆ ಪ್ರಮಾಣ ಹೆಚ್ಚಾಗಿರುವ ಅಪರಾಧಗಳ ನಿಯಂತ್ರಣದಲ್ಲೂ ನಾವು ಶ್ರಮ ಹಾಕಬೇಕಿದೆ ಎಂದು ಸೂಚಿಸಿದರು.ಸೈಬರ್ ಅಪರಾಧಗಳು ಸೇರಿದಂತೆ ನಾನಾ ರೀತಿಯ ಅಪರಾಧಗಳನ್ನು ತಡೆಯಲು ತಂತ್ರಜ್ಞಾನದ ಅವಕಾಶ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಯದ ಮಿತಿ ಇಲ್ಲದಂತೆ ದಿನದ 24 ಗಂಟೆಯೂ ಕರ್ತವ್ಯಪ್ರಜ್ಞೆ ಇಟ್ಟುಕೊಂಡು ಕೆಲಸ ಮಾಡುವುದರಿಂದ ಸಮಾಜದಲ್ಲಿ ನೆಮ್ಮದಿ ಮತ್ತು ಸೌಹಾರ್ದತೆ ನೆಲೆಸಿದೆ ಎಂದರು.ಮಹಿಳೆಯರು, ಮಕ್ಕಳು ಮತ್ತು ದುರ್ಬಲರು ಹಾಗೂ ಅಸಹಾಯಕರ ನಮ್ಮ ಸರ್ಕಾರ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತಿದೆ. ಪೊಲೀಸರೂ ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದರು.

ರಾಜ್ಯದ ಆರ್ಥಿಕ ಬೆಳವಣಿಗೆಗೂ, ಜಿಡಿಪಿ ಪ್ರಗತಿಗೂ ರಾಜ್ಯದ ಕಾನೂನು ಸುವ್ಯವಸ್ಥೆಗೂ ನೇರಾ ನೇರಾ ಸಂಬಂಧ ಇರುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಿದರೆ ಆರ್ಥಿಕತೆಗೂ ದೊಡ್ಡ ಕೊಡುಗೆ ಕೊಟ್ಟಂತಾಗುತ್ತದೆ ಎಂದರು.ಕರ್ನಾಟಕ ಡ್ರಗ್ಸ್ ಮುಕ್ತ ರಾಜ್ಯ ಆಗಬೇಕು ಎನ್ನುವ ಗುರಿ ನಮ್ಮ ಸರ್ಕಾರದ್ದಾಗಿದೆ. ಇದು ಪೊಲೀಸ್ ಇಲಾಖೆಯ ಗುರಿಯೂ ಆಗಬೇಕಿದೆ ಎಂದರು.

ಪದಕ ವಿಜೇತರೆಲ್ಲರಿಗೂ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಇವರ ಕಾರ್ಯ ಮತ್ತು ವೃತ್ತಿಪರತೆ ಇತರರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರುಗಳು ಉಪಸ್ಥಿತರಿದ್ದರು.‌

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img