Friday, July 17, 2026
23.9 C
Belagavi

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕಳೆದ ಬಾರಿಗಿಂತ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕಳೆದ ಬಾರಿಗಿಂತ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಮಹತ್ವ ಜನರಿಗೆ ಅರ್ಥವಾಗಿದೆ

ಇಂಧನ, ಅನಿಲ ಕೊರತೆ; ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ

ಬೆಂಗಳೂರು, ಏ.04:

“ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆ ಪ್ರಚಾರ ಮಾಡಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮನೆ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ. ಗ್ಯಾರಂಟಿ ಫಲಾನುಭವಿಗಳಲ್ಲಿ ಕಳೆದ ಬಾರಿ ಬಿಜೆಪಿಗೆ ಮತ ಹಾಕಿರುವವರೂ ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಬೇಲೆ ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆ ಎಷ್ಟು ನೆರವಾಗುತ್ತಿವೆ ಎಂದು ಸ್ಮರಿಸುತ್ತಿದ್ದಾರೆ. ಇವುಗಳನ್ನು ಉಳಿಸಿಕೊಳ್ಳಲು ಜನ ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು.

ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ ಬಗ್ಗೆ ಕೇಳಿದಾಗ, “ಕೇರಳ ಚುನಾವಣೆ ಪ್ರಚಾರಕ್ಕೆ ಎರಡು ದಿನ ಪ್ರವಾಸ ಮಾಡಬೇಕಾಗಿದ್ದು, ಅಲ್ಲಿ ಪ್ರವಾಸ ಮಾಡಿ ಬಂದ ಬಳಿಕ, ಇಲ್ಲಿ ದಾವಣಗೆರೆ ಅಥವಾ ಬಾಗಲಕೋಟೆಗೆ ತೆರಳುತ್ತೇನೆ” ಎಂದು ತಿಳಿಸಿದರು.ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ

ರಾಜ್ಯದಲ್ಲಿ ಗ್ಯಾಸ್ ಅಭಾವದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿದಾಗ, “ಆಟೋ ಚಾಲಕರಿಗೆ ಇದರಿಂದ ಬಹಳ ತೊಂದರೆಯಾಗುತ್ತಿದೆ. ಇದರಿಂದ ಸಂಚಾರ ವ್ಯವಸ್ಥೆಗೆ ಪರಿಣಾಮ ಬೀರುತ್ತಿದೆ. ಜತೆಗೆ ಹೊಟೇಲ್ ಕ್ಷೇತ್ರವು ಸಮಸ್ಯೆ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು” ಎಂದು ಆಗ್ರಹಿಸಿದರು.

ಆಟೋ ಚಾಲಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, “ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ ಬಳಿ ಕ್ಷಮೆ ಕೋರಬೇಕು” ಎಂದು ತಿಳಿಸಿದರು.

ಸಿಎಂ ದಾವಣಗೆರೆಯಲ್ಲಿ ಪ್ರಚಾರ ಮಾಡಲು ಹೇಳಿದ್ದು, ವೇಣುಗೋಪಾಲ್ ಅವರು ಕೇರಳದಲ್ಲಿ ಪ್ರಚಾರ ಮಾಡಲು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ನನಗೆ ಈ ವಿಚಾರವಾಗಿ ಗೊತ್ತಿಲ್ಲ. ಯಾರು ಇರಲಿ, ಇಲ್ಲದಿರಲಿ ನಮ್ಮ ಕರ್ತವ್ಯ ನಾವು ಮಾಡುತ್ತೇವೆ” ಎಂದು ತಿಳಿಸಿದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img