Friday, July 17, 2026
26.5 C
Belagavi

ಕಾಂಗ್ರೆಸ್ ನಿಂದ ಭಾರತದ ಮಹಿಳಾ ಶಕ್ತಿಗೆ ಅಪಮಾನ: ಬಸವರಾಜ ಬೊಮ್ಮಾಯಿ

advertisement

spot_img

ಕಾಂಗ್ರೆಸ್ ನಿಂದ ಭಾರತದ ಮಹಿಳಾ ಶಕ್ತಿಗೆ ಅಪಮಾನ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಗೆ ಮಹಿಳೆಯರ ಶಾಪ ತಟ್ಟೇ ತಟ್ಟುತ್ತದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಮಹಿಳಾ ವಂದನಾ (ಮಹಿಳೆಯರ ಮೀಸಲಾತಿ) ಬಿಲ್ಲನ್ನು ವಿರೋಧ ಮಾಡಿ ಸಮಗ್ರ ಭಾರತದ ಮಹಿಳಾ ಶಕ್ತಿಗೆ ಅಪಮಾನ ಮಾಡಿದೆ. ಕಾಂಗ್ರೆಸ್ ನೀಯತ್ತು ಯಾವತ್ತೂ ಮಹಿಳೆಯರಿಗೆ ಮೀಸಲಾತಿ ಕೊಡಲು ಇರಲಿಲ್ಲ. ಮೂವತ್ತು ವರ್ಷದಿಂದ ಮಾಡಿಕೊಂಡು ಬಂದಿರುವುದನ್ನು ಈಗ ಮತ್ತೆ ಮುಂದುವರೆಸಿದ್ದಾರೆ. ಇದರಿಂದ ಅವರಿಗೆ ಮಹಿಳೆಯರ ಶಾಪ ತಟ್ಟೇ ತಟ್ಟುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಎಕ್ಸ್ ಮಾಡಿರುವ ಅವರು, ಒಂದು ಪ್ರಗತಿಪರವಾದ ಚಿಂತನೆ ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕೆನ್ಮುವ ಅಭಿವೃದ್ಧಿ ಪರ ಚಿಂತನೆಗೆ ವಿರೋಧವಾಗಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಡೆದುಕೊಂಡಿವೆ. ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗದಿರುವುದನ್ನು ಇಡೀ ಭಾರತ ದೇಶ ಗಮನಿಸುತ್ತಿದೆ. ಈಗ ಕಾಂಗ್ರೆಸ್ ಸುಳ್ಳು ಸಮರ್ಥನೆ ಮಾಡಲು ಹೊರಟಿದೆ. ಯಾಕೆಂದರೆ 2023 ರಲ್ಲಿ ಶೇ 50% ರಷ್ಟು ಕ್ಷೇತ್ರಗಳ ಹೆಚ್ಚಳ ಮಾಡಬೇಕು. ಮುಂದಿನ ಜನಸಂಖ್ಯೆ ಆಧಾರದ ಮೇಲೆ ಮಾಡಬೇಕು ಅಂತ ಆಗಿತ್ತು. 2034 ಕ್ಕೆ ಜಾರಿ ಮಾಡಬೇಕೆಂದು ತೀರ್ಮಾನ ಆಗಿತ್ತು. ಅದನ್ನು 2029 ಕ್ಕೆ ಮಾಡಬೇಕು ಎನ್ನುವ ಕಾರಣದಿಂದ ಶೇ 50% ರಷ್ಟು ಸ್ಥಾನಗಳನ್ನು ಹೆಚ್ಚಿಗೆ ಮಾಡಬೇಕು. ಮಹಿಳೆಯರಿಗೆ ಶೇ 33% ರಷ್ಟು ಸ್ಥಾನ‌ ಮೀಸಲಿಡಬೇಕು ಎಂದು ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇ 50% ರಷ್ಟು ಸ್ಥಾನಗಳನ್ನು ಹೆಚ್ಚಳ ಮಾಡಬೇಕೆನ್ನುವ ಉದ್ದೇಶದಿಂದ ತಂದರೆ ಇವರು ಅದರಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ಈ ರಾಜಕೀಯ ಡೊಂಬರಾಟಕ್ಕೆ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತದೆ. ಈ ಕಟು ಸತ್ಯ ನಮಗೆಲ್ಲರಿಗೂ ಗೊತ್ತಾಗುತ್ತಿದೆ ಎಂದು ತಿಳಿಸಿದ್ದಾರೆ.ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ ಎನ್ನುವ ವಾದವನ್ನು ಲೋಕಸಭೆಯಲ್ಲಿ ಮುಂದಿಟ್ಟಿರುವ ಕಾಂಗ್ರೆಸ್ ಮಿತ್ರಪಕ್ಷ ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಶೇ 50% ರಷ್ಟು ಈಗಿರುವ ಲೋಕಸಭೆ, ವಿಧಾನಸಭೆ ಸ್ಥಾನಗಳಿಗೆ ಹೆಚ್ಚಳ ಮಾಡುತ್ತೇವೆ. ಅದಕ್ಕೆ ಕಾನೂನಿನಲ್ಲಿ ತಿದ್ದುಪಡಿ ತಂದು ಕಾನೂನಿನ ಭಾಗವಾಗಿ ಮಾಡುತ್ತೇವೆ ಅಂತ ಹೇಳಿದರೂ ವಿಪಕ್ಷಗಳು ಒಪ್ಪಲಿಲ್ಲ. ಇದನ್ನು ನೋಡಿದಾಗ ಕಾಂಗ್ರೆಸ್ ನವರಿಗೆ ಮಹಿಳಾ ಮೀಸಲಾತಿ ಬೇಕಾಗಿಲ್ಲ ಎನ್ನುವುದು ಬಹಳ ಸ್ಪಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ‌.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img