ಧಾರವಾಡದ ಎಸ್ ಡಿ ಎಂ (SDM) ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (SDMCET ) ಕಾಲೇಜಿನಲ್ಲಿ ಆಯೋಜಿಸಲಾದ ಸೃಷ್ಟಿ ಇನ್ನೋವೇಶನ್ ಎಕ್ಸ್ಚೇಂಜ್ 2026 (SRISHTI Innovation Exchange 2026) ಕಾರ್ಯಕ್ರಮ
3 ದಿನಗಳ ಕಾಲ ನಡೆಯುವ ಬೃಹತ್ ತಾಂತ್ರಿಕ ಉತ್ಸವವು ಹ್ಯಾಕಥಾನ್, ಐಡಿಯಾಥಾನ್ ಮತ್ತು ಬೃಹತ್ ವಸ್ತುಪ್ರದರ್ಶನದ ಮೂಲಕ ವಿದ್ಯಾರ್ಥಿಗಳ ಹೊಸ ಆವಿಷ್ಕಾರಗಳಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿದೆ. ಸುಸ್ಥಿರ ಅಭಿವೃದ್ಧಿ ಮತ್ತು ಆಧುನಿಕ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ.
ಪ್ರಧಾನಮಂತ್ರಿ ಶ್ರೀ Narendra Modi ಅವರ ‘ಆತ್ಮನಿರ್ಭರ ಭಾರತ’ ಮತ್ತು ‘ಸ್ಟಾರ್ಟ್-ಅಪ್ ಇಂಡಿಯಾ’ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ನಮ್ಮ ಯುವ ಇಂಜಿನಿಯರ್ಗಳು ತೋರುತ್ತಿರುವ ಉತ್ಸಾಹ ನಿಜಕ್ಕೂ ಶ್ಲಾಘನೀಯ. ಯುವಶಕ್ತಿಯ ಈ ನಾವೀನ್ಯತೆಯು ‘ವಿಕಸಿತ ಭಾರತ’ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಂತನೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಮುಂಚೂಣಿಯಲ್ಲಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP), ಇಂತಹ ನಾವೀನ್ಯತೆಯ ಕಾರ್ಯಕ್ರಮಗಳಿಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತಿರುವುದು ಶ್ಲಾಘನೀಯ .ತಾಂತ್ರಿಕ ಕೌಶಲ್ಯದ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಬೆಳೆಸುವ ದಿಸೆಯಲ್ಲಿ ಯುವಜನರನ್ನು ಪ್ರೇರೇಪಿಸುತ್ತಾ, ದೇಶದ ಸರ್ವಾಂಗೀಣ ಅಭಿವೃದ್ಧಿಗೆ ABVP ಮಹತ್ವದ ಕೊಡುಗೆ ನೀಡುತ್ತಿದೆ.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅರವಿಂದ ಬೆಲ್ಲದ Arvind Bellad , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಆಶಿಶ್ ಚೌಹಾಣ್, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಉಪಕುಲಪತಿಗಳಾದ ಡಾ.ವಿದ್ಯಾಶಂಕರ್ ಎಸ್, ಧಾರವಾಡ SDME ಸೊಸೈಟಿ ಕಾರ್ಯದರ್ಶಿಗಳಾದ ಶ್ರೀ ಜೀವಂಧರ್ ಕುಮಾರ್, ಧಾರವಾಡ SDME ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ ರಮೇಶ್ ಎಲ್ ಚಕ್ರಸಲಿ, ಎಬಿವಿಪಿ ಕರ್ನಾಟಕ ದಕ್ಷಿಣದ ರಾಜ್ಯಾಧ್ಯಕ್ಷರಾದ ಡಾ ರವಿ ಮಂಡ್ಯ, ರಾಜ್ಯ ಕಾರ್ಯದರ್ಶಿ ಶ್ರೀ ಗೋಪಾಲ ರಂಗಸ್ವಾಮಿ, ಕುಮಾರಿ ಲೇಖನಾ, ಸೇರಿದಂತೆ ಗಣ್ಯರು, ಪದಾಧಿಕಾರಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



