Friday, July 17, 2026
20.9 C
Belagavi

ಕೆ. ಸಿ ಜನರಲ್ ಅವರಣದಲ್ಲಿ ಪ್ಯಾಲಿಯೇಟಿವ್ ಕೇರ್ ಯೂನಿಟ್ ಉದ್ಘಾಟನೆ

advertisement

spot_img

ಕೆ. ಸಿ ಜನರಲ್ ಅವರಣದಲ್ಲಿ ಪ್ಯಾಲಿಯೇಟಿವ್ ಕೇರ್ ಯೂನಿಟ್ ಉದ್ಘಾಟನೆ

ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಸರನಂ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಮಲ್ಲೇಶ್ವರಂ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾಲಿಯೇಟಿವ್ ಕೇರ್ ಯುನಿಟ್ ಉದ್ಘಾಟನೆ ಮಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್.

ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ.
ಕೆ ಸಿ ಜನರಲ್ ಆಸ್ಪತ್ರೆಯಲ್ಲಿ
ಪ್ರಾಥಮಿಕವಾಗಿ ಐದು ಬೆಡ್ ಗಳ ಒಂದು ವಾರ್ಡ್ ನಿರ್ಮಾಣ ಮಾಡಿದ್ದೇವೆ. ಮಾರಣಾಂತಿಕ ಅಥವಾ ತೀವ್ರವಾದ ಕಾಯಿಲೆಗಳಿಂದ ಬಳಲುತ್ತ, ಅಂತಿಮ ಹಂತದಲ್ಲಿರುವ ರೋಗಿಗಳಿಗೆ ಇದು ವಿಶೇಷ ಯೂನಿಟ್ ಆಗಿದೆ. ಕ್ಯಾನ್ಸರ್, ಕಿಡ್ನಿ ವೈಫಲ್ಯ ಸೇರಿದಂತೆ ಇತರ ರೋಗಿಗಳ ಆರೈಕೆಗೆ ಈ ವಾರ್ಡ್ ಸಹಾಯಕ. ತೀವ್ರವಾದ ನೋವು, ಉಸಿರಾಟ ತೊಂದರೆ,ನರ ಸಂಬಂಧಿ ಕಾಯಿಲೆಯಿಂದ ಬಳಲುವವರು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವವರಿಗೆ ಈ ಕೇಂದ್ರ ಅನುಕೂಲ. ರೋಗವನ್ನು ಗುಣಪಡಿಸುವುದಕ್ಕೆ ಸಾಧ್ಯವಿಲ್ಲದ ಹಂತದಲ್ಲಿ ರೋಗಿಯ ದೈಹಿಕ ನೋವು & ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಇದನ್ನು ಮಾಡಿದ್ದೇವೆ. ರೋಗಿಗಳ ಕುಟುಂಬದವರಿಗೂ ಸೂಕ್ತ ತರಬೇತಿ ನೀಡಲಾಗುತ್ತದೆ.ಪ್ಯಾಲಿಯೇಟಿವ್ ಕೇರ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಿದ್ದೇವೆ.

ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಸರನಂ ಸಂಸ್ಥೆಯ ಸಹಕಾರದೊಂದಿಗೆ ಉದ್ಘಾಟನೆಯಾದ ಈ ಯುನಿಟ್ ನಲ್ಲಿ ತಜ್ಞರ ತಂಡದಿಂದ ಹೊರರೋಗಿ ವಿಭಾಗ, ಡೇ ಕೇರ್ ವಿಭಾಗ (ಅತಿಯಾದ ನೋವು ಮತ್ತು ವಯಕ್ತಿಕ ಸಮಾಲೋಚನೆ),
ಸುಸಜ್ಜಿತ ಒಳ ರೋಗಿ ವಿಭಾಗ ಮತ್ತು
ಕೆ. ಸಿ ಜನರಲ್‌ ಆಸ್ಪತ್ರೆಯಿಂದ 5-8 ಕಿಲೋ ವ್ಯಾಪ್ತಿಯಲ್ಲಿ ಮನೆಗೆ ತೆರಳಿ ಆರೈಕೆ ಮಾಡುವ ಮತ್ತು ಆರೈಕೆಗೆ ಪೂರಕ ತರಬೇತಿ ನೀಡುವ ಮೊಬೈಲ್ ಯುನಿಟ್ ಸಹ ಇರಲಿದೆ. ಮಾನವೀಯತೆ ದೃಷ್ಟಿಯಿಂದ ಈ ಸೇವೆ ನೀಡಲಾಗುತ್ತಿದ್ದು ಸರ್ವಜನಿಕರು ಇದರ ಉಪಯೋಗ ಪಡೆಯಬೇಕು.

ಕೆ ಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳು, ಸರನಂ ಇಂಡಿಯಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img