Friday, July 17, 2026
20.9 C
Belagavi

ಶ್ರೀ ಸಿದ್ದರಾಮೇಶ್ವರ ಜಯಂತಿಯ ಶುಭಾಶಯಗಳು ಮುಖ್ಯಮಂತ್ರಿ Siddaramaiah

advertisement

spot_img

ಸಮಾರಂಭದಲ್ಲಿ ಉಪಸ್ಥಿತರಿರುವ ಎಲ್ಲರಿಗೂ ಶ್ರೀ ಸಿದ್ದರಾಮೇಶ್ವರ ಜಯಂತಿಯ ಶುಭಾಶಯಗಳು. ಸಿದ್ದರಾಮೇಶ್ವರರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆ ತೊಲಗಬೇಕು ಎಂದು ಬಯಸಿದ್ದರು. ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ.

ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ.
2013 ಮೇ 13ರ ಬಸವ ಜಯಂತಿಯಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ.ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ. ಎಡಗೈಗೆ 5.25%, ಬಲಗೈಗೆ 5.25%, ಹಾಗೂ ಇತರ ಉಪಜಾತಿಗಳಿಗೆ 4.5% ಹಂಚಿಕೆ ಮಾಡಲಾಗಿದೆ.

ಭೋವಿ ಸಮುದಾಯದವರು ಇಟ್ಟಿರುವ ಬೇಡಿಕೆಗಳ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ. ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು. ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ.

ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಢಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿಸಿ, ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ.

– ಮುಖ್ಯಮಂತ್ರಿ Siddaramaiah ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img