Sunday, October 12, 2025
29.1 C
Belagavi

ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ: ಕೆ.ವಿ.ಪ್ರಭಾಕರ

advertisement

spot_img

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ.ವಿ.ಪ್ರಭಾಕರ್..

ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ: ಕೆ.ವಿ.ಪಿ ಅಭಿಪ್ರಾಯ…

ಬೆಂಗಳೂರು : ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಬೆಂಗಳೂರು ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ “ವಿಶ್ವ ಛಾಯಾಗ್ರಾಹಕ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.

ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಕ್ಯಗಳ ಹಂಗಿಲ್ಲ. ಪ್ರೀತಿ, ಪ್ರೇಮದ ಅಂಕುರ ಆಗೋದು ನೋಟದಿಂದಲೇ ಹೊರತು, ಮಾತಿನಿಂದಲ್ಲ. ಅದಕ್ಕೇ “Love at First Sight” ಎಂದು ಹೇಳೋದು. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳಿಗೆ ನೋಟ, ಒಳನೋಟ ಬಹಳ ಮುಖ್ಯ ಎಂದರು.

K v prabhakar ಫೋಟೋ ಜರ್ನಲಿಸ್ಟ್ ಗಳೇ ಸಂಘಟಿಸಿರುವ ಇವತ್ತಿನ ಕಾರ್ಯಕ್ರಮದಲ್ಲಿ ನನಗೆ ಕೆವಿನ್ ಕಾರ್ಟರ್ ಮತ್ತು ಸಂಗೊಳ್ಳಿಯ ಸಂಗವ್ವ ಇಬ್ಬರೂ “ಫೋಟೋ ಜರ್ನಲಿಸಂನ ದೃಶ್ಯ ಪಠ್ಯಗಳು” ಎಂದು ಹೇಳಲು ಇಚ್ಚಿಸುತ್ತೇನೆ. ಆಫ್ರಿಕಾದ ಫೋಟೋ ಜರ್ನಲಿಸ್ಟ್ ತೆಗೆದ ಒಂದು ಫೋಟೋ ಇವತ್ತಿಗೂ ತೀವ್ರ ಚರ್ಚೆಯ ಸಂಗತಿಯಾಗಿಯೇ ಉಳಿದಿದೆ ಎಂದು ತಿಳಿಸಿದರು.

ಯುದ್ಧ ಸಂತ್ರಸ್ಥ ಸುಡಾನ್ ದೇಶದಲ್ಲಿ ತೆಗೆದ ಫೋಟೋ ಅದು. ಗಂಜಿ ಕೇಂದ್ರಕ್ಕೆ ತೆವಳುತ್ತಿದ್ದ ಒಂದು ಮಗು ಹಸಿವಿನಿಂದ ನೆಲಕ್ಕೇ ತಲೆಕೊಟ್ಟು ನಿತ್ರಾಣಗೊಂಡಿದೆ. ಅಲ್ಲೇ ಒಂದು ರಣಹದ್ದು ಮಗುವನ್ನೇ ತಿನ್ನಲು ಹೊಂಚು ಹಾಕಿ ಕುಳಿತಿದೆ. ಈ ಫೋಟೋಗೆ 1994 ರಲ್ಲಿ ವಿಶ್ವಶ್ರೇಷ್ಠ ಪುಲಿಟ್ಜರ್ ಪ್ರಶಸ್ತಿ ಬಂತು. ಆದರೆ ಪ್ರಶಸ್ತಿ ಪಡೆದ ಕೆವಿನ್ ಕಾರ್ಟರ್ ಮೂರು ತಿಂಗಳಲ್ಲಿ ಅಳುಕಿನಿಂದ ಆತ್ಮಹತ್ಯೆ ಮಾಡಿಕೊಂಡರು. ಇದು ಪತ್ರಿಕಾ ವೃತ್ತಿಯ ಚರಿತ್ರೆಯಲ್ಲಿ ಅಳಿಸಲಾಗದ ಒಂದು ಪಠ್ಯವಾಗಿದೆ ಎಂದು ಹೇಳಿದರು.

ಕೆವಿನ್ ತೆಗೆದ ಒಂದು ಫೋಟೋ ಹುಟ್ಟಿಸಿದ ಪ್ರಶ್ನೆಗಳು ಆತನನ್ನು ಆತ್ಮಹತ್ಯೆಗೆ ದೂಡಿದರೆ, ಅದೊಂದು ಫೋಟೋದ ಮೇಲೆ ನೂರಾರು ಭಾಷೆಗಳಲ್ಲಿ ಕೋಟಿಗಟ್ಟಲೆ ಪದಗಳು, ವಾಕ್ಯಗಳಲ್ಲಿ ಚರ್ಚೆ ನಡೆಯಿತು. ಹೀಗಾಗಿ ನೋಟವೇ ಒಂದು ಭಾಷೆ. ಇದು ವಿಶ್ವ ಭಾಷೆಯಾಗಿದೆ ಎಂದು ಕೆ.ವಿ.ಪ್ರಭಾಕರ್ ವಿವರಿಸಿದರು.

ಹಾಗೆಯೇ ಒಂದೂ ಮಾತು, ಒಂದೇ ಒಂದು ಪದದ ಸಹವಾಸವಿಲ್ಲದೆ ಸಂಗೊಳ್ಳಿಯ ಸಂಗವ್ವ ವಿಶ್ವಕ್ಕೇ ಪರಿಚಯವಾದರು. ಸರ್ಕಾರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಘೋಷಿಸಿದಾಗ ಕುಹಕ, ಅಣಕ, ಟೀಕೆ, ವಿಮರ್ಷೆಗಳ ಮಹಾಪೂರವೇ ಹರಿಯುತ್ತಿತ್ತು. ಆದರೆ, ಉಚಿತ ಬಸ್ ಹತ್ತುವಾಗ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಸರ್ಕಾರಿ ಬಸ್ ನ ಮೆಟ್ಟಿಲುಗಳಿಗೆ ನಮಸ್ಕರಿಸಿದ ಒಂದು ಫೋಟೋ ಎಲ್ಲಾ ಕುಹಕ, ಅಣಕಗಳನ್ನು ಅಳಿಸಿಹಾಕಿತು. 24 ಗಂಟೆಯಲ್ಲಿ ಸಂಗವ್ವ ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿಬಿಟ್ಟರು.

ಹೀಗಾಗಿ ಕೆವಿನ್ ಕಾರ್ಟರ್ ಮತ್ತು ಸಂಗೊಳ್ಳಿಯ ಸಂಗವ್ವ ಫೋಟೋ ಜರ್ನಲಿಸಂನ ಎರಡು ಪಠ್ಯಗಳು ಎಂದು ನಾನು ಭಾವಿಸುತ್ತೇನೆ ಎಂದು ಅಭಿಪ್ರಾಯಪಟ್ಟರು.

ವರದಿಗಳು, ಮಾತುಗಳು, ಪದಗಳು ಸುಳ್ಳು ಹೇಳಬಹುದು ಅಥವಾ ಸತ್ಯವನ್ನು ತಿರುಚಬಹುದು. ಆದರೆ, ಫೋಟೋಗಳು, ನೋಟಗಳು ಸುಳ್ಳು ಹೇಳುವುದಿಲ್ಲ. ನಾವು ಬರೆಯುವ ಸುದ್ದಿಗಳಿಗೆ ಸತ್ಯದ ಮೊಹರೆ ಒತ್ತುವುದು ಫೋಟೋಗಳು ಎಂದರು.‌

ಫೋಟೋಗ್ರಫಿ ಪತ್ರಿಕೋದ್ಯಮದ ಅವಿಭಾಜ್ಯ ಅಂಗ. ಫೋಟೋಗಳು ಘಟನೆಯ ನೈಜ ಚಿತ್ರಣವನ್ನು ಓದುಗರ ಗ್ರಹಿಕೆಗೆ ಒದಗಿಸುತ್ತವೆ. ಆಧುನಿಕ ತಂತ್ರಜ್ಞಾನ ಫೋಟೋಗ್ರಫಿ ಹೆಚ್ಚಿನಮೌಲ್ಯತಂದುಕೊಟ್ಟಿದೆ. ಕೃತಕ‌ ಬುದ್ದಿಮತ್ತೆ ಒಂದು ಸವಾಲು ಮತ್ತು ಅವಕಾಶವೂ ಹೌದು. ಯಾವುದೇ ತಂತ್ರಜ್ಞಾನ ಬಂದರೂ ಅದಕ್ಕೆ ಸ್ವಂತ ಕಾಲ್ಪನಿಕ‌ ಶಕ್ತಿ ಇರುವುದಿಲ್ಲ. ಎಲ್ಲಿಯವರೆಗೂ ಫೋಟೋ ಜರ್ನಲಿಸ್ಟ್ ಗಳ ಕಲ್ಪನಾ ಸಾಮರ್ಥ್ಯ ಸೃಜನಶೀಲ ಮತ್ತು ಶ್ರೀಮಂತ ಹಾಗೂ ಸಹೃದಯತೆಯಿಂದ ಕೂಡಿರುತ್ತದೋ ಅಲ್ಲಿಯವರೆಗೂ ಯಾವ ತಂತ್ರಜ್ಞಾನವೂ ಅಪಾಯ ಒಡ್ಡುವುದಿಲ್ಲ ಎಂದು ವಿವರಿಸಿದರು.

ಸುಮಾರು 20 ವರ್ಷಗಳ ಹಿಂದೆ ಫೋಟೋಗ್ರಫಿ ಈಗಿನಷ್ಟು ಸರಾಗ ಮತ್ತು ಸುಲಭವಾಗಿರಲಿಲ್ಲ ಬಹಳ ಕಷ್ಟ ಪಡಬೇಕಾಗಿತ್ತು. ಆದರೆ ಬದಲಾದ ತಂತ್ರಜ್ಞಾನದಿಂದಾಗಿ ಫೋಟೋಗ್ರಫಿ ಅತ್ಯಂತ ಸುಲಭವಾಗಿದ್ದು, ಸೃಜನಶೀಲತೆ ರೂಪಿಸಿಕೊಂಡು ಫೋಟೋಗಳ ಮೂಲಕವೇ ಅರ್ಥಪೂರ್ಣ ಸ್ಟೋರಿಗಳನ್ನು ಸೃಷ್ಟಿಸುವ ಶಕ್ತಿ -ಸಾಮರ್ಥ್ಯ ರೂಡಿಸಿಕೊಂಡರೆ ಮಾತ್ರ ಈಗಿನ ಸ್ಪರ್ಧಾಜಗತ್ತಿನಲ್ಲಿ ಉಳಿಯಲು ಸಾಧ್ಯ ಎಂದರು.

ಇವತ್ತಿಗೂ ಗ್ರಾಮೀಣ ಮತ್ತು ತಾಲ್ಲೂಕು ಮಟ್ಟದಲ್ಲಿ ಸುದ್ದಿ ಬರೆಯುವ ವರದಿಗಾರರಿಗಿಂತ ಫೋಟೋಗ್ರಾಫರ್ ಗಳಿಗೇ ಹೆಚ್ಚು ಬೇಡಿಕೆ ಇದೆ. ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಒಂದು ಫೋಟೋ ಬಂದರೆ ಸಾಕು ಎಂದು ರಾಜಕಾರಣಿಗಳು ಕಾತರಿಸುತ್ತಾರೆ. ಯಾವುದೇ ಭಾಷೆಯವರಿಗಾದರೂ, ಅನಕ್ಷರಸ್ಥರಿಗೂ ಕೂಡ ಫೋಟೋ ಮೂಲಕ ಸಂವಹನ ನಡೆಸಬಹುದಾದ ಸಾಧ್ಯತೆಯೇ ಫೋಟೋ ಜರ್ನಲಿಸ್ಟ್ ಗಳ ಮಹತ್ವವನ್ನು ಹೇಳುತ್ತದೆ ಎಂದು ತಿಳಿಸಿದರು.

ಒಂದು ವರದಿಯನ್ನು ಸಂಪಾದಕರು ತೆಗೆದು ಪಕ್ಕಕ್ಕಿಡಬಹುದು. ಆದರೆ ಉತ್ತಮವಾದ ಒಂದು ಫೋಟೋವನ್ನು ಯಾರೂ ಪಕ್ಕಕ್ಕಿಡುವುದಿಲ್ಲ. ಆದ್ದರಿಂದ ಪತ್ರಿಕೆಗಳಲ್ಲಿ ಲಭ್ಯವಿರುವ ಸ್ಪೇಸ್ ಅನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಕೆವಿಪಿ ಕರೆ ನೀಡಿದರು.

ಡೆಕ್ಕನ್ ಹರಾಲ್ಡ್ ಸಂಸ್ಥೆಯ ಮುಖ್ಯಸ್ಥರಾದ ಕೆ.ಎನ್.ಶಾಂತಕುಮಾರ್, ಮಾಧ್ಯಮ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಹಿರಿಯ ಫೋಟೋ ಜರ್ನಲಿಸ್ಟ್ ಭಾಗ್ಯಪ್ರಕಾಶ್, ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷರಾದ ಮೋಹನ್, ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅವರು ಉಪಸ್ಥಿತರಿದ್ದರು.

ಇವತ್ತಿನ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟವೇ ಇರಲಿ, ಯುದ್ಧಗಳೇ ಇರಲಿ‌, ನಮ್ಮ ಪೂರ್ವಜರ ಮುಖಗಳನ್ನು ದಾಖಲಿಸಿ ಕೊಡುವುದು ಫೋಟೋಗಳು. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಏಕ ಕಾಲಕ್ಕೆ ಚರಿತ್ರಕಾರರೂ ಕೂಡ ಆಗಿರ್ತಾರೆ ಎಂದು ಪ್ರಭಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img