ಕೇರಳಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ವಿ.ಡಿ. ಸತೀಶನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ವಿದ್ಯಾರ್ಥಿ ದಶೆಯಲ್ಲಿಯೇ ಎನ್ಎಸ್ಯುಐ ಮೂಲಕ ರಾಜಕೀಯ ಪ್ರವೇಶ ಮಾಡಿದ ಅವರು, ಬಳಿಕ ಆರು ಬಾರಿ ಶಾಸಕರಾಗಿ ಹಾಗೂ ವಿರೋಧ ಪಕ್ಷದ ನಾಯಕರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ಅವರ ದೀರ್ಘ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಮತ್ತು ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವೇ ಅವರನ್ನು ಈ ಉನ್ನತ ಸ್ಥಾನಕ್ಕೆ ತಲುಪಿಸಿದೆ ಎಂದು ನಂಬಿದ್ದೇನೆ.
ಶಿಕ್ಷಣ, ಆರೋಗ್ಯ, ಕೈಗಾರಿಕೆ, ಉದ್ಯೋಗ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಕೇರಳವನ್ನು ಇನ್ನಷ್ಟು ಪ್ರಗತಿಪರ ರಾಜ್ಯವನ್ನಾಗಿ ರೂಪಿಸುವ ಸಾಮರ್ಥ್ಯ ಅವರಲ್ಲಿದೆ.
ಅವರ ನಾಯಕತ್ವದಲ್ಲಿ ಕೇರಳಂ ರಾಜ್ಯವು ಪ್ರಗತಿಪರ ಆಡಳಿತ, ಸಾಮಾಜಿಕ ನ್ಯಾಯ, ಸಮಗ್ರ ಅಭಿವೃದ್ಧಿ ಹಾಗೂ ಜನಕಲ್ಯಾಣದ ದಾರಿಯಲ್ಲಿ ಇನ್ನಷ್ಟು ಮುನ್ನಡೆಯಲಿದೆ ಎಂಬ ವಿಶ್ವಾಸವಿದೆ.
ಅವರಿಗೆ ಹಾಗೂ ಕೇರಳಂ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.



