Monday, June 1, 2026
26.1 C
Belagavi

ಬರಿದಾದ ಕೃಷ್ಣಾ ನದಿ: ಒಣಗುತ್ತಿರುವ ಬೆಳೆ, ಕುಡಿಯುವ ನೀರಿಗೂ ಹಾಹಾಕಾರ

advertisement

spot_img

ಬರಿದಾದ ಕೃಷ್ಣಾ ನದಿ: ಒಣಗುತ್ತಿರುವ ಬೆಳೆ, ಕುಡಿಯುವ ನೀರಿಗೂ ಹಾಹಾಕಾರ

ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ತೀವ್ರ ಜಲಕ್ಷಾಮ

ಮಹಾರಾಷ್ಟ್ರದೊಂದಿಗೆ ಮಾತುಕತೆ ನಡೆಸದ ಜನಪ್ರತಿನಿಧಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ

ಬೇಸಿಗೆಯಲ್ಲಿ ಬರ, ಮಳೆಗಾಲದಲ್ಲಿ ಪ್ರವಾಹ: ರೈತರಿಗೆ ಪ್ರಕೃತಿಯ ಜೋಡಿ ಹೊಡೆತ

ಚಿಕ್ಕೋಡಿ: ಉತ್ತರ ಕರ್ನಾಟಕದ ಕಪ್ಪು ಮಣ್ಣಿನ ಜೀವನಾಡಿಯಾದ ಕೃಷ್ಣಾ ನದಿ ಬೇಸಿಗೆಯ ಪ್ರಖರತೆಗೆ ಸಿಲುಕಿ ಸಂಪೂರ್ಣ ಬತ್ತಿ ಹೋಗಿದೆ. ನದಿಯಲ್ಲಿ ನೀರಿನ ಅಭಾವದಿಂದಾಗಿ ರಾಶಿ ರಾಶಿ ಜಲಚರಗಳು ಸಾವನ್ನಪ್ಪಿದ್ದು, ನದಿಪಾತ್ರದ ಹತ್ತಾರು ಗ್ರಾಮಗಳ ಜನರು ಕುಡಿಯುವ ಹಾಗೂ ದಿನಬಳಕೆ ನೀರಿಗಾಗಿ ಪರದಾಡುವಂತಹ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ.

ಕಳೆದ ಒಂದು ತಿಂಗಳಿನಿಂದ ನದಿಯಲ್ಲಿ ಹನಿ ನೀರಿಲ್ಲದೆ, ನದಿಪಾತ್ರದ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಕಣ್ಣೆದುರೇ ಒಣಗುತ್ತಿವೆ. ಅನ್ನದಾತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗದೆ ಕಂಗಾಲಾಗಿದ್ದಾರೆ.

ನದಿಯಲ್ಲಿ ನೀರು ಬತ್ತಿದ ಪರಿಣಾಮ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ, ಬಳವಾಡ, ಶಿರಹಟ್ಟಿ, ಸವದಿ ಗ್ರಾಮಗಳು ಹಾಗೂ ಬಾಗಲಕೋಟೆ ಜಿಲ್ಲೆಯ ಶಿರಗಪ್ಪಿ, ಮೈಗೂರ, ಮುತ್ತೂರ, ತುಬಚಿ, ಜಂಬಗಿ, ಹಿರೇಪಡಸಲಗಿ, ಟಕ್ಕಳಕ್ಕಿ, ಟಕ್ಕೋಡ, ಸೂರ್ಪಾಲಿ, ಕಂಕನವಾಡಿ, ಕಡಕೋಳ ಸೇರಿದಂತೆ ದಡದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದೆ.

ಕೃಷ್ಣಾ ನದಿಯನ್ನು ನಂಬಿಕೊಂಡು ಮಾಡಲಾಗಿದ್ದ ‘ಏತ ನೀರಾವರಿ’ ಯೋಜನೆಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಹತ್ತಾರು ಹಳ್ಳಿಗಳಿಗೆ ಕುಡಿಯುವ ನೀರಿನ ಪೂರೈಕೆ ನಿಂತುಹೋಗಿದೆ. ನದಿಯ ಪಕ್ಕದಲ್ಲೇ ಇದ್ದರೂ ದನಕರುಗಳಿಗೂ ಕುಡಿಯಲು ನೀರಿಲ್ಲದಂತಾಗಿದ್ದು, ಗ್ರಾಮಸ್ಥರು ಹಣ ಕೊಟ್ಟು ಶುದ್ಧ ಕುಡಿಯುವ ನೀರಿನ (RO) ಘಟಕಗಳ ಮೊರೆ ಹೋಗುವ ದುಸ್ಥಿತಿ ಒದಗಿದೆ.

ಬೆಳೆಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕು ಎಂಬ ಹತಾಶೆಯಲ್ಲಿ ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ (ಬೋರ್‌ವೆಲ್) ಕೊರೆಸುತ್ತಿದ್ದಾರೆ. ಆದರೆ ಅಂತರ್ಜಲ ಕುಸಿತದಿಂದಾಗಿ ಹೆಚ್ಚಿನ ಬೋರ್‌ವೆಲ್‌ಗಳು ವಿಫಲವಾಗುತ್ತಿವೆ. ಒಂದೆಡೆ ಒಣಗುತ್ತಿರುವ ಬೆಳೆ, ಮತ್ತೊಂದೆಡೆ ಕೈಕಚ್ಚಿದ ಬೋರ್‌ವೆಲ್ ಖರ್ಚು—ರೈತರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ದೂಡಿದೆ.

ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ:

“ಮಹಾರಾಷ್ಟ್ರದಿಂದ ನೀರು ಬಿಡಿಸುವ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಿಯೋಗವೊಂದು ತೆರಳಿ ಮಾತುಕತೆ ನಡೆಸಲಿದೆ” ಎಂದು ಈ ಭಾಗದ ಜನಪ್ರತಿನಿಧಿಗಳು ಹೇಳಿಕೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಸಚಿವರಾಗಲಿ, ಸಂಸದರು, ಶಾಸಕರಾಗಲಿ ಮಹಾರಾಷ್ಟ್ರದ ಜೊತೆ ಮಾತುಕತೆಗೆ ಮುಂದಾಗಿಲ್ಲ ಎಂದು ನದಿ ತೀರದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಕೃಷ್ಣಾ ನದಿ ಬತ್ತಿ ಹೋಗುವುದು ಸಾಮಾನ್ಯವಾಗಿದೆ. ಆದರೂ ಈ ಭಾಗದ ಜನಪ್ರತಿನಿಧಿಗಳು ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. “ನಮ್ಮ ಕಷ್ಟಕ್ಕೆ ಸ್ಪಂದಿಸದ ರಾಜಕಾರಣಿಗಳಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತೇವೆ” ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಬೇಸಿಗೆಯಲ್ಲಿ ನೀರಿಲ್ಲದೆ ಕಂಗಾಲಾಗುವ ನಾವು, ಮಳೆಗಾಲದಲ್ಲಿ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುವ ಮಳೆಯಿಂದಾಗಿ ಕೃಷ್ಣಾ ನದಿ ಪ್ರವಾಹಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಹಾನಿ ಅನುಭವಿಸುತ್ತೇವೆ. ವರ್ಷದಲ್ಲಿ ಎರಡು ಬಾರಿ ನಿಸರ್ಗದ ಹೊಡೆತಕ್ಕೆ ಸಿಲುಕಿದರೂ, ಯಾವುದೇ ಸರ್ಕಾರ ಅಥವಾ ನಿರಂತರವಾಗಿ ಆಯ್ಕೆಯಾಗುವ ಜನಪ್ರತಿನಿಧಿಗಳು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸ್ಪಂದಿಸಿದರೂ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ರೈತ ಮುಖಂಡ ಎಂ.ಸಿ. ತಾಂಬೋಳಿ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೃಷ್ಣಾ ನದಿಯಲ್ಲಿ ನೀರು ಬತ್ತಿರುವ ಈ ಸಂದರ್ಭದಲ್ಲಿ, ಸರ್ಕಾರ ತಕ್ಷಣವೇ ಶುದ್ಧ ನೀರಿನ ಘಟಕಗಳ ಮೂಲಕ ಸಾರ್ವಜನಿಕರಿಗೆ ಉಚಿತವಾಗಿ ಕುಡಿಯುವ ನೀರು ಪೂರೈಸಬೇಕು.ಯ ಎಂದು ಆಗ್ರಹಿಸಿದರು.

ಮಹಾರಾಷ್ಟ್ರ ಸರ್ಕಾರದೊಂದಿಗೆ ಕೂಡಲೇ ಉನ್ನತ ಮಟ್ಟದ ಮಾತುಕತೆ ನಡೆಸಿ, ಬೇಸಿಗೆಯಲ್ಲಿ ಕನಿಷ್ಠ ಕುಡಿಯುವ ನೀರಿಗಾದರೂ ತೊಂದರೆಯಾಗದಂತೆ ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ನೀರಿಲ್ಲದೆ ಒಣಗುತ್ತಿರುವ ಬೆಳೆಗಳ ಸಮೀಕ್ಷೆ ನಡೆಸಿ, ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು.

ಆಡಳಿತ ವ್ಯವಸ್ಥೆ ಎಷ್ಟರಮಟ್ಟಿಗೆ ಜಡ್ಡುಗಟ್ಟಿದೆ ಎಂಬುದಕ್ಕೆ ಕೃಷ್ಣಾ ನದಿ ತೀರದ ಈ ಶೋಚನೀಯ ಸ್ಥಿತಿಯೇ ಕನ್ನಡಿಯಾಗಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಅನ್ನದಾತರ ನೆರವಿಗೆ ಧಾವಿಸಬೇಕಿದೆ ಎಂದು ನದಿ ತೀರದ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

 

 

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img