Friday, July 17, 2026
20.9 C
Belagavi

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಜಾರಿಗೆ ತಂದ ಕಾನೂನು ಎತ್ತಿ ಹಿಡಿದಿರುವ ಸುಪ್ರೀಂ ಕೊರ್ಟ್

advertisement

spot_img

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಜಾರಿಗೆ ತಂದ ಕಾನೂನು ಎತ್ತಿ ಹಿಡಿದಿರುವ ಸುಪ್ರೀಂ ಕೊರ್ಟ್

ಸುಪ್ರೀಂಕೋರ್ಟ್ ಆದೇಶ ಸ್ವಾಗತಿಸಿದ ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು:ನನ್ನ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಆನ್‌ಲೈನ್ ಗೇಮಿಂಗ್ ನಿಷೇಧಿಸುವ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಆನ್‌ಲೈನ್ ಗೇಮಿಂಗ್ ತಡೆಯುವ ನಮ್ಮ ಉದ್ದೇಶಕ್ಕೆ ಜಯ ಸಿಕ್ಕಂತಾಗಿದ್ದು, ಸುಪ್ರೀಂ ಕೊರ್ಟ್‌ನ ಈ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾದ ಜೆಬಿ ಪರ್ಡಿವಾಲಾ ಮತ್ತು ಆರ್. ಮಹದೇವನ್ ಅವರ ಡಬಲ್ ಬೆಂಚ್ ನನ್ನ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಸರ್ಕಾರ ಆನ್‌ಲೈನ್ ಗ್ಯಾಂಬ್ಲಿಂಗ್ ವಿರುದ್ಧ ತಂದಿರುವ ಕಾನೂನನ್ನು ಎತ್ತಿ ಹಿಡಿದಿದ್ದಾರೆ. ನನ್ನ ಸರ್ಕಾರ ಇದ್ದಾಗ ಕರ್ನಾಟಕ ಪೊಲಿಸ್ ಅಮೆಂಡ್‌ಮೆಂಟ್ ಆಕ್ಟ್ 2021 ತಂದಿದ್ದು, ಅದರಲ್ಲಿ ಕನಾಟಕ ಪೊಲಿಸ್ ಆಕ್ಟ್ 1963ಗೆ ಹಲವಾರು ಬದಲಾವಣೆ ತಂದು ಗ್ಯಾಂಬ್ಲಿಂಗ್ ವ್ಯಾಖ್ಯಾನ ವಿಸ್ತರಣೆ ಮಾಡಿ ಆನ್‌ಲೈನ್‌ ಗೇಮಿಂಗ್‌ನ್ನು ಜಾಮೀನು ರಹಿತ ಅಪರಾಧ ಅಂತ ಕಾನೂನು ತಿದ್ದುಪಡಿ ತಂದು ಆನ್‌ಲೈನ್‌ಗೆ ಸಂಪೂರ್ಣ ಕಡಿವಾಣ ಹಾಕಲು ಕಾನೂನು ತಂದಿದ್ದೇವು. ಅದಕ್ಕೆ ಹೈಕೋರ್ಟ್ ತಡೆ ನೀಡಿತ್ತು ಅದರ ವಿರುದ್ಧ ನಾವು ಸುಪ್ರೀಂ ಕೊರ್ಟ್‌ಗೆ ಹೋಗಿದ್ದೇವು. ಈಗ ಸುಪೀಂ ಕೋರ್ಟ್ ನಮ್ಮ ಕಾನೂನು ಮತ್ತು ತಮಿಳುನಾಡಿನ ಕಾನೂನು ಎತ್ತಿ ಹಿಡಿಯುವ ಮೂಲಕ ಆನ್‌ಲೈನ್ ಗೇಮಿನಿಂದ ಹಲವಾರು ಜನರು ಮತ್ತು ಬಡವರು ಆರ್ಥಿಕವಾಗಿ ನಷ್ಟ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವ ಉದ್ದೇಶಕ್ಕೆ ಜಯಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತ ಮಾಡುತ್ತೇನೆ. ಈಗಿರುವ ಕರ್ನಾಟಕ ಸರ್ಕಾರ ಇದನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಆನ್‌ಲೈನ್ ಗೆಮಿಂಗ್ ತಡೆಗಟ್ಟಿ ಹಲವಾರು ಸಂಸಾರಗಳು ತೊಂದರೆಗೆ ಒಳಗಾಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img