Sunday, May 31, 2026
34.1 C
Belagavi

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

advertisement

spot_img

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು: ಮೇ 29, ಸಾರ್ವಜನಿಕ ವಾಹನಗಳಿಗೆ ಹಾನಿ ಮಾಡುವ ದುರುದ್ದೇಶದಿಂದ ಸಾರ್ವಜನಿಕ ರಸ್ತೆಗಳಲ್ಲಿ ಕಬ್ಬಿಣದ ಮೊಳೆಗಳನ್ನು ಹರಡುತ್ತಿರುವ ಕಿಡಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ!

ಬೆಂಗಳೂರು ಮಹಾನಗರವು ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರವಾಗಿದ್ದು ಕಛೇರಿ ಕೆಲಸ, ವ್ಯವಹಾರ, ಉದ್ದಿಮೆ, ತುರ್ತು ಸೇವೆಯ ವಾಹನಗಳು ಸೇರಿದಂತೆ ಪ್ರತಿದಿನ ನಗರದಲ್ಲಿ ಲಕ್ಷಾಂತರ ವಾಹನಗಳು ಸಂಚರಿಸುತ್ತಿರುತ್ತವೆ, ಆದರೆ ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವು ಪಂಕ್ಚರ್ ಶಾಪ್‌ನ ಮಾಲೀಕರು/ವ್ಯಕ್ತಿಗಳು ಕಿಡಗೇಡಿಗಳು ಅಡ್ಡದಾರಿಯಲ್ಲಿ ಹಣ ಮಾಡುವ ದುರುದ್ದೇಶದಿಂದ ಪ್ರತಿದಿನ ಸಾರ್ವಜನಿಕ ರಸ್ತೆಗಳಲ್ಲಿ, ಪ್ರಮುಖ ರಸ್ತೆ, ಸುರಂಗ ಮಾರ್ಗ, ಪ್ಲ ಓವರ್‌ಗಳ ಮೇಲೆ ಸೇರಿದಂತೆ ವಾಹನಗಳ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಕಬ್ಬಿಣದ ಮೊಳೆಗಳನ್ನು ಹರಡಿ ವಾಹನಗಳು ಪಂಕ್ಚರ್ ಆಗುವಂತೆ ಮಾಡಿ ನಂತರ ಪಂಕ್ಚರ್ ಹಾಕಲು ಸಾರ್ವಜನಿಕರಿಂದ ಅಧಿಕ ಹಣಕ್ಕೆ ಒತ್ತಾಯಿಸಿ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು

ಈ ರೀತಿಯ ದುರುದ್ದೇಶದಿಂದ ವಾಹನಗಳು ಅಪಘಾತಕ್ಕೊಳಗಾಗುವ ಸಂಭವಗಳು ಹೆಚ್ಚಿರುತ್ತದೆ ಅಲ್ಲದೇ ತುರ್ತು ಸೇವೆಯ ವಾಹನಗಳಾದ ಅಂಬುಲೆನ್ಸ್‌ ಗಳು ರೋಗಿಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಲ್ಲಿ ವಿಫಲವಾಗಿ ರೋಗಿಗಳು ಸಾವನ್ನಪ್ಪುವ ಸಂಭವವು ಅಧಿಕವಾಗಿರುತ್ತದೆ, ಅಲ್ಲದೇ ತುರ್ತು ಸೇವೆಯ ಅಗ್ನಿಶಾಮಕ, ಪೊಲೀಸ್ ವಾಹನಗಳಿಗೆ ಹಾನಿಯಾಗುವುದರಿಂದ ಮುಂದಾಗುವ ಅನಾಹುತಗಳನ್ನು, ವಿಪತ್ತುಗಳನ್ನು ನಿರ್ವಹಿಸಲು ವಿಫಲವಾಗುವ ಸಂಭವಗಳಿದ್ದು ಹಾಗೂ ಎಲ್ಲಾ ಸಾರ್ವಜನಿಕ ವಾಹನಗಳು ನಿಗದಿತ ಸಮಯದಲ್ಲಿ ಕಛೇರಿಗಳಿಗೆ, ಮನೆಗಳಿಗೆ, ಶಾಲೆ-ಕಾಲೇಜ್ ಗಳಿಗೆ ಹಾಗೂ ಇತರೆ ಕೆಲಸಗಳಿಗೆ ತಲುಪಲಾಗದೇ ಮಾನಸಿಕ ಒತ್ತಡಕ್ಕೊಳಗಾಗುತ್ತಿರುವುದಲ್ಲದೆ ಅನಗತ್ಯ ಹಣ ವ್ಯಯಿಸುತ್ತಿರುವುದನ್ನು ಖಂಡಿಸಿ ಸಾರ್ವಜನಿಕರು ಪ್ರತಿದಿನ ಸ್ವತಃ ಕಾರ್ಯಾಚರಣೆಗಳನ್ನು ನಡೆಸಿ ಸಾಮಾಜಿಕ ತಾಣ ಹಾಗೂ ಮಾಧ್ಯಮದಲ್ಲಿ ವರದಿ ಮಾಡುತ್ತಿರುತ್ತಾರಲ್ಲದೇ ಹಲವು ರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈ ಮಾಫಿಯಾವನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿರುತ್ತಾರೆ,ಈ ಚಟುವಟಿಕೆಗಳು ನಗರದ ಕೆಲವು ಪೊಲೀಸ್ ಠಾಣೆಯ ಮುಂಭಾಗದ ರಸ್ತೆಗಳಲ್ಲೇ ರಾಜಾರೋಷವಾಗಿ ನಡೆಸುತ್ತಿರುವುದು ಸಹ ವರದಿಯಾಗಿದ್ದು ಸದರಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರು ನಗರದ ಸಾರ್ವಜನಿಕ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿ ಹಣ ವಸೂಲಿ ಮಾಡುವ ದುರುದ್ದೇಶದಿಂದ ಕಬ್ಬಿಣದ ಮೊಳೆಗಳನ್ನು ಹರಡುತ್ತಿರುವ (ಮೊಳೆ ಮಾಫಿಯಾ) ಕಿಡಗೇಡಿಗಳನ್ನು ಪತ್ತೆ ಮಾಡಿ ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ನಗರದ ಆಯಾ ಠಾಣೆ ವ್ಯಾಪ್ತಿಯ ಎಲ್ಲಾ ಪಂಚರ್ ಶಾಪ್‌ನ ಮಾಲೀಕರಿಗೆ ಗಂಭೀರ ಎಚ್ಚರಿಕೆಗಳನ್ನು ನೀಡಿ ಅವರ ಮೇಲೆ ನಿಗಾವಹಿಸುವಂತೆ ಪತ್ರ ಬರೆದಿದ್ದಾರೆ

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img