Wednesday, June 10, 2026
24.1 C
Belagavi

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ ಮುಖಂಡರ ಆಗ್ರಹ

advertisement

spot_img

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ ಮುಖಂಡರ ಆಗ್ರಹ

​ಅಥಣಿ: ಉತ್ತರ ಕರ್ನಾಟಕದ ಪ್ರಭಾವಿ ಹಿರಿಯ ರಾಜಕಾರಣಿ ಹಾಗೂ ದಲಿತ ಸಮುದಾಯದ ಪ್ರಬಲ ನಾಯಕ ಆರ್.ಬಿ. ತಿಮ್ಮಾಪುರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ರಾಜ್ಯ ಮಾಧ್ಯಮ ವಕ್ತಾರ ರಾವಸಾಬ ಐಹೊಳೆ ಹಾಗೂ ದಲಿತ ಮುಖಂಡರು ಒತ್ತಾಯಿಸಿದ್ದರು.​ಅಥಣಿ ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್.ಬಿ. ತಿಮ್ಮಾಪುರ ಅವರು ಉತ್ತರ ಕರ್ನಾಟಕದ ಹಿರಿಯ ಶಾಸಕರಾಗಿದ್ದು, ಈ ಹಿಂದೆ ಅನೇಕ ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ ಅಪಾರ ಅನುಭವ ಹೊಂದಿದ್ದಾರೆ. ಇತ್ತೀಚೆಗೆ ನಡೆದ ಬಾಗಲಕೋಟೆ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಅವರ ಗೆಲುವಿನಲ್ಲಿ ತಿಮ್ಮಾಪುರ ಅವರ ಪಾತ್ರ ಅತ್ಯಂತ ಪ್ರಮುಖವಾಗಿತ್ತು ಎಂದು ಸ್ಮರಿಸಿದರು.
​ತಮ್ಮ ರಾಜಕೀಯ ಬದುಕಿನುದ್ದಕ್ಕೂ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು, ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ. ಅವರ ಈ ನಿಸ್ವಾರ್ಥ ಶ್ರಮವನ್ನು ಪರಿಗಣಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರಿಗೆ ಪ್ರಮುಖ ಖಾತೆಯ ಸಚಿವ ಸ್ಥಾನವನ್ನು ನೀಡಬೇಕು ಎಂದು ಅವರು ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರನ್ನು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ನಿರ್ದೇಶಕಿ ಹಾಗೂ ಎಐಸಿಸಿ ಸಂಯೋಜಕಿ ಸುನಿತಾ ಐಹೊಳೆ ಮಾತನಾಡಿ, ಉತ್ತರ ಕರ್ನಾಟಕದ ದಲಿತ ಸಮುದಾಯದ ಹಿರಿಯ ನಾಯಕರಾಗಿರುವ ಆರ್.ಬಿ. ತಿಮ್ಮಾಪುರ ಅವರು ನಾಲ್ಕೈದು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿ, ರಾಜ್ಯಕ್ಕೆ ತಮ್ಮದೇ ಆದ ಅನೇಕ ಅಭಿವೃದ್ಧಿ ಕೊಡುಗೆಗಳನ್ನು ನೀಡಿದ್ದಾರೆ. ಹೀಗಾಗಿ, ರಾಜ್ಯ ಹಾಗೂ ಕೇಂದ್ರದ ವರಿಷ್ಠರು ಅವರಿಗೆ ಮಂತ್ರಿ ಸ್ಥಾನವನ್ನು ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
​ಈ ಸಂದರ್ಭದಲ್ಲಿ ಅಥಣಿ ತಾಲೂಕು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಹನುಮಂತ ಅರ್ದಾಯೂರ, ಸಮಾಜದ ಮುಖಂಡರಾದ ಕುಮಾರ ಗಸ್ತಿ, ಸಂತೋಷ್ ಹಾದಿಮನಿ, ಸದಾಶಿವ ದೊಡ್ಡಮನಿ, ಸುದೀಪ್ ಐಹೊಳೆ, ಸತೀಶ್ ಕುಲ್ಲೊಳ್ಳಿ, ಪ್ರಶಾಂತ್ ಆಚಾರಟ್ಟಿ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Hot this week

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ...

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದುರಂತ...

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ...

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ...

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ನನ್ನ...

Topics

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ...

ವಿಶ್ವಕರ್ಮರಿಂದ ಮಾತ್ರ ದೇಶ ಕಟ್ಟಲು ಸಾಧ್ಯ:ಬಸವರಾಜ ಬೊಮ್ಮಾಯಿ

ವಿಶ್ವಕರ್ಮರಿಂದ ಮಾತ್ರ ದೇಶ ಕಟ್ಟಲು ಸಾಧ್ಯ:ಬಸವರಾಜ ಬೊಮ್ಮಾಯಿ ವಿಶ್ವಕರ್ಮರಿಗೆ ಗೌರವ, ಮನ್ನಣೆ ಸಿಗುವ...
spot_img

Related Articles

Popular Categories

spot_img