Tuesday, June 16, 2026
22.8 C
Belagavi

ಪರಿಹಾರದ ವಿಚಾರದಲ್ಲಿ ತಾರತಮ್ಯ ಆರೋಪ: ಪ್ರಾಧಿಕಾರ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿ ಏಟು

advertisement

spot_img

ಪರಿಹಾರದ ವಿಚಾರದಲ್ಲಿ ತಾರತಮ್ಯ ಆರೋಪ: ಪ್ರಾಧಿಕಾರ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿ ಏಟು

ಬಾಗಲಕೋಟೆ, 

ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಮುಳುಗಡೆ ಸಂತ್ರಸ್ತ ರೈತನೊಬ್ಬ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ನಡೆದಿದೆ.
ಮುಳುಗಡೆ ಸಂತ್ರಸ್ತ ರೈತ ಬಸಪ್ಪ ಎಂಬಾತ, ತನ್ನ ಪರಿಹಾರದ ಕಡತವನ್ನು ಪದೇ ಪದೇ ವಿಳಂಬಗೊಳಿಸಿ ಕಚೇರಿಗೆ ಅಲೆದಾಡುವಂತೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ ಕಚೇರಿಯ ಪ್ರಥಮ ದರ್ಜೆ ನೌಕರ ಅಂಕದ ಅವರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿದೆ.ಇಬ್ಬರ ನಡುವೆ ವಾಗ್ವಾದ ತೀವ್ರಗೊಂಡು ಪರಸ್ಪರ ಎದೆ ಮೇಲಿನ ಬಟ್ಟೆ ಹಿಡಿದು ಜಗಳ ನಡೆದಿದೆ. ಈ ವೇಳೆ ರೊಚ್ಚಿಗೆದ್ದ ರೈತ ಬಸಪ್ಪ, ನೌಕರನಿಗೆ ಚಪ್ಪಲಿಯಿಂದ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.ಘಟನೆ ನಡೆಯುತ್ತಿದ್ದ ವೇಳೆ ಕಚೇರಿಯಲ್ಲಿ ಇದ್ದ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರದ ಕೂಗು ಹಾಕಿದರು. ಪರಿಹಾರ ವಿತರಣೆಯಲ್ಲಿ ಅನ್ಯಾಯ ಮತ್ತು ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು.
ಘಟನೆಯಿಂದ ಕೆಲಕಾಲ ಪ್ರಾಧಿಕಾರದ ಕಚೇರಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ಮುಂದುವರಿಯಿತು. ಬಳಿಕ ಸ್ಥಳೀಯರು ಮತ್ತು ಇತರ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಘಟನೆ ಕುರಿತು ಸಂಬಂಧಿತ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ದೂರು ದಾಖಲಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪರಿಹಾರದ ವಿಚಾರದಲ್ಲಿ ಉಂಟಾದ ಅಸಮಾಧಾನವೇ ಈ ಘಟನೆಗೆ ಕಾರಣವಾಗಿದ್ದು, ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸಂಘಟನೆಗಳು ಆಗ್ರಹಿಸಿವೆ.

Hot this week

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ : ಸಚಿವ ಡಾ.ಯತೀಂದ್ರ ಭರವಸೆ..

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ...

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ ಅಂತರಾಷ್ಟ್ರೀಯ ಯೋಗ ದಿನಾಚರಣೆ...

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸೂಚನೆ

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ...

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ. ಕುಮಾರಸ್ವಾಮಿ

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ....

Topics

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಿಎಂ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಹೇಳಿಕೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ...

ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ

ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ದುರ್ಮರ,ಮೂವರ...
spot_img

Related Articles

Popular Categories

spot_img