Wednesday, July 15, 2026
25.6 C
Belagavi

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬಸವರಾಜ ಬೊಮ್ಮಾಯಿ

advertisement

spot_img

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬಸವರಾಜ ಬೊಮ್ಮಾಯಿ

ಹಲ್ಲೆ ಮಾಡಿದವರನ್ನು ಬಂಧಿಸಿ, ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಿ: ಬಸವರಾಜ ಬೊಮ್ಮಾಯಿ ಆಗ್ರಹ

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೆಗಲ್ ಗ್ರಾಮದಲ್ಲಿ ನಿನ್ನೆ ನಡೆದ ಹಿಂಸಾತ್ಮಕ ಘಟನೆ ಅತ್ಯಂತ ಹೇಯ ಕೃತ್ಯವಾಗಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಯತ್ನ ನಡೆದಿದ್ದು ಮತ್ತು ಉದ್ದೇಶ ಪೂರ್ವಕವಾಗಿ ಹೋರಿ ಬೆದರಿಸುವ ಯುವಕರ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಖಂಡನೀಯ. ಕೂಡಲೇ ತಪ್ಪಿತಸ್ಥರ ಮೇಲೆ ಅತ್ಯಂತ ಕಠಿಣ ಶಿಸ್ತಿನ ಕ್ರಮ ತೆಗೆದುಕೊಂಡು ಅವರನ್ನು ಜೈಲಿಗೆ ಕಳುಹಿಸಬೇಕು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಟ್ಟು ಸರ್ಕಾರ ಪರಿಹಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಕುರಿತು ಎಕ್ಸ್ ಮಾಡಿರುವ ಅವರು, ಈ ಥರದ ದ್ವೇಷದ ವಾತಾವರಣ ಮಾಡುತ್ತಿರುವವರಿಗೆ ರಾಜಕೀಯ ಪ್ರೋತ್ಸಾಹ ಇರುವುದು ಬಹಳ ಸ್ಪಷ್ಟ ಮತ್ತು ಪೊಲಿಸ್ ಇಲಾಖೆ ಈ ಪ್ರಚೋದನೆ ಮಾಡುವ ನಾಯಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದನ್ನು ನಿಯಂತ್ರಿಸಲು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಗಳು ವಿಫಲವಾಗಿದ್ದಾರೆ. ಇದರ ಹಿಂದೆ ಕಾನೂನು ಬಾಹಿರ ಚಟುವಟಿಕೆ, ಒಸಿ, ಇಸ್ಪೀಟ್ ಆಡಿಸುವವರ ಕುಮ್ಮಕ್ಕು ಕೂಡ ಇದೆ. ಇದು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಕೂಡಲೇ ತಪ್ಪಿತಸ್ಥರ ಮೇಲೆ ಅತ್ಯಂತ ಕಠಿಣ ಶಿಸ್ತಿನ ಕ್ರಮ ತೆಗೆದುಕೊಂಡು ಅವರನ್ನು ಜೈಲಿಗೆ ಕಳುಹಿಸಬೇಕು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಟ್ಟು ಸರ್ಕಾರ ಪರಿಹಾರ ಕೊಡಬೇಕು ಮತ್ತು ಅಲ್ಲಿಯ ಪೊಲಿಸ್ ಇಲಾಖೆ ಅಧಿಕಾರಿಗಳನ್ನು ಕೂಡಲೆ ವರ್ಗಾವಣೆ ಮಾಡಬೇಕೆಂದು ಗೃಹ ಸಚಿವರು ಮತ್ತು ಪೊಲಿಸ್ ಹಿರಿಯ ಅಧಿಕಾರಿಗಳಿಗೆ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img