ರಟ್ಟಿಹಳ್ಳಿ ಕೊಲೆ ಪ್ರಕರಣ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸಂಸದ ಬೊಮ್ಮಾಯಿ ಆಗ್ರಹ
ಹಾವೇರಿ: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಶಿವಾಜಿ ರಾವ್ ಬೈರೋಜಿ ಎಂಬ ವ್ಯಕ್ತಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವುದು ಅತ್ಯಂತ ಖಂಡನೀಯ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅಪರಾಧಿಗಳಿಗೆ ಯಾವುದೇ ಭಯ ಇಲ್ಲದಂತಾಗಿದೆ. ಡಿಜಿಪಿ ತಕ್ಷಣವೇ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು ಪೊಲಿಸ್ ಠಾಣೆಗಳು ವಸೂಲಿ ಕೇಂದ್ರಗಳಾಗಿದ್ದು, ಅಪರಾಧಿಗಳಿಗೆ ಯಾವುದೇ ಭಯ ಇಲ್ಲದಂತಾಗಿದೆ. ಆರೋಪಿಗಳ ವಿರುದ್ದ ದೂರು ದಾಖಲಿಸಿದರೂ ಪೊಲಿಸರು ಬಂಧಿಸದೇ ಅವರನ್ನು ರಾಜಾರೋಷವಾಗಿ ತಿರುಗಾಡಲು ಬಿಟ್ಟಿದ್ದು, ಅಪರಾಧಿಗಳಿಗೆ ಯಾವುದೇ ಭಯ ಇಲ್ಲದಂತಾಗಿದೆ. ಡಿಜಿಪಿ ತಕ್ಷಣವೇ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.



