Friday, July 17, 2026
20.9 C
Belagavi

ಶ್ರೀನಯ ಶಂಕರ ಪಾಗೋಜಿ ಹುಟ್ಟು ಹಬ್ಬದ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

advertisement

spot_img

ಶ್ರೀನಯ ಶಂಕರ ಪಾಗೋಜಿ ಹುಟ್ಟು ಹಬ್ಬದ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

ಮಾತೃ ಭಾಷೆಯಲ್ಲಿ ಕಲಿತ ಮಕ್ಕಳೇ ಮುಂದಿದ್ದಾರೆ: ಡಾ. ಈಶ್ವರ ಉಳ್ಳಾಗಡ್ಡಿ

ಧಾರವಾಡ(ದೇವಗಿರಿ) ನೀಟ್ ಪರೀಕ್ಷೆ ಸೇರಿದಂತೆ ಎಲ್ಲ ಕಡೆ ಮಾತೃ ಭಾಷೆ ಹಾಗೂ ಸರ್ಕಾರಿ ಶಾಲೆಯಲ್ಲಿ ಕಲಿತಿರುವ ಮಕ್ಕಳೇ ಮೇಲುಗೈ ಸಾಧಿಸುತ್ತಿದ್ದಾರೆ. ಎಲ್ಲರೂ ಸರ್ಕಾರಿ ಸವಲತ್ತುಗಳನ್ನು ಸದುಪಯೋಗ ಪಡೆಸಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ‌ ಹೇಳಿದರು.

ಶ್ರೀನಯಕುಮಾರ ಶಂಕರ ಪಾಗೋಜಿ ಪ್ರಥಮ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ದೇವಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸಿ ಮಾತನಾಡಿದ ಅವರು, ಬಹಳ ವಿಶೇಷವಾಗಿರುವ ಕಾರ್ಯಕ್ರಮ ಇದು ಸಮಾಜದಲ್ಲಿ ಮಾದರಿಯಗಿದೆ. ಸರ್ಕಾರದ ವತಿಯಿಂದ ನನ್ನ ಶಾಲೆ ನನ್ನ‌ ಜವಾಬ್ದಾರಿ ಅಂತ ಕಾರ್ಯಕ್ರಮ ಇದೆ. ಇದು ಅರ್ಥಪೂರ್ಣವಾಗಿದೆ. ಶಂಕರ ಪಾಗೋಜಿ ತಮ್ಮ ಮಗನ ಹುಟ್ಟು ಹಬ್ಬ ಆಚರಿಸುತ್ತಿರುವುದು ಒಳ್ಳೆಯದು ಶಾಲೆಗಳ ಅಭಿವೃದ್ದಿಗೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ. ಸರ್ಕಾರಿ ಶಾಲೆಗಳ ಸಮಸ್ಯೆಗಳು ಬಗೆ ಹರಿಯುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಲ್ಲಿ ಸಾಕಷ್ಟು ಕನಸುಗಳಿವೆ. ಸಿಇಟಿಯಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆಗಳಿಗೆ ಸಾಕಷ್ಟು ವೆಚ್ಚ ಮಾಡುತ್ತಿದ್ದಾರೆ. ಡಾಕ್ಟರ್, ಇಂಜನೀಯರ್ಸ್, ಅಧಿಕಾರಿಗಳಾಗಬೇಕು. ಮುಂದೆ ನೀವು ಈ ಶಾಲೆಗೆ ದೇಣಿಗೆ ಕೊಡುವಂತೆ ಆಗಬೇಕು ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು.ಒಂದು ಮಗು ಶಾಲೆಯಿಂದ ವಂಚಿತ ಆದರೆ ಅದು ವ್ಯವಸ್ಥೆಯ ಲೋಪವಾದಂತೆ, ಶಿಕ್ಷಕರು ಎಲ್ಲ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಎಲ್ಲ ಶಿಕ್ಷಕರು ಕಡ್ಡಾಯವಾಗಿ ಬೊಧನೆ ಮಾಡಲು ಅವಕಾಶ ಕಲ್ಪಿಸಿದೆ. ಗ್ರಾಮಸ್ಥರು ಸರ್ಕಾರಿ ಶಾಲೆಯ ಸದುಪಯೋಗ ಪಡೆಸಿಕೊಳ್ಳಬೇಕು. ಎನ್ ಸಿಇಆರ್ ಟಿ ಅಧ್ಯಕ್ಷರು ಸರಕಾರಿ ಶಾಲೆಯಲ್ಲಿ ಓದಿರುವ ಮಾತೃ ಭಾಷೆಯಲ್ಲಿ ಕಲಿತಿರುವ ಮಕ್ಕಳೇ ಮೇಲುಗೈ ಸಾಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲರೂ ಸರ್ಕಾರಿ ಸವಲತ್ತು ಸದುಪುಯೋಗ ಪಡೆಸಿಲಪಡೆಸಿಕೊಂಡು ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಹಾರೈಸಿದರು.
ಹಿರಿಯ ಪತ್ರಕರ್ತ ಡಾ. ಬಸವರಾಜ ಹೊಂಗಲ ಪ್ರಾಸ್ತಾವಿಕ ಮಾತನಾಡಿದರು, ಶಿಕ್ಷಕಿ ಪ್ರೇಮಾ ಗುಡಿಮನಿ ನಿರೂಪಿದರು.

ಕಾರ್ಯಕ್ರಮದಲ್ಲಿ ಎಲ್ಲ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಿರೀಶ್ ಪದಕಿ, ಶಿಕ್ಷಣ ಇಲಾಖೆ ಅಧಿಕಾರಿ ಡಿ.ಬಿ. ಕಮ್ಮಾರ, ಎಸ್ ಡಿ ಎಂಸಿ ಅಧ್ಯಕ್ಷ ಅರ್ಜುನ್ ಮುನವಳ್ಳಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಸೋಮಲಿಂಗ ದುರ್ಗಾಯಿ, ಸುನಿಲ್ ದುರ್ಗಾಯಿ, ಮಾಜಿ ಉಪಾಧ್ಯಕ್ಷರಾದ ರುಕ್ಮವ್ವ ಪಾಗೋಜಿ, ಬಾಬು ಪಾಗೋಜಿ, ಗ್ರಾಮದ ಹಿರಿಯರಾದ ತಾನಾಜಿ ದುರ್ಗಾಯಿ, ಬಾಲಪ್ಪ ಇಮ್ಮಡಿ, ಪ್ರಕಾಶ ಯಂಕಮ್ಮನವರ, ಸೋಮಲಿಂಗ ಹರಿಜನ, ದಾವಲ ಪೆಂಡಾರಿ, ವಿಠಲ ಅದರಗುಂಚಿ, ಶಂಕರ ಪಾಗೋಜಿ, ಶಾಲಾ ಮುಖ್ಯ ಶಿಕ್ಷಕಿ ಶಿವಲೀಲಾ ಬಿದ್ನೂರ ಮಠ ಹಾಗೂ ಸಹ ಶಿಕ್ಷಕರು ಹಾಜರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img