Sunday, October 12, 2025
22.2 C
Belagavi

ತುಂಬಿದ ನವಿಲು ತೀರ್ಥ ಜಲಾಶಯ: ಪ್ರವಾಹದ ಆತಂಕದಲ್ಲಿ ರಾಮದುರ್ಗ ತಾಲೂಕು

advertisement

spot_img

ಬೆಳಗಾವಿ: ಜಿಲ್ಲೆಯ ಖಾನಾಪೂರ ತಾಲೂಕಿನ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಅತ್ಯಧಿಕ ಮಳೆಯಿಂದಾಗಿ ನವೀಲುತೀರ್ಥ ಜಲಾಯಶಕ್ಕೆ ಒಳಹರಿವು ಸುಮಾರು 10 ಸಾವಿರ ಕ್ಯೂಸೆಕ್ ದಾಟಿದ್ದು, ಜಲಾಶಯ ಸಂಗ್ರಹ ಸಾಮರ್ಥ್ಯ 2079 ಅಡಿಗಳ ಪೈಕಿ 2077 ಅಧಿಕ ಅಡಿ ತಲುಪಿದ್ದು, ಹೀಗಾಗಿ ಇಂದು ಮತ್ತೇ 10 ಸಾವಿರದಿಂದ 12 ಸಾವಿರ ಕ್ಯೂಸೆಕ್ಸ್ ಗೆ ಹೆಚ್ಚಿಸಿದ್ದು, ನದಿ ಪಾತ್ರದ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.

ತಾಲೂಕಿನಲ್ಲಿ ಹರಿದಿರುವ ಮಲಪ್ರಭೆ ಈಗ ತುಂಬಿ ಹರಿಯುತ್ತಿದ್ದು ಇನ್ನು ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಟ್ಟರೇ ಜನರೆಲ್ಲಾ ಬೇರೆ ಕಡೆಗೆ ಸಾಗುವದಾಗಿದೆ. ಇತ್ತಿಚೆಗೆ ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಪ್ರವಾಹದಿಂದ ಜನರು ತತ್ತರಿಸುವ ಪರಿಸ್ಥಿತಿ ನೋಡಲಾಗಿತ್ತು. ಈಗ ಅದೇ ಸ್ಥಿತಿ ರಾಮದುರ್ಗ ತಾಲೂಕಿಗೆ ಬಂದೊದಗಿದೆ.

ಜಲಾಶಯದ ಗರಿಷ್ಟ ಮಟ್ಟ 2079.5೦ ಅಡಿ ಇದ್ದು ಈಗ ಸಂಪೂರ್ಣ ಭರ್ತಿಯಾಗಲು 2 ಅಡಿಯಷ್ಟು ಮಾತ್ರ ಬಾಕಿ ಇದ್ದು, ಮಂಗಳವಾರ ಜಲಾಶಯದಿಂದ 12 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಮಳೆ ಹೆಚ್ಚಾದರೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

12 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಹತ್ತಿರದ ಹಳೇ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸಂಚಾರವನ್ನು ನಿಷೇದಿಸಲಾಗಿದೆ. ಅಲ್ಲದೇ ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಅನೇಕ ಹೊಲಗಳಿಗೆ ನೀರು ನುಗ್ಗಿದ್ದು ಬೆಳೆಯಲ್ಲಾ ನೀರುಪಾಲಾಗಿವೆ.  ಮಳೆ ಹೆಚ್ಚಾಗಿ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಬಿಟ್ಟರೇ ರಾಮದುರ್ಗ ಪಟ್ಟಣದ ಪಡಕೋಟಿ, ಕಿಲಬನೂರ, ನೇಕಾರ ಪೇಠೆ ಸೇರಿದಂತೆ ತಾಲೂಕಿನ ಸಾಕಷ್ಟು ಹಳ್ಳಿಗಳು ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ.

ಈಗಾಗಲೇ ನದಿಗೆ ಹರಿಬಿಟ್ಟ 12 ಸಾವಿರ ಕ್ಯೂಸೆಕ್ ನೀರಿನಿಂದ ನದಿಪಾತ್ರದ ಯಾವುದೆ ಗ್ರಾಮಗಳ ಮನೆಗಳಿಗೆ ನೀರು ನುಗ್ಗಿಲ್ಲ. ರೈತರ ಜಮೀನುಗಳಿಗೆ ಮಾತ್ರ ನೀರು ನುಗ್ಗಿದ್ದು, ಒಳ ಹರಿವು ಪ್ರಮಾಣ ಹೆಚ್ಚಾದರಿಂದ ೧೦ ಸಾವಿರದಿಂದ ೧೨ ಸಾವಿರಕ್ಕೆ ಹೆಚ್ಚಿಸಲಾಗಿದೆ. ನೀರು ಹೆಚ್ಚಳಗೊಂಡರೆ ಯಾವ ಗ್ರಾಮಗಳಿಗೆ ಪ್ರವಾಹ ಉಂಟಾಗಲಿದೆ ಎಂಬುವದನ್ನು ನೋಡಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ತಾಲೂಕಾ ಆಡಳಿತದಿಂದ ಅಗತ್ಯ ಕ್ರಮವಹಿಸಲಾಗುವದು.

ಪ್ರಕಾಶ ಹೊಳೆಪ್ಪಗೋಳ, ತಹಶೀಲ್ದಾರರು ರಾಮದುರ್ಗ.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...
spot_img

Related Articles

Popular Categories

spot_img