Wednesday, July 15, 2026
20.3 C
Belagavi

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

advertisement

spot_img

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಯಾಸಿನ್ ಅವರ ಆತ್ಮಕ್ಕೆ ಶಾಂತಿ ದೊರಕಲಿ

ಬೆಂಗಳೂರು, 

“ಮಾಜಿ ಶಾಸಕ ಸಯ್ಯದ್ ಯಾಸಿನ್ ಅವರು ಜನಪ್ರತಿನಿಧಿಯಾಗಿ ಪ್ರಗತಿಪರ ಕೆಲಸಗಳನ್ನು ಮಾಡಿದವರು. ಒಳ್ಳೆಯ ನಾಯಕರಾಗಿ ಸಮಾಜದ ಹಿತಚಿಂತಕರಾಗಿದ್ದರು. ಯಾಸಿನ್ ಅವರ ಮರಣ ಅತ್ಯಂತ ದುಃಖದ ವಿಚಾರ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದರು.

ಕೇಂದ್ರದ ಮಾಜಿ ಸಚಿವ ಸಿ ಕೆ ಜಾಫರ್ ಷರೀಫ್ ಅವರ ಅಳಿಯ, ಮಾಜಿ ಶಾಸಕ ಸಯ್ಯದ್ ಯಾಸಿನ್ ಅವರು ಭಾನುವಾರ ನಿಧನರಾಗಿದ್ದು, ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಪುಲಕೇಶಿನಗರದ ಕೋಲ್ಸ್ ಪಾರ್ಕ್ ನ ನಿವಾಸಕ್ಕೆ ತೆರಳಿ ಯಾಸಿನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ಮಾಧ್ಯಮಗಳ ಜತೆ ಮಾತನಾಡಿದರು.“ಕಾಂಗ್ರೆಸ್ ಪಕ್ಷ ಅವರ ಕೊಡುಗೆಗಳನ್ನು ಗಮನಿಸಿ ಆರು ಬಾರಿ ಟಿಕೆಟ್ ನೀಡಿತ್ತು. ಅವರು ನನ್ನ ಜೊತೆ ಶಾಸಕರಾಗಿದ್ದವರು. ನಾವೆಲ್ಲ ಒಟ್ಟಿಗೆ ರಾಜಕಾರಣ ಮಾಡಿದ್ದೇವೆ. ಶಾಲಾ ವಿದ್ಯಾಭ್ಯಾಸದ ಕಾಲದಿಂದಲೂ ನನಗೆ ಪರಿಚಿತರು. ಎಲ್ಲಾ ವರ್ಗದ ಜನರ ಪರವಾಗಿ ಕೆಲಸ ಮಾಡಿದ್ದರು” ಎಂದರು.

“ಅವರಿಗೆ ಈ ಮಧ್ಯೆ ಸ್ವಲ್ಪ ಆರೋಗ್ಯ ಕೈಕೊಟ್ಟಿತು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದವರು. ಜಾಫರ್ ಷರೀಫ್ ಅವರ ಕುಟುಂಬದ ಹಿರಿಯ ಸದಸ್ಯನಾಗಿ ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ದೊಡ್ಡ ಪರಂಪರೆ ಹೊಂದಿರುವ ವಂಶ. ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಹೇಳಲಾಗುವುದು” ಎಂದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...

ಗಾನಕೋಗಿಲೆ ಎಸ್ ಜಾನಕಿ ಅವರ ನಿಧನಕ್ಕೆ ಸಿಎಂ ಡಿ ಕೆ‌ ಶಿವಕುಮಾರ್ ತೀವ್ರ ಸಂತಾಪ

ಗಾನಕೋಗಿಲೆ ಎಸ್ ಜಾನಕಿ ಅವರ ನಿಧನಕ್ಕೆ ಸಿಎಂ ಡಿ ಕೆ‌ ಶಿವಕುಮಾರ್...
spot_img

Related Articles

Popular Categories

spot_img