ಪಿಎಚ್ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ
ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ರಾಜ್ಯಶಾಸ್ತ್ರ ವಿಭಾಗಕ್ಕೆ ಜಹುರಬಾಶಾ ಕಲೆಗಾರ ಅವರು ಸಲ್ಲಿಸಿದ “ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರ: ಸಂಗೊಳ್ಳಿ ರಾಯಣ್ಣ ಮತ್ತು ಮಾಹಾದೇವಪ್ಪ ಪಟ್ಟಣ ಕುರಿತು ಅಧ್ಯಯನ” ಎಂಬ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ಪ್ರದಾನ ಮಾಡಿದೆ.
ಈ ಮಹಾಪ್ರಬಂಧಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಡಿ.ಜಿ. ಹನುಮಂತಪ್ಪ ಅವರು ಮಾರ್ಗದರ್ಶನ ನೀಡಿದ್ದರು.
ಜಹುರಬಾಶಾ ಕಲೆಗಾರ ಅವರ ಈ ಶೈಕ್ಷಣಿಕ ಸಾಧನೆಗೆ ಶಿಕ್ಷಣ ಕ್ಷೇತ್ರದ ಗಣ್ಯರು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ



