ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಯಾದ ಕಳಸಾ ಬಂಡೂರಿ ನಾಲಾ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು ಹಾಗೂ ಯೋಜನೆಯನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಮನವಿ ಮಾಡಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿರುವ ಸರ್ಕಾರ ಮಹದಾಯಿ ಯೋಜನೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಯೋಜನೆ ಅದಕ್ಕಾಗಿ ಮೀಸಲಿಟ್ಟಿರುವ ಹಣ ಮತ್ತು ಯೋಜನೆ ಪ್ರಾರಂಭಿಸಲು ಇರುವ ಕಾನೂನಾತ್ಮಕ ಸಮಸ್ಯೆಗಳ ಪರಿಹಾರದ ಕುರಿತು ಅಧಿಕೃತ ಮಾಹಿತಿ ನೀಡಿದ್ದು.. ಶೀಘ್ರವೇ ಯೋಜನೆ ಆರಂಭಿಸುವ ಭರವಸೆ ನೀಡಿದೆ...
ನಮ್ಮ ಮಹಾಸಂಸ್ಥೆಯ ಮನವಿಗೆ ಸ್ಪಂದಿಸಿರುವ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದಗಳು. ಯೋಜನೆಯನ್ನು ಆದಷ್ಟು ಶೀಘ್ರವಾಗಿ ಆರಂಭಿಸಲು ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ನಿರಂತರವಾಗಿ ಮುಂದುವರೆಯಲಿದೆ…