Sunday, April 12, 2026
28.1 C
Belagavi

ದೇವರಾಜ್ ಅರಸು ಸಾಮಾಜಿಕ ನ್ಯಾಯ, ಸಮಾನತೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ ಮಹಾನ್ ಚೇತನ: ಸಿದ್ದರಾಮಯ್ಯ ಬಣ್ಣನೆ

advertisement

spot_img

ಮುಖ್ಯಮಂತ್ರಿಗಳಿಂದ ಕಲ್ಲೆ ಶಿವೋತ್ತಮ ರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ..

ಬೆಂಗಳೂರು : ದಿ.ದೇವರಾಜ್ ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯ ತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಹಾಗೂ ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ : ಗಡಿ ಭಾಗದಲ್ಲಿ ಕನ್ನಡ ಕಟ್ಟುವ ಕಾಯಕದಲ್ಲಿ ಬಿಳ್ಳೂರ ಮಠದ ಕಾರ್ಯ ಅನನ್ಯ: ಸೋಮಣ್ಣ ಬೇವಿನಮರದ 

ದೇವರಾಜ ಅರಸು ಅವರು ಎಂಟು ವರ್ಷಗಳ ಕಾಲ ಈ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಅವರ ನಂತರ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದು ನಾನೇ. ಅವರಂತೆ ನಾನೂ ಮುಖ್ಯಮಂತ್ರಿಯಾಗಿ 5 ವರ್ಷಗಳನ್ನು ಪೂರೈಸಿದ್ದೇನೆ. ಈ ವಿಚಾರದಲ್ಲಿ ನಮ್ಮಿಬ್ಬರಿಗೂ ಸಾಮ್ಯತೆ ಇದೆ ಎಂದರು. ದೇವರಾಜ ಅರಸು ಅವರು ರಾಜಕೀಯ ಸ್ವಾತಂತ್ರö್ಯಕ್ಕೆ ಅರ್ಥ ಬರಲು ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರಕಬೇಕೆಂದು ನಂಬಿದ್ದರು. ಇವುಗಳಿಲ್ಲದೇ ರಾಜಕೀಯ ಸ್ವಾತಂತ್ರ್ಯ ಸಾಧ್ಯವಿಲ್ಲ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರೂ ಹೇಳಿದ್ದರು. ಸಮಾಜದಲ್ಲಿ ಎಲ್ಲಿಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಸೌಧ ಗಟ್ಟಿಯಾಗಿರಲು ಸಾಧ್ಯವಿಲ್ಲ. ಅಸಮಾನತೆಯಿಂದ ನರಳುವ ಜನ ಎಂದಾದರೂ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಹೇಳಿದ್ದರು. ಈ ವಿಚಾರದಲ್ಲಿ ಅಪಾರವಾದ ನಂಬಿಕೆಯನ್ನಿಟ್ಟವರು ದೇವರಾಜ ಅರಸು ಎಂದರು.

ಆರ್ಥಿಕ, ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಪ್ರಾಮಾಣಿಕ ಯತ್ನ..

ಅರಸು ಅವರು ಆರ್ಥಿಕ, ಸಾಮಾಜಿಕ ಅಸಮಾನತೆಯನ್ನು ಅನುಭವಿಸದಿದ್ದರೂ ಈ ವಿಚಾರಗಳಲ್ಲಿ ನಂಬಿಕೆ ಇರಿಸಿಕೊಂಡಿದ್ದರಲ್ಲದೇ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರು. ಅವರು ಮುಖ್ಯಮಂತ್ರಿಯಾದಾಗ ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕೆಂದು ಪ್ರತಿಪಾದಿಸಿದ್ದರು. ಜಾತಿ, ವರ್ಗ ವ್ಯವಸ್ಥೆಯಿರುವ ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ ಸಾಮಾಜಿಕ ಶಕ್ತಿ, ಸ್ವಾವಲಂಬನೆ ಬರಬೇಕು. ಅದಿಲ್ಲದೇ ಜಾತಿ, ವರ್ಗ ಯಾವುದೂ ಹೋಗುವುದಿಲ್ಲ ಎಂದರು.

ಚಲನಶೀಲ ಸಮಾಜದಿಂದ ಮಾತ್ರ ಜಾತಿ ವ್ಯವಸ್ಥೆಗೆ ಮುಕ್ತಿ..

ಬಸವಣ್ಣನವರು ಎಷ್ಟು ವರ್ಷಗಳ ಹಿಂದೆ ಇವನಾರವ ಎನ್ನದಿರಿ ಎಂದರು. ಆದರೆ ಜಾತಿ ವ್ಯವಸ್ಥೆಗೆ ಜಡತ್ವ ಇದೆ. ಇದಕ್ಕೆ ಚಲನೆ ಸಿಗಲು ಆರ್ಥಿಕ, ಸಾಮಾಜಿಕ ಬದಲಾವಣೆಗಳು ಆಗಬೇಕು. ಇಲ್ಲದಿದ್ದರೇ ಚಲನತಹಿತವಾಗಿರುತ್ತದೆ. ಬಸವಣ್ಣ, ಬುದ್ಧ, ಗಾಂಧಿ, ಅಂಬೇಡ್ಕರ್, ಯಾರು ಹೇಳಿದರೂ ಜಾತಿ ವ್ಯವಸ್ಥೆ ಹೋಗಿಲ್ಲ. ಚಲನಶೀಲತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ಹೋಗಲು ಸಾಧ್ಯ. ಅದು ಅಷ್ಟು ಸುಲಭವಾಗಿ ಹೋಗುವಂತಿಲ್ಲ. ಇದಕ್ಕೆ ನೀರೆರೆಯುವ ಸಮಾಜಿಕ ಪಟ್ಟಭದ್ರ ಹಿತಾಸಕ್ತರು ಕೂಡ ಸಮಾಜದಲ್ಲಿ ಇದ್ದಾರೆ. ಇದು ಬದಲಾಗಲು ಸಾಮಾಜಿಕ ನ್ಯಾಯ, ಸಮಾನ ಅವಕಾಶಗಳು ಹಾಗೂ ಆರ್ಥಿಕ, ಸಮಾಜಿಕವಾಗಿ ಶಕ್ತಿ ಬರಬೇಕು. ಇದು ಬಾರದೇ ಜಾತಿ, ವರ್ಗ ವ್ಯವಸ್ಥೆ ಹೋಗುವುದಿಲ್ಲ. ಅರಸು ಅವರು ದಲಿತರು, ಬಡವರು, ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಿದ್ದಾರೆ.

ಉಳುವವನಿಗೆ ಭೂಮಿ- ಭೂ ಸುಧಾರಣೆ ಕಾಯ್ದೆ ಜಾರಿ ಸುಲಭದ ಮಾತಾಗಿರಲಿಲ್ಲ..

ವಿರೋಧದ ನಡುವೆಯೂ ಭೂ ಸುಧಾರಣೆ ಕಾಯ್ದೆಯ ಉಳುವವನಿಗೆ ಭೂಮಿ ಎನ್ನುವ ಕಾನೂನನ್ನು ಜಾರಿ ಮಾಡುವುದು ಸುಲಭದ ಮಾತಾಗಿರಲಿಲ್ಲ. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದವರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಜಾರಿ ಮಾಡಿದ್ದನ್ನು ಮೆಚ್ಚಲೇಬೇಕಾದ ಕೆಲಸ. ವಿಧಾನಸೌಧ ಕೆಲವೇ ಜನರ ಪ್ರಾತಿನಿಧಿಕ ಸಭೆಯಾಗಿರುವುದನ್ನು ಮನಗಂಡ ಅರಸುರವರು ಹಿಂದುಳಿದವರೂ ವಿಧಾನಸೌದದ ಮೆಟ್ಟಿಲನ್ನು ಹತ್ತುವಂತೆ ಮಾಡಿದರು. ಜೀತಪದ್ಧತಿ ಹಾಗೂ ಮಲಹೊರುವ ಪದ್ಧತಿ ನಿಷೇಧ, ಋಣಪರಿಹಾರ ಕಾಯ್ದೆ ಜಾರಿಗೆ ತಂದರು.

Chief Minister Siddaramaiah

ಅನ್ನಕ್ಕಾಗಿ ಬಡವರು ಕೈಯೊಡ್ಡಬಾರದೆಂದು ಅನ್ನಭಾಗ್ಯ ಯೋಜನೆ ಜಾರಿ..

ಅಕ್ಕಿ ಬಳಸುವುದೂ ಶ್ರೀಮಂತರ ಸ್ವತ್ತಾಗಿದ್ದ ಕಾಲದಲ್ಲಿ, ಹಿಂದುಳಿದವರಿಗೆ ಅನ್ನವೂ ಉಣ್ಣುವ ಪರಿಸ್ಥಿರಿಯಿರಲಿಲ್ಲ. ಆದ್ದರಿಂದ ರಾಜ್ಯದಲ್ಲಿ ಯಾರೊಬ್ಬರೂ ಅನ್ನಕ್ಕಾಗಿ ಕೈಒಡ್ಡಬಾರದೆಂಬ ಸದುದ್ದೇಶದಿಂದ ಅನ್ನಭಾಗ್ಯ ಯೋಜನೆಗೆಯನ್ನು ನಾನು ಜಾರಿಗೆ ತಂದೆನು. ಪ್ರಸ್ತುತ ಅನ್ನಭಾಗ್ಯಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುತ್ತಿದೆ.

ಇಡೀ ದೇಶದಲ್ಲಿ ಕರ್ನಾಟಕ ತಲಾ ಆದಾಯದಲ್ಲಿ ಒಂದನೇ ಸ್ಥಾನ..

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹಲವು ಟೀಕೆಗಳು ಕೇಳಿಬಂದವು. ಬಡವರಿಗೆ ತಿಂಗಳಿಗೆ 5 ರಿಂದ 6 ಸಾವಿರ ನೀಡುತ್ತಿರುವುದು ಅಭಿವೃದ್ಧಿಯಲ್ಲವೇ? ಹೆಣ್ಣುಮಕ್ಕಳಿಗೆ ಸ್ವಾವಲಂಬನೆ ನೀಡುವ ಉದ್ದೇಶದಿಂದ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. 2013-14 ರಲ್ಲಿ 1,04,000 ರೂ. ಇದ್ದ ತಲಾದಾಯ, 2024-25 ರಲ್ಲಿ 2,05,000 ರೂ.ಗಳಾಗಿದೆ.ಇಡೀ ದೇಶದಲ್ಲಿ ಕರ್ನಾಟಕ ತಲಾ ಆದಾಯದಲ್ಲಿ ಒಂದನೆ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಇಂತಹ ಸಾಧನೆ ಸಾಧ್ಯವಾಗಿದೆ ಎಂದರು.

ಸಮಾಜ ಪರಿವರ್ತನೆಗೆ ದುಡಿದವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ….

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮ ದಿನವೂ ಇಂದೇ ಆಗಿದೆ. ಭಾರತವನ್ನು 21 ನೇ ಶತಮಾನಕ್ಕೆ ಕೊಂಡಯ್ಯಲು ಪ್ರಯತ್ನಿಸಿದ ಮೇರು ನಾಯಕರಾಗಿದ್ದರು. ಮಹಿಳೆಯರಿಗೆ, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ತರಲು ಸಂವಿಧಾನದಲ್ಲಿ ತಿದ್ದುಪಡಿ ತಂದರು. ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ರಾಜೀವ್ ಗಾಂಧಿಯವರೇ ಮೂಲ ಕಾರಣ. ಸಮಾಜದ ಪರಿವರ್ತನೆಗೆ ಶ್ರಮವಹಿಸಿರುವವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಆದ್ದರಿಂದ ದೇವರಾಜ್ ಅರಸ್ ಹಾಗೂ ರಾಜೀವ್ ಗಾಂಧಿಯಂತಹ ಮಹಾನ್ ಚೇತನಗಳು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಾಗಿದೆ ಎಂದರು.

ಯೋಗ್ಯ ವ್ಯಕ್ತಿಯನ್ನು ಪ್ರಶಸ್ತಿಗೆ ಆಯ್ಕೆ ಸಂತಸ ತಂದಿದೆ..

ದೇವರಾಜ ಅರಸು ಅವರ ಹೆಸರಿನಲ್ಲಿ ಸರ್ಕಾರ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ವರ್ಷ ಹಿರಿಯ ಪತ್ರಕರ್ತರಾದ ಕಲ್ಲೆ ಶಿವೋತ್ತಮ ರಾವ್ ಅವರು ಆಯ್ಕೆಯಾಗಿರುವುದು ಸಂತೋಷದ ವಿಚಾರ. ಅವರಿಗೆ ಬಹಳ ಹಿಂದೆಯೇ ಈ ಪ್ರಶಸ್ತಿ ದೊರೆಯಬೇಕಿತ್ತು. ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಿರುವುದು ನನಗೆ ಅತೀವ ಸಂತಸ ತಂದಿದೆ ಎಂದರು. ಕಲ್ಲೆ ಶಿವೋತ್ತಮ ರಾವ್ ಅವರೂ ಸಮಾಜವಾದಿ ಹಿನ್ನೆಲೆಯಿಂದ ಬಂದವರು. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದು, ಸರ್ಕಾರವನ್ನು ಯಾವುದೇ ಮುಲಾಜಿಲ್ಲದೇ ನೇರವಾಗಿ ಟೀಕಿಸುತ್ತಿದ್ದರು. ನನ್ನನ್ನೂ ಕೂಡ ಟೀಕಿಸಿದ್ದಾರೆ. ಅವರಿಗೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿ ಕಲ್ಲೆ ಶಿವೋತ್ತಮ ರಾವ್ ಅವರಿಗೆ 96 ವರ್ಷಗಳಾಗಿದ್ದು, ಅವರು ನೂರು ವರ್ಷಕ್ಕೂ ಹೆಚ್ಚು ಕಾಲ ಬಾಳಲಿ ಎಂದು ಹಾರೈಸಿದರು.

ಈ ವೇಳೆ ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಗ್ಯಾರಂಟಿ ಯೋಜನೆಗಳ ರಾಜ್ಯ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್, ಶಾಸಕರಾದ ರಿಜ್ವಾನ್ ಅರ್ಷದ್, ವಿಯಾನಂದ ಕಾಶಪ್ಪನವರ್, ಎ.ಆರ್ .ಕೃಷ್ಣಮೂರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗಡೆ, ಮಾಜಿ ಶಾಸಕ ಕೊಂಡಜ್ಜಿ ಮೋಹನ್ ಉಪಸ್ಥಿತರಿದ್ದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img