ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯ ಕುರಿತು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಆ ದೇವರು ಬಂದು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿದರೂ ನಾನು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನ್ನ ಭಾವನೆ ಅದೇ ರೀತಿಯಲ್ಲಿದೆ ಎಂದರು.
ಅಧಿಕಾರವಿದ್ದಾಗ ಹೆಜ್ಜೆ ಗುರುತು ಬಿಟ್ಟು ಹೋಗಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಹೇಳಿದ್ದಾರೆ.
ರೈಲ್ವೆ ಯೋಜನೆಗಳನ್ನು ಜಿಲ್ಲೆಗೆ ತರುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಬರಲಿದೆ. ನಾನು ರಾಜಕೀಯ ಮಾಡಿಕೊಂಡು, ಯಾರನ್ನೋ ಹೊಗಳಿಕೊಂಡು ಹೋಗಲು ರಾಜಕೀಯಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.