Wednesday, February 11, 2026
30.1 C
Belagavi

ಧರ್ಮ ದ ಕಾಲಂ ನಲ್ಲಿ ಹಿಂದೂ ಜಾತಿ ಕಾಲಂ ರೆಡ್ಡಿ ಅಂತ ಬರೆಯಿಸಿ ಪ್ರಭಾಕರ ರೆಡ್ಡಿ

advertisement

spot_img

ರಾಮದುರ್ಗ:ರಡ್ಡಿ ಸಮುದಾಯ ಅಂದ ತಕ್ಷಣ ಎಲ್ಲರೂ ಶ್ರೀಮಂತರಿರುವುದಿಲ್ಲ. ನಮ್ಮ ಸಮುದಾಯದಲ್ಲಿ ಸಾಕಷ್ಟು ಬಡವರಿದ್ದಾರೆ. ಅವರ ಅಭಿವೃದ್ಧಿಗೆ ಸರಕಾರ ರೆಡ್ಡಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಸಮಾಜದ ಜನತೆಯ ಪ್ರಗತಿಗೆ ಸಹಕಾರ ನೀಡಬೇಕು ಎಂದು ರಡ್ಡಿ ಜನಸಂಘದ ರಾಜ್ಯಾಧ್ಯಕ್ಷ ಪ್ರಭಾಕರ ರೆಡ್ಡಿ ಹೇಳಿದರು.ಪಟ್ಟಣದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಾಂತರಾಜ ಆಯೋಗ ರೆಡ್ಡಿ ಸಮುದಾಯದ ಆರ್ಥಿಕ ಹಾಗೂ ಅಂಕಿ ಸಂಖ್ಯೆಗಳ ಕುರಿತು ನಿಖರ ಮಾಹಿತಿ ಸರಕಾರಕ್ಕೆ ಸಲ್ಲಿಸಿಲ್ಲ. 35-40 ಲಕ್ಷ ಜನಸಂಖ್ಯೆ ಹೊಂದಿದ ರಡ್ಡಿ ಸಮುದಾಯವನ್ನು ಕೇವಲ 7 ಲಕ್ಷ ಜನಸಂಖ್ಯೆಗೆ ಸೀಮಿತಗೊಳಿಸಲಾಗಿದೆ. ಕಾಂತರಾಜ ಆಯೋಗದ ವರದಿಯಿಂದ ಸಮುದಾಯ ಅಸಮಾಧಾನಗೊಂಡಿದೆ. ಸರಕಾರ ರಾಜ್ಯದ ಉದ್ದಗಲಕ್ಕೂ ಮೂಲೆ, ಮೂಲೆಯಲ್ಲಿರುವ ಸಮುದಾಯದ ಜನತೆಯನ್ನು ಗುರುತಿಸಿ, ನೈಜ ಸಮೀಕ್ಷೆ ನಡೆಸಲು ಸರಕಾರ ಮುಂದಾಗಬೇಕು.

ಪ್ರಸ್ತುತ ಸರಕಾರ ನಡೆಸುತ್ತಿರುವ ಜಾತಿ ಜನಗಣತಿ ಸಮೀಕ್ಷೆಯ ಜಾತಿ 1105 ಕಾಲಂನಲ್ಲಿ ಸಮಾಜ ರಡ್ಡಿ ಎಂದು ಧರ್ಮ ಎಂದಲ್ಲಿ ಹಿಂದು ಎಂದು ಸಮುದಾಯದ,ಜನತೆ ಬರೆಯಿಸಬೇಕು. ಯಾವುದೇ ಕಾರಣಕ್ಕೂ ಉಪ ಪಂಗಡಗಳ ಹೆಸರು ಬರೆಯಿಸಬಾರದು ಎಂದು ಮನವಿ ಮಾಡಿದ ಅವರು, ರಡ್ಡಿ ಜನಸಂಘ ಸ್ಥಾಪನೆಯಾಗಿ ಸೆಪ್ಟೆಂಬರ-24 ಕ್ಕೆ ಸುಮಾರು 100 ವರ್ಷ ಪೂರೈಸುತ್ತಿದ್ದು, ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸರ್ವ ಜನನಾಯಕರನ್ನು ಕರೆದು ಬೆಂಗಳೂರಿನ ಅರಮನೆ ಆವರಣದಲ್ಲಿ ಸೆಪ್ಟೆಂಬರ-24 ರಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ರಡ್ಡಿ ಸಮುದಾಯದ ರಾಜ್ಯ ಹಾಗೂ ತಾಲೂಕಿನ ಸಮಸ್ತ ಸಮಾಜ ಬಾಂಧವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೆ ಸಹಕಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಪ್ರಭಾಕರ ರಡ್ಡಿ ಮನವಿ ಮಾಡಿದರು.

ಸಮಾಜದ ಈ ಸಂದರ್ಭದಲ್ಲಿ ರಡ್ಡಿ ಜನಸಂಘದ ಶಾಂತರಾಜು, ರಡ್ಡಿ ತಾಲೂಕಾಧ್ಯಕ್ಷ ಜ್ಞಾನೇಶ್ವರ ಮೇಲಪ್ಪಗೋಳ, ಕಲ್ಲಣ್ಣ ವಜ್ರಮಟ್ಟಿ, ರಾಜಶೇಖರ ತೋಳಗಟ್ಟಿ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರಿದ್ದರು.

Hot this week

ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ‌ ಮನವಿ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ...

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

Topics

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....
spot_img

Related Articles

Popular Categories

spot_img