Friday, July 17, 2026
26.5 C
Belagavi

ಬಿಡಿಸಿಸಿ ಬ್ಯಾಂಕ್ ಚುನಾವಣೆ ಅವಿರೋಧ ಆಯ್ಕೆಗೆ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ.

advertisement

spot_img

ಬಿಡಿಸಿಸಿ ಬ್ಯಾಂಕ್ ಚುನಾವಣೆ ಗಂಭೀರವಾಗಿ ಪರಿಗಣಿಸಿರುವೆ, ಅವಿರೋಧ ಆಯ್ಕೆಗೆ ಪ್ರಯತ್ನ: ಶಾಸಕ ಬಾಲಚಂದ್ರ ಜಾರಕಿಹೊಳಿ
ಖಾನಾಪುರದಲ್ಲಿ ನಡೆದ ಸಭೆಯಲ್ಲಿ ಸುಳಿವು ನೀಡಿದ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ:- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಖಾನಾಪೂರ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅಲ್ಲಿನ ಶಾಸಕ ವಿಠ್ಠಲ ಹಲಗೇಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠಯವರೊಂದಿಗೆ ಸುದೀರ್ಘ ಚರ್ಚೆಯನ್ನು ನಡೆಸಿದರು.
ಅಕ್ಟೋಬರ್ 19 ರಂದು ನಡೆಯುವ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ ಕನಿಷ್ಠ 12 ಸ್ಥಾನಗಳನ್ನು ಗೆಲ್ಲಿಸಿಕೊಡುವ ದೃಷ್ಟಿಯಿಂದ ಈಗಾಗಲೇ ಜಿಲ್ಲೆಯ ಎಲ್ಲ ತಾಲ್ಲೂಕು ಕ್ಷೇತ್ರಗಳಿಗೆ ತೆರಳಿ ಪ್ರಚಾರ ಸಭೆಯನ್ನು ನಡೆಸಿರುವ ಬಾಲಚಂದ್ರ ಜಾರಕಿಹೊಳಿಯವರು ಕಗ್ಗಂಟಿರುವ ಅಭ್ಯರ್ಥಿಗಳ ಆಯ್ಕೆಯಲ್ಲಿ ಒಮ್ಮತ ಮೂಡಿಸುವ ಪ್ರಯತ್ನ ಮಾಡುತ್ತಿದ್ದು, ಸಾಧ್ಯವಾದಷ್ಟು ಅವಿರೋಧ ಆಯ್ಕೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದಾರೆ.
ಖಾನಾಪೂರ ತಾಲ್ಲೂಕು ಕ್ಷೇತ್ರದಲ್ಲಿ ಈ ಬಾರಿ ಅವಿರೋಧ ಆಯ್ಕೆಗೆ ಒಲುವು ತೋರಿ ಈಗಾಗಲೇ ಅಭ್ಯರ್ಥಿಯಾಗಿರುವ ಹಾಲಿ ನಿರ್ದೇಶಕ ಮತ್ತು ಮಾಜಿ ಶಾಸಕ ಅರವಿಂದ ಪಾಟೀಲ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಸಂಬಂಧ ಹಲಗೇಕರ ಮತ್ತು ಹಟ್ಟಿಹೊಳಿ ಅವರೊಂದಿಗೆ ಮಾತುಕತೆಯನ್ನು ನಡೆಸಿದ್ದು, ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಬಯಸಿದ್ದ ಹಟ್ಟಿಹೊಳಿ ಅವರನ್ನು ಹಿಂದೆ ಸರಿಸುವಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಯಶಸ್ವಿಯಾಗಿದ್ದಾರೆ.

ಪಕ್ಷಾತೀತವಾಗಿ ನಡೆಯುತ್ತಿರುವ ಈ ಚುನಾವಣೆಯಲ್ಲಿ ತಮ್ಮ ನೇತೃತ್ವದ ಅಭ್ಯರ್ಥಿಗಳನ್ನು ಗೆಲ್ಲಿಸಿ ತರಲು ಬಾಲಚಂದ್ರ ಜಾರಕಿಹೊಳಿಯವರು ಇತರೆ ಪಕ್ಷಗಳ ಮುಖಂಡರನ್ನು ಸಂಪರ್ಕ ಮಾಡುತ್ತಿದ್ದು, ಬಾಲಚಂದ್ರ ಜಾರಕಿಹೊಳಿಯವರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸವನ್ನು ಆ ಮುಖಂಡರು ಮಾಡುತ್ತಿದ್ದು, ಅರವಿಂದ ಪಾಟೀಲ ಅವರ ಅವಿರೋಧ ಆಯ್ಕೆಗೆ ಅನುಕೂಲ ಮಾಡಿಕೊಡುವಂತೆ ಹಲಗೇಕರ ಹಾಗೂ ಹಟ್ಟಿಹೊಳಿ ಅವರನ್ನು ಮನವೊಲಿಸುವಲ್ಲಿ ಬಾಲಚಂದ್ರ ಜಾರಕಿಹೊಳಿಯವರು ಯಶಸ್ವಿಯಾಗಿದ್ದಾರೆ.

ಸಂಧಾನದ ಪ್ರಕ್ರಿಯೆಯಲ್ಲಿ ಖಾನಾಪೂರ ಬ್ಲಾಕ್ ಬಿಜೆಪಿ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮುಖಂಡರಾದ ಪ್ರಮೋದ ಕೋಚಾರಿ, ಸಂಜಯ ಕೊಬಲ, ಧನಶ್ರೀ ಸರದೇಸಾಯಿ ಸೇರಿದಂತೆ ತಾಲ್ಲೂಕಿನ ವಿವಿಧ ಪಿಕೆಪಿಎಸ್ ಅಧ್ಯಕ್ಷರು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img