ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನವೆಂಬರ್ 19ರಂದು ನಡೆಯಲಿರುವ ಸುವರ್ಣ ಮಹೋತ್ಸವ ಸಮಾರಂಭದ ಪೂರ್ವಭಾವಿ ಸಭೆಯನ್ನು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ನಡೆಸಲಾಯಿತು.ಈ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚೆ ನಡೆಸಲಾಯಿತು. ರಾಜ್ಯದ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿಯೂ ಅಕ್ಟೋಬರ್ 2 ರಿಂದ ನವೆಂಬರ್ 19 ರವರೆಗೆ 50ರ ಸಂಭ್ರಮವನ್ನು ಹಬ್ಬದ ಸಂಭ್ರಮದಂತೆ ಆಚರಿಸುವಂತೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ಜಂಟಿ ನಿರ್ದೇಶಕ ಹಾಗೂ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಜಂಟಿ ನಿರ್ದೇಶಕರಾದ ಎಂ.ಜಿ. ಪಾಲಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.