Friday, July 17, 2026
25.1 C
Belagavi

ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ವಹಿಸಿ: ಬಸವರಾಜ ಬೊಮ್ಮಾಯಿ

advertisement

spot_img

ಬೆಂಗಳೂರು: ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಆಗ್ರಹಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ ವಿಪರೀತ ಮಳೆ ಬಿದ್ದು ರಾಜ್ಯದ ಬಹುತೇಕ ಬೆಳೆಗಳು ನಾಶವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ರೈತರಿಗೆ ಎರಡು ವರ್ಷವೂ ಕೂಡ ನಷ್ಟವಾಗಿದ್ದು ಮೆಕ್ಕೆಜೋಳ, ಸೊಯಾಬಿನ್, ಹೆಸರು, ಈರುಳ್ಳಿ ಬೆಳೆ ನಾಶವಾಗಿದೆ. ಕಳೆದ ವರ್ಷ ಮಳೆಯಿಂದ ನಷ್ಟವಾದ ಬೆಳೆಗೆ ಯಾವುದೇ ಪರಿಹಾರ ಸಿಕ್ಕಿರುವುದಿಲ್ಲ. ಮೊನ್ನೆ ತಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿಯನ್ನು ಸಲ್ಲಿಸಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ, ವಾಸ್ತವಾಂಶ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ.
ಬೆಳೆ ನಷ್ಟ ಪರಿಹಾರ ಸರ್ವೆ ಕಾರ್ಯ ಸಮರ್ಪಕವಾಗಿ ನ್ಯಾಯ ಸಮ್ಮತವಾಗಿ ನಡೆದಿರುವುದಿಲ್ಲ. ಕೃಷಿ, ಕಂದಾಯ ಮತ್ತು ಸಾಂಖಿಕ ಇಲಾಖೆ ಅಧಿಕಾರಿಗಳು ವ್ಯಾಪಕವಾಗಿ ರೈತರ ಜಮೀನಿನಲ್ಲಿ ಪರೀಕ್ಷೆ ಮಾಡದೇ ಸರ್ಕಾರಕ್ಕೆ ವರದಿ ಸಲ್ಲಿಸಿರುತ್ತಾರೆ. ಇದರ ಪರಿಣಾಮವಾಗಿ ಹಲವಾರು ತಾಲೂಕುಗಳಲ್ಲಿ ಒಟ್ಟು ಬಿತ್ತನೆಯಾದ ಪ್ರದೇಶದ ಶೇ 10 % ರಷ್ಟು ಬೆಳೆ ನಾಶ ಆಗಿಲ್ಲ ಎನ್ನುವ ವರದಿ ಬಂದಿದೆ. ಇದು ಸತ್ಯಕ್ಕೆ ದೂರವಾಗಿರುವಂಥದ್ದು ಕೆಲವು ತಾಲೂಕುಗಳಲ್ಲಿ ನಷ್ಟವೇ ಆಗಿಲ್ಲ ಎನ್ನುವುದು ಸತ್ಯಕ್ಕೆ ದೂರವಾಗಿದೆ. ಉದಾಹರಣೆಗೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಸಾಕಷ್ಟು ಬೆಳೆ ನಷ್ಟವಾಗಿದ್ದರೂ ನಷ್ಟವಾಗಿಲ್ಲ ಎಂದು ವರದಿ ನೀಡಿದ್ದಾರೆ. ರಾಜ್ಯಾದ್ಯಂತ ಇದನ್ನು ಕೂಡಲೇ ಸರಿಪಡಿಸಬೆಕು ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೆಕ್ಕೆಜೋಳ ಖರೀದಿಗೆ ನಿರ್ದೇಶನ ನೀಡಿ
ರಾಜ್ಯದಲ್ಲಿ ಮೆಕ್ಕೆ ಜೋಳ ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದು ಕಳೆದ ವರ್ಷ 54 ಲಕ್ಷ ಮೆಟ್ರಿಕ್ ಟನ್ ಬಂದಿದ್ದು, ಈ ವರ್ಷವೂ ಅಷ್ಟೇ ಉತ್ಪನ್ನ ಬರುವ ನಿರೀಕ್ಷೆ ಇದೆ. ಈ ವರ್ಷ ಮೆಕ್ಕೆಜೋಳದ ಬೆಲೆ ಸಂಪೂರ್ಣ ಕುಸಿದಿದೆ. ಅದು ಪ್ರತಿ ಕ್ವಿಂಟಾಲ್ ಗೆ 1600 ರೂ. ಗೆ ಇಳಿದಿರುವುದು ರೈತರಿಗೆ ಆಘಾತ ತಂದಿದೆ. ಕೇಂದ್ರ ಸರ್ಕಾರ ಈಗಾಗಲೇ ಎಂಎಸ್ ಪಿ 2400 ರೂ. ಘೋಷಣೆ ಮಾಡಿದೆ. ರೈತರು ಇದರ ಮೇಲೆ ರಾಜ್ಯ ಸರ್ಕಾರ ಕನಿಷ್ಠ 500 ರೂ. ಪ್ರತಿ ಕ್ವಿಂಟಾಲ್ ಗೆ ಕೊಡಬೇಕೆಂದು ಎಲ್ಲ ಜಿಲ್ಲೆಗಳಲ್ಲಿ ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರದ ನಿರ್ದೆಶನಕ್ಕೆ ಕಾಯದೇ ಮೆಕ್ಕೆ ಜೋಳ ಖರೀದಿಸಿ ಅದು ಹಾಳಾಗದೇ ಇರುವ ಬೆಳೆ ಇರುವುದರಿಂದ ಸೂಕ್ತ ಮಾರುಕಟ್ಟೆ ದರ ಹೆಚ್ಚಾದಾಗ ರಾಜ್ಯ ಸರ್ಕಾರ ಮಾರಬಹುದು. ನಂತರ ಕೇಂದ್ರಕ್ಕೆ ವರದಿ ಕಳುಹಿಸಬಹುದು. ಈ ಬಗ್ಗೆ ಕೂಡಲೆ ಒಂದು ನಿರ್ಧಾರ ಮಾಡಿ ಖರೀದಿಗೆ ಸೂಕ್ತ ನಿರ್ದೇಶನ ನೀಡಲು ವಿನಂತಿಸಿಕೊಂಡಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img