Wednesday, August 12, 2026
20.7 C
Belagavi

ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್: ಬಸವರಾಜ ಬೊಮ್ಮಾಯಿ

advertisement

spot_img

ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್: ಬಸವರಾಜ ಬೊಮ್ಮಾಯಿ

ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರತವನ್ನು ವಿಶ್ವದ 3 ನೇ ಆರ್ಥಿಕ ಶಕ್ತಿಯನ್ನಾಗಿ ಮಾಡಲು ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಂದ್ರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ನಾಗರಿಕರ ಸಾಮರ್ಥ್ಯವನ್ನು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಅಳವಡಿಸಲು ಯೋಜನೆಗಳನ್ನು ಹಲವಾರು ನೀತಿಗಳನ್ನು ಈ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಭವಿಷ್ಯದ ಚಾಂಪಿಯನ್ ಗಳಿಗಾಗಿ ಸುಮಾರು 10 ಸಾವಿರ ಕೋಟಿ ರೂ. ಆರ್ಥಿಕ ನೆರವು ಕೊಡುವಂತಹ ಯೋಜನೆ ಮಾಡಿದ್ದಾರೆ. ಆರ್ಥಿಕ ಅಭಿವೃದ್ಧಿ ಸ್ಥೀರಿಕರಣ ಮತ್ತು ಹಣದುಬ್ಬರ ನಿಯಂತ್ರಣ ಮಾಡುವುದು, ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ 7.4 ಆರ್ಥಿಕ ಬೆಳವಣಿಗೆಯನ್ನು ಮುಂದುವರೆಸಿ ಎಲ್ಲ ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.
ಸಣ್ಣ ಕೈಗಾರಿಕೆಗೆ ವಿಶೇಷವಾದ ಒತ್ತು ಕೊಟ್ಟಿದ್ದಾರೆ. ಟೆಕ್ಸ್ ಟೈಲ್, ಚರ್ಮದ ಉತ್ಪನ್ನಗಳು, ಐಟಿ ಬಿಟಿ ಡಾಟಾ ಸೆಂಟರ್ ಗಳಿಗೆ ಬಹಳಷ್ಟು ಒತ್ತು ಕೊಟ್ಟಿದ್ದಾರೆ. ವಿಶೇಷವಾಗಿ ನಗರ ಮೂಲಸೌಕರ್ಯ ಕ್ಕೆ ಬಹಳ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಬಹಳಷ್ಟು ಒತ್ತು ಕೊಟ್ಟಿದೆ. ಸುಮಾರು 12.5 ಲಕ್ಷ ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ಹೂಡುತ್ತಿದೆ. ವಿತ್ತೀಯ ಕೊರತೆಯನ್ನು 4.3ಗೆ ನಿಯಂತ್ರಣ ಮಾಡಿರುವುದು ದೊಡ್ಡ ಸಾಧನೆ. ಮೂಲ ಸೌಕರ್ಯದಲ್ಲಿ ರಸ್ತೆಹೈ ಸ್ಪೀಡ್ ರೈಲುಗಳು, 20 ಜಲ ಸಾರಿಗೆ ಒತ್ತು ಕೊಟ್ಟಿರುವುದು ಸಾರಿಗೆಯಲ್ಲಿ ಹೊಸ ಆಯಾಮ ತೆರೆದಂತಾಗಿದೆ. ಅಭಿವೃದ್ಧಿ ಪಥದಲ್ಲಿ ಭಾರತವನ್ನು ಆರ್ಥಿಕವಾಗಿ ವಿಶ್ವದ ಮೂರನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಹೇಳಿದರು.
ವಿದೇಶಗಳಿಂದ ಬರುವ ವಸ್ತುಗಳಿಗೆ ಸಂಪೂರ್ಣ ತೆರಿಗೆ ಫ್ರೀ ಮಾಡಿದ್ದಾರೆ. ನಾಲ್ಕು ಕರ್ತವ್ಯ ಪಥ ಅಂತ ಹೇಳಿದ್ದಾರೆ. ಮೊದಲನೆಯದಾಗಿ ಆರ್ಥಿಕ ಬೆಳವಣಿಗೆ, ಎರಡನೇಯದು ಸಬ್ ಬೆ ಸಾಥ್ ಸಬ್ ಕೆ ವಿಕಾಸ್ ಎನ್ನುವ ತತ್ವದಲ್ಲಿ ಮಹಿಳೆಯರು, ಯುವಕರು ರೈತರಿಗೆ ಎಲ್ಲರನ್ನು ಒಳಗೊಂಡಿರುವ ಈ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img