Thursday, August 13, 2026
25.1 C
Belagavi

ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ:ಬಸವರಾಜ ಬೊಮ್ಮಾಯಿ

advertisement

spot_img

ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ:ಬಸವರಾಜ ಬೊಮ್ಮಾಯಿ

ಇವತ್ತಿನ ದಿನಗಳಲ್ಲಿ ಧರ್ಮ ಜಾಗೃತಿ ಬಹಳ ಮುಖ್ಯ:ಬಸವರಾಜ ಬೊಮ್ಮಾಯಿ

ಹಾವೇರಿ(ಸವಣೂರು): ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ವ್ಯವಸ್ಥೆ ಬದಲಾವಣೆಯಾಗಿ ರೈತ ಪರ ಸರ್ಕಾರ ಬಂದಾಗ ರೈತರ ಮಕ್ಕಳಿಗೆ ವಿದ್ಯಾನಿಧಿ, ರೈತರಿಗೆ ಡಿಸೆಲ್ ಸಬ್ಸಿಡಿ, ಬೀಜ ಗೊಬ್ಬರಕ್ಕೆ ಸಹಾಯಧನ ನೀಡುವ ಯೋಜನೆಗಳು ಮತ್ತೆ ಜಾರಿಗೆ ಬರುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಮನ್ನಂಗಿ ಗ್ರಾಮದ ಶ್ರೀ ದ್ಯಾಮವ್ವದೇವಿ ದೇವಸ್ಥಾನ ಹಾಗೂ ಆಂಜನೇಯ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಎಲ್ಲಿ ಭಕ್ತಿ ಇದೆ ಅಲ್ಲಿ ತಾಯಂದಿರು ಇರುತ್ತಾರೆ. ಭಕ್ತಿ ಸಂಸ್ಕೃತಿ ನಮ್ಮ ಭಾರತದ ತಾಯಿ, ದ್ಯಾಮವ್ವನ ದೇವಸ್ಥಾನ ಸುಂದರವಾಗಿ ನಿರ್ಮಾಣ ಆಗಿದೆ. ಈ ಊರಿನ ಜನರು ಬಹಳ ದೈವ ಭಕ್ತರಿರುವುದರಿಂದ ಎಲ್ಲ ದೇವಸ್ಥಾನಗಳು ನಿರ್ಮಾಣ ಆಗಿವೆ. ಮಾರುತಿ ದೇವಸ್ಥಾನ. ಪರಮೇಶ್ವರ ದೇವಸ್ಥಾನ, ದ್ಯಾಮವ್ವ, ಮಾಯಮ್ಮನ ದೇವಸ್ಥಾನಗಳ ನಿರ್ಮಾಣ ಆಗಿವೆ ಎಂದು ಹೇಳಿದರು.ಇವತ್ತಿನ ದಿನಮಾನಗಳಲ್ಲಿ ಧರ್ಮ ಜಾಗೃತಿ ಬಹಳ ಮುಖ್ಯವಾಗಿದೆ. ನಮ್ಮ ಬದುಕು ಧರ್ಮದಿಂದ ನಡೆಯಬೇಕು. ನ್ಯಾಯ, ನೀತಿ, ಧರ್ಮ ಈ ಮೂರು ಮನಷ್ಯರಿಗೆ ಅತ್ಯಂತ ಅವಶ್ಯಕತೆ ಇರುವ ಗುಣಗಳು. ಧರ್ಮದಿಂದ ನಡೆಯಬೇಕೆಂದರೆ ಧರ್ಮದ ಜಾಗೃತಿ ಬಹಳ ಮುಖ್ಯ. ನಮ್ಮ ಜನರಿಗೆ ದೈವದಿಂದ ಧರ್ಮ ಹೀಗಾಗಿ ದೇವಸ್ಥಾನಗಳು ಬಹಳ ಮುಖ್ಯ ದೇವಸ್ಥಾನಗಳಿಗೆ ಭಕ್ತರ ನಂಬಿಕೆಯಿಂದ ಶಕ್ತಿ ಬರುತ್ತದೆ. ಎಲ್ಲ ದೇವರ ಕೃಪಾಶೀರ್ವಾದ ನಿಮ್ಮ ನಂಬಿಕೆಯಿಂದ ದೈವದ ಅನುಗೃಹದಿಂದ ಈ ಊರಿಗೆ ಒಳ್ಳೆಯದಾಗುತ್ತದೆ. ಈ ಊರಿನಲ್ಲಿ ರೈತರಿದ್ದಾರೆ. ಕಾಯಕಯೋಗಿಗಳಿದ್ದಾರೆ. ಪಗತಿಪರ ಚಿಂತನೆ ಮಾಡುವ ಯುವಕರಿದ್ದಾರೆ. ಮಹಿಳಾ ಸಂಘಗಳಿವೆ. ನಿಮ್ಮ ಆದಾಯ ಕೃಷಿ ಮೇಲೆ ನಿಂತಿದೆ. ನಿಮ್ ಆದಾಯ ಹೆಚ್ಚಳ ಮಾಡಿಕೊಳ್ಳಬೇಕು ಎಂದು ಹೇಳಿದರು.ನಾನು ಸಿಎಂ ಇದ್ದಾಗ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಮಾಡಿದೆ. 8ನೇ ತರಗತಿಯಿಂದ ಪಿಜಿವರೆಗೂ ಸ್ಕಾಲ‌ರ್ ಶಿಪ್ ನೀಡುತ್ತಿದ್ದೇವು. ಅದರಿಂದ ಸುಮಾರು 11 ಲಕ್ಷ ಮಕ್ಕಳಿಗೆ ಅನುಕೂಲವಾಗಿತ್ತು. ಆ ಯೋಜನೆ ಈಗ ನಿಂತಿದೆ. ಆದರೆ, ಇನ್ನೆರಡು ವರ್ಷದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ವ್ಯವಸ್ಥೆ ಬದಲಾವಣೆಯಾಗಿ ರೈತರ ಸರ್ಕಾರ ಬಂದಾಗ ಮತ್ತೆ ರೈತ ವಿದ್ಯಾನಿಧಿ, ರೈತರಿಗೆ ಡಿಸೆಲ್ ಸಬ್ಸಿಡಿ, ಬೀಜ ಗೊಬ್ಬರಕ್ಕೆ ಸಹಾಯಧನ ನೀಡುವ ಯೋಜನೆಗಳು ಮತ್ತೆ ಜಾರಿಗೆ ಬರುತ್ತವೆ. ಪರಮಪೂಜ್ವರ ಆಶೀರ್ವಾದದಿಂದ ದೇವಸ್ಥಾನಗಳ ಮೂರ್ತಿ ಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯ ಸುಗಮವಾಗಿ ನಡೆಯುತ್ತದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಶ್ರೀ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳು, ಹುಕ್ಕೇರಿ ಮಠ, ಹಾವೇರಿ, ಶ್ರೀ ಮ.ನಿ.ಪ್ರ ಗುರು ಮಹೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಗುರುನಂಜೇಶ್ವರ ಮಠ, ಕೂಡಲ, ಶ್ರೀ ಷ.ಬ್ರ ನಂಜುಂಡ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಗುಬ್ಬಿ ನಂಜುಂಡೇಶ್ವರ ಮಠ, ಹೆರೂರು ಶ್ರೀಗಳವರು ಸಾನಿಧ್ಯ ವಹಿಸಿದ್ದರು. ಹಾಗೂ ಮುಖಂಡರಾದ ರಾಜು ಕುನ್ನೂರ, ಶೋಭಾ ನಿಸ್ಸಿಮಗೌಡ್ರ ಸೇರಿದಂತೆ ಹಲವಾರು ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img