Wednesday, August 12, 2026
20.7 C
Belagavi

ಕೆ ಸಿ ಜನರಲ್ ಆಸ್ಪತ್ರೆಯ ಅವರಣದಲ್ಲಿ ಸುಸಜ್ಜಿತ ಟ್ರಾಮಾ ಆಸ್ಪತ್ರೆ ಮಾರ್ಚ್ ನಲ್ಲಿ ಲೋಕಾರ್ಪಣೆ: ದಿನೇಶ್ ಗುಂಡೂರಾವ್

advertisement

spot_img

ಬೆಂಗಳೂರು:
ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ಕಾಮಗಾರಿ ಹಾಗೂ ಸಮಸ್ಯೆಗಳ ಪರಿಶೀಲನೆ ನಡೆಸಿದರು.

ಬೆಂಗಳೂರು ಉತ್ತರ ಭಾಗ ಮತ್ತು ಸುತ್ತಮುತ್ತಲ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಾರ್ಚ್ ತಿಂಗಳಲ್ಲಿ ಮಲ್ಲೇಶ್ವರಂ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ನೂತನ ಕಟ್ಟಡದಲ್ಲಿ ಪ್ರಾರಂಭವಾಗಲಿದೆ.
50 ಬೆಡ್ ಸೌಲಭ್ಯದ ಟ್ರಾಮಾ ಕೇರ್ ಸೆಂಟರ್ ನಲ್ಲಿ 14 HDU ಹಾಸಿಗೆ, 15 ಐಸಿಯು, 2 ಶಸ್ತ್ರಚಿಕಿತ್ಸೆ ಕೊಠಡಿಯ ಸೌಲಭ್ಯ ಇರಲಿದೆ.ಬ್ಲಡ್ ಬ್ಯಾಂಕ್, ಡಿಎನ್ ಬಿ ಅಧ್ಯಯನಕ್ಕಾಗಿ ನೂತನ ಕಟ್ಟಡ ಸಿದ್ದವಾಗುತ್ತಿದೆ.

ತಾಯಿ ಮಕ್ಕಳ ಆಸ್ಪತ್ರೆಯೂ ಸಹ ಹೊಸ ಸುಸಜ್ಜಿತ ಕಟ್ಟಡದಲ್ಲಿ ಇದೇ ವರ್ಷದ ಡಿಸೆಂಬರ್ ವೇಳೆಗೆ ಲೊಕಾರ್ಪಣೆ ಆಗಲಿದೆ. ಸಿಬ್ಬಂದಿ ಕೊರತೆ ಸರಿ ಮಾಡುತ್ತಿದ್ದೇವೆ. ಅಗತ್ಯ ಬಿದ್ದರೆ ವೈದ್ಯರನ್ನ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳುತ್ತೇವೆ. ಇಲ್ಲಿರುವ ಮಕ್ಕಳ ವಿಶೇಷ ಚಿಕಿತ್ಸಾ ಕೇಂದ್ರದ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.

ಆಸ್ಪತ್ರೆಯ ಆವರಣದಲ್ಲಿರುವ ಜಯದೇವ ಹೃದಯ ಆಸ್ಪತ್ರೆಯ ಕೇಂದ್ರ, ಮಕ್ಕಳ ಐಸಿಯು ಕೇಂದ್ರ, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳಿಂದ ಮಾಹಿತಿ ಪಡೆದರು.

ರಾಜೀವ್ ಗೌಡ ಬಂಧನದ ವಿಚಾರ

ಬಂಧಿಸಿಲ್ಲ ಅಂದ್ರೆ ಅವರೆಲ್ಲೋ ತಪ್ಪಿಸಿಕೊಂಡು ಓಡಾಡುತ್ತಾ ಇದ್ದಾರೆ.
ಬಂಧಿಸೊದಕ್ಕೆ ನಮ್ಮ ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳುತ್ತದೆ.
ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ನಮ್ಮ ಪಕ್ಷನೇ ಆಗಲಿ, ಬೇರೆ ಪಕ್ಷದವರೇ ಆಗಲಿ ತಪ್ಪು ಮಾಡಿದ್ರೆ ಕ್ರಮ ಆಗಲೇಬೇಕು, ಆಗುತ್ತದೆ. ಸಾರ್ವಜನಿಕ ಜೀವನದಲ್ಲಿರುವವರ ವರ್ತನೆ ಸಭ್ಯತೆಯಿಂದ ಕೂಡಿರಬೇಕು.

ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ದತೆ ವಿಚಾರ

ಅವರು ಮುಖ್ಯಮಂತ್ರಿಗಳು ಜೊತೆಗೆ ವಿತ್ತಸಚಿವರು ಹೌದು ಹಾಗಾಗಿ ಸಿದ್ಧತೆ ಮಾಡುತ್ತಿದ್ದಾರೆ.
ಆರ್ಥಿಕವಾಗಿ ನಮಗೆ ಬಹಳಷ್ಟು ಸವಾಲುಗಳು ಇವೆ. ಜಿಎಸ್ ಟಿಯಿಂದ ನಮಗೆ ಬಹಳಷ್ಟು ಕೊರತೆಯಾಗಿದೆ. ಕೇಂದ್ರ ಸರ್ಕಾರ ಯಾವುದೇ ಹೊಸ ಯೋಜನೆಗಳಿಗೆ ಅನುಮೋದನೆ ಕೊಡುತ್ತಿಲ್ಲ. ಕೇಂದ್ರ ಸರ್ಕಾರದಿಂದ ಅನೇಕ ಯೋಜನೆಗಳಿಗೆ ಬಾಕಿ ಇರೋ ದುಡ್ಡನ್ನು ಸಹ ಸರಿಯಾಗಿ ಕೊಟ್ಟಿಲ್ಲ. ಈ ದೇಶದ ಸಂಗ್ರಹವಾಗುವ ಟಾಕ್ಸ್ ನಲ್ಲಿ ದೊಡ್ಡ ಮಟ್ಟದ ಪಾಲು ಕರ್ನಾಟಕ ರಾಜ್ಯದ್ದಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಅದರ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ‌. ಆದರೆ ಕೇಂದ್ರದಿಂದ ಸ್ಪಂದನೆ ಸಿಗುತ್ತಿಲ್ಲ. ಕೇಂದ್ರದ ಸಚಿವರಿಂದಲೂ ಸ್ಪಂದನೆ ಸಿಕ್ತಾ ಇಲ್ಲ,ನರೇಗದಲ್ಲಿಯೂ ಎಲ್ಲ ರಾಜ್ಯಗಳಿಗೂ ಅನ್ಯಾಯ ಆಗುತ್ತದೆ. 40% ರಾಜ್ಯದಿಂದ ಕೊಡಬೇಕು ಅಂತ ಹೊಸ ಕಾನೂನು ಮಾಡಿದ್ದಾರೆ.ಮೊದಲು ಕೇಂದ್ರ ಸರ್ಕಾರದ ಪಾಲು 90% ಇತ್ತು. ಅದನ್ನು ಏಕಾಏಕಿ 60 ಕ್ಕೆ ಇಳಿಸಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇದ್ದಾಗ ಜನರಿಗೆ ಅನುಕೂಲವಾಗಲಿ ಎಂದೂ ಈ ಯೊಜನೆ ತಂದಿತ್ತು. ಕಳೆದ 11 ವರ್ಷದಲ್ಲಿ ಒಂದೂ ಸಹ ಇಂತಹ ಜನೋಪಯೋಗಿ ಯೊಜನೆಯನ್ನು ಕೇಂದ್ರ ಸರ್ಕಾರ ತಂದಿಲ್ಲ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img