ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25 ನೇ ಸಾಲಿನ ವಾರ್ಷಿಕ ಸರ್ವಸಾಮಾನ್ಯ ಸಭೆಯನ್ನ ಬೆಂಗಳೂರು ನಗರದ ಹೊರವಲಯದಲ್ಲಿ ಗರಿ ರೆಸಾರ್ಟ್ ನಲ್ಲಿ ಹಮ್ಮಿಕೊಂಡಿದ್ದು ಸಭೆಯ ಅಧ್ಯಕ್ಷತೆಯನ್ನು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಿವಕುಮಾರ್ ಆರ್ ಮೇಟಿ ಅವರು ವಹಿಸಿಕೊಂಡಿದ್ದು ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರುಗಳಾದ ಬೀಳೂರ್ ಸರ್ ಹಾಗೂ ನೆಗಳೂರ್ ಸರ್ ಮತ್ತು ಪ್ರಧಾನ ಕಾರ್ಯದರ್ಶಿಯಾದ ಶಂಕರ ಪಾಗೋಜಿ ಕೋಶ್ಯಾಧ್ಯಕ್ಷರಾದ ಜೆ ಪಿ ಜಾಲಿ ಗಿಡದ ಅತಿಥಿಗಳಾಗಿ ವೇದಿಕೆಯನ್ನು ಹಂಚಿಕೊಂಡಿದ್ದರು
ಈ ಒಂದು ಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತು ಹಾಗೂ ಸಂಸ್ಥೆಗೆ ಮಂಜೂರಾಗಿರುವ ಜಮೀನಿನ ನೋಂದಣಿ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ಮಹಾಸಂಸ್ಥೆಯ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು ಕಾರ್ಯದರ್ಶಿ ಬಸಯ್ಯನಂದಿಕೋಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು ನಿರ್ದೇಶಕ ವೀರೇಶ್ ಬಳಗೇರ್ ವಂದಿಸಿದರು.