ಜಮಖಂಡಿ ಶಾಸಕ ಜಗದೀಶ ಗುಡುಗುಂಟಿ ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಮಖಂಡಿ ನಗರದ ಎಸ್.ಆರ್.ಎ ಕ್ಲಬ್ ಹತ್ತಿರ ಭಕ್ತ ಕನಕದಾಸರ ವೃತ್ತ, ಮೂರ್ತಿ ಪ್ರತಿಷ್ಠಾಪನೆಗೆ ಅನುಮೋದನೆ ಹಾಗೂ ಅನುದಾನ ಮತ್ತು ಕನಕದಾಸ ವಿದ್ಯಾಸಂಸ್ಥೆಯ ಸಮುದಾಯ ಭವನಕ್ಕೆ 2ಕೋಟಿ ರೂ. ಅನುದಾನಕ್ಕೆ ಬೇಡಿಕೆ ಸಲ್ಲಿಸಿದರು.ಜಮಖಂಡಿ ಮತಕ್ಷೇತ್ರದ ಗ್ರಾಮಾಂತರ ಮತ್ತು ನಗರ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ಧಿ, ವಿಧ್ಯಾರ್ಥಿ ನಿಲಯ, ಶಾಲಾ ಕಟ್ಟಡಗಳ ದುರಸ್ತಿ, ಆಸ್ಪತ್ರೆಗಳ ಮೂಲಭೂತ ಸೌಕರ್ಯಗಳು, ಒಳ ಚರಂಡಿ ದುರಸ್ತಿ, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ಹಲವಾರು ತ್ವರಿತವಾಗಿ ಆಗಬೇಕಾದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಅನುದಾನದಡಿಯಲ್ಲಿ ಕನಿಷ್ಠ 50 ಕೋಟಿ ರೂ. ಗಳನ್ನು ಮಂಜೂರು ಮಾಡಲು ಮನವಿ ಸಲ್ಲಿಸಲಾಯಿತು. ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕ ಸ್ಪಂದಿಸಿದರು, ಶೀಘ್ರವೇ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕಾಂಗ್ರೆಸ್ ಶಾಸಕರಿಗೆ 50ಕೋಟಿ ನೀಡುವಂತೆ ಬಿಜೆಪಿ-ಜೆಡಿಎಸ್ ಶಾಸಕರಿಗೂ ಸಹ 50ಕೋಟಿ ನೀಡುವಂತೆ ಒತ್ತಾಯಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ನಾಗಪ್ಪ ಸನದಿ, ಒ.ಬಿ.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಸಂಗಮೇಶ ದಳವಾಯಿ, ಶ್ರೀ ಬಸವರಾಜ ಕುರಣಿ ಉಪಸ್ಥಿತರಿದ್ದರು.